Moto G62 5G: ಅತಿ ಕಡಿಮೆ ಬೆಲೆಯ 5G ಫೋನ್ ಮೋಟೋ G62 ಈಗ ಖರೀದಿಗೆ ಲಭ್ಯ: ಏನಿದೆ ಫೀಚರ್ಸ್?

ಮೋಟೋ G62 ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಯಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 21,999 ರೂ. ನಿಗದಿ ಮಾಡಲಾಗಿದೆ.

Moto G62 5G: ಅತಿ ಕಡಿಮೆ ಬೆಲೆಯ 5G ಫೋನ್ ಮೋಟೋ G62 ಈಗ ಖರೀದಿಗೆ ಲಭ್ಯ: ಏನಿದೆ ಫೀಚರ್ಸ್?
Moto G62
Follow us
| Updated By: Vinay Bhat

Updated on: Aug 19, 2022 | 1:29 PM

ಮೋಟೋರೊಲಾ (Motorola) ಕಂಪನಿಯ ಫೋನ್​ಗೆ ಭಾರತದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ತಯಾರು ಮಾಡುತ್ತಿರುವ ಮೋಟೋ ಒಂದರ ಹಿಂದೆ ಒಂದರಂತೆ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇದೀಗ ಕಳೆದ ವಾರ ಭಾರತದಲ್ಲಿ ಜಿ ಸರಣಿಯಲ್ಲಿ ಬಿಡುಗಡೆ ಮಾಡಿದ ಮೋಟೋ ಜಿ62 (Moto G62) ಫೋನ್ ಇಂದಿನಿಂದ ಖರೀಗೆ ಸಿಗುತ್ತಿದೆ. ಇದು 5ಜಿ ಬೆಂಬಲ ಪಡೆದುಕೊಂಡಿದ್ದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಮೊದಲ ಸೇಲ್ ಪ್ರಯುಕ್ತ ಬೊಂಬಾಟ್ ಆಫರ್ ಕೂಡ ನೀಡಲಾಗಿದ್ದು, ಭರ್ಜರಿ ರಿಯಾತಿಯಲ್ಲಿ ನಿಮ್ಮದಾಗಿಸಬಹುದು.

ಮೋಟೋ G62 ಸ್ಮಾರ್ಟ್‌ಫೋನ್‌ ಭಾರತದ ಮಾರುಕಟ್ಟೆಯಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 21,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಮೊದಲ ಸೇಲ್ ಪ್ರಯುಕ್ತ HDFC ಬ್ಯಾಂಕ್ ಕಾರ್ಡ್ ಮೂಲಕ ಪಡೆದುಕೊಂಡರೆ 1,750 ರೂ. ಗಳ ರಿಯಾಯಿತಿ ಸಿಗಲಿದೆ.

ಈ ಫೋನ್ 6.5 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ದ ಜೊತೆಗೆ 120Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ
Image
WhatsApp: ವಾಟ್ಸ್​ಆ್ಯಪ್​ನಿಂದ ಶಾಕಿಂಗ್ ನ್ಯೂಸ್: ಇನ್ನುಂದೆ ಇರಲ್ಲ ಈ ಫೀಚರ್
Image
Nothing Phone (1): ಬಿಡುಗಡೆ ಆದ ಒಂದೇ ತಿಂಗಳಲ್ಲಿ ಬೆಲೆ ಏರಿಕೆ: ನಥಿಂಗ್ ಫೋನ್ 1ಗೆ ಅಷ್ಟೊಂದು ಡಿಮ್ಯಾಂಡ್?
Image
WhatsApp: ಡಿಲೀಟ್ ಆದ ಮೆಸೇಜ್ ರಿಕವರಿ ಮಾಡಿ: ವಾಟ್ಸ್​ಆ್ಯಪ್​ನಲ್ಲಿ ವಿನೂತನ ಫೀಚರ್
Image
Realme 9i 5G: ಭಾರತದಲ್ಲಿ ಬಹುನಿರೀಕ್ಷಿತ ರಿಯಲ್ ಮಿ 9i 5G ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರೆಂಟಿ

ಮೋಟೋ G32 ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದ್ದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿ ನೀಡಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್+ ಡೆಪ್ತ್ ಸೆನ್ಸಾರ್‌ ಹೊಂದಿದೆ. ಈ ಫೋನ್​ನಲ್ಲಿರುವ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬಲಿಷ್ಠವಾದ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ಅತ್ಯಂತ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಯುಎಸ್​ಬಿ-C ಪೋರ್ಟ್ ಅನ್ನು ಅಳವಡಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ಬ್ಯಾಂಡ್ ವೈಫೈ, 5G, 4G LTE, ಬ್ಲೂಟೂತ್ v5.1, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದು ಭಾರತದ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಫೋನ್​ಗಳ ಸಾಲಿಗೆ ಸೇರಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ