Kannada News Technology Moto G52 will go on sale through Flipkart and select retail stores Today check offer price and specs
Moto G52: ಇಂದಿನಿಂದ ಮಾರಾಟವಾಗುತ್ತಿದೆ ಬಜೆಟ್ ಬೆಲೆಯ ಈ ಬೊಂಬಾಟ್ ಫೋನ್: ಆಫರ್ ಮಿಸ್ ಮಾಡ್ಬೇಡಿ
ಬಿಡುಗಡೆಗೂ ಮೊದಲೇ ಭರ್ಜರಿ ಸುದ್ದಿಯಲ್ಲಿದ್ದ ಮೋಟೋ ಜಿ52 (Moto G52) ಫೋನ್ ಇಂದಿನಿಂದ ಮಾರಾಟ ಕಾಣುತ್ತಿದೆ. ಇದು ಬಜೆಟ್ ಬೆಲೆಯ ಮತ್ತೊಂದು ಸ್ಮಾರ್ಟ್‌ಫೋನ್. ಹಾಗಾದ್ರೆ ಮೋಟೋ G52 ಫೋನಿನ ಫೀಚರ್ಸ್ ಏನೇನು?, ಬೆಲೆ ಎಷ್ಟು?, ಆಫರ್ ಏನಿದೆ? ಎಂಬುದನ್ನು ನೋಡೋಣ.
ಭಾರತದಲ್ಲಿ ಶವೋಮಿ (Xiaomi), ಸ್ಯಾಮ್ಸಂಗ್, ರಿಯಲ್ ಮಿ ಹಾಗೂ ಒನ್ಪ್ಲಸ್ ನಂತಹ ಘಟಾನುಘಟಿ ಸ್ಮಾರ್ಟ್‌ಫೋನ್ ಬ್ರ್ಯಾಂಡ್ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಈ ಪೈಕಿ ವಾರದ ಹಿಂದೆಯಷ್ಟೆ ಮೋಟೋರೊಲಾಕಂಪನಿ ಭಾರತದ ಮಾರುಕಟ್ಟೆಯಲ್ಲಿ ತನ್ನ ಹೊಸ ಮೋಟೋ ಜಿ52 (Moto G52) ಫೋನ್ ಅನ್ನು ಅನಾವರಣ ಮಾಡಿತ್ತು. ಬಿಡುಗಡೆಗೂ ಮೊದಲೇ ಭರ್ಜರಿ ಸುದ್ದಿಯಲ್ಲಿದ್ದ ಈ ಫೋನ್ ಇಂದಿನಿಂದ ಮಾರಾಟ ಕಾಣುತ್ತಿದೆ. ತ್ರಿಪಲ್ ಕ್ಯಾಮೆರಾ ಸೆಟ್‌ಅಪ್, 90Hz ಡಿಸ್‌ಪ್ಲೇ ರೀಫ್ರೇಶ್ ರೇಟ್, 5,000mAh ಬ್ಯಾಟರಿ ಬ್ಯಾಕ್‌ಅಪ್ ಹೀಗೆ ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಮೊದಲ ಸೇಲ್ ಕಾಣುತ್ತಿದೆ. ಇದು ಬಜೆಟ್ ಬೆಲೆಯ ಮತ್ತೊಂದು ಸ್ಮಾರ್ಟ್‌ಫೋನ್. ಹಾಗಾದ್ರೆ ಮೋಟೋ G52 ಫೋನಿನ ಫೀಚರ್ಸ್ ಏನೇನು?, ಬೆಲೆ ಎಷ್ಟು?, ಆಫರ್ ಏನಿದೆ? ಎಂಬುದನ್ನು ನೋಡೋಣ.
ಮೋಟೋ G52 ಸ್ಮಾರ್ಟ್‌ಫೋನ್ ಭಾರತದಲ್ಲಿ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 4GB RAM ಮತ್ತು 64GB ವೇರಿಯಂಟ್ ಬೆಲೆಯು 14,499 ರೂ. ಆಗಿದೆ. ಹಾಗೆಯೇ 6GB RAM ಮತ್ತು 128GB ಸ್ಟೋರೆಜ್ ಮಾದರಿಗೆ 16,499 ರೂ. ನಿಗದಿ ಮಾಡಲಾಗಿದೆ.
ಈ ಫೋನ್ ಚಾರ್ಕೋಲ್ ಗ್ರೇ ಮತ್ತು ಪಿಂಗಾಣಿ ವೈಟ್ ಸೇರಿದಂತೆ ಎರಡು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಮೊದಲ ಸೇಲ್ ಕಾಣಲಿದೆ. ಇದಕ್ಕೆ ಆಫರ್ ಕೂಡ ಘೋಷಿಸಲಾಗಿದ್ದು ಹೆಚ್ಡಿಎಫ್ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 1,000 ರೂ. ಗಳ ರಿಯಾಯಿತಿ ಸಿಗಲಿದೆ. ಇದರ ಜೊತೆಗೆ ಎಕ್ಸ್ಚೇಂಜ್ ಆಫರ್ ಸಹ ನೀಡಲಾಗಿದೆ.
ಮೋಟೋ G52 ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ.
ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ವಿಶೇಷವಾಗಿ ಮೋಟೋ G52 ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಟರ್ಬೋಪವರ್ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದುಕೊಂಡಿದೆ.
ಇನ್ನು ಈ ಸ್ಮಾರ್ಟ್‌ಫೋನ್ IP52 ರೇಟಿಂಗ್ ಅನ್ನು ಹೊಂದಿದ್ದು, ಡಾಲ್ಬಿ ಅಟ್ಮೋಸ್ ಬೆಂಬಲವನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ನೀಡಲಾಗಿದೆ.