ಕಳೆದ ವರ್ಷ 2021 ರಲ್ಲಿ ಮಾರುಕಟ್ಟೆಗೆ ಅತಿ ಹೆಚ್ಚು ಸ್ಮಾರ್ಟ್‌ಫೋನ್‌ಗಳನ್ನು (Smartphone) ಪರಿಚಯಿಸಿದ್ದ ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಈ ವರ್ಷ ಕೂಡ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಇರಾದೆ ಇಟ್ಟುಕೊಂಡಿದೆ. ಈಗಾಗಲೇ 200 ಮೆಗಾಫಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್‌ಫೋನ್ ಅನ್ನು ತಯಾರು ಮಾಡುತ್ತಿದೆ. ಇದರ ನಡುವೆ ಇದೀಗ ಭಾರತದಲ್ಲಿ ತನ್ನ ಹೊಸ ಮೋಟೋ ಜಿ71 5ಜಿ (Moto G71 5G) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಫೋನ್ ಹೋಲ್-ಪಂಚ್ ಡಿಸ್‌ಪ್ಲೇ ವಿನ್ಯಾಸ ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಬಜೆಟ್ ಬೆಲೆಯ ಫೋನ್ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ.
ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 18,999 ರೂ. ನಿಗದಿ ಮಾಡಲಾಗಿದೆ. ಇದು ಆರ್ಕ್ಟಿಕ್ ಬ್ಲೂ ಮತ್ತು ನೆಪ್ಚೂನ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಜನವರಿ 19 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಸೇಲ್ ಕಾಣುತ್ತದೆ.
ಮೋಟೋ G71 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿರುವ 6.4-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ My UX ನೊಂದಿಗೆ ಕಾರ್ಯನಿರ್ವಹಿಸುತ್ತದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಜೊತೆಗೆ f/2.2 ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಟರ್ಬೊ ಪವರ್ ಚಾರ್ಜರ್ ಮೂಲಕ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ.
OnePlus Nord CE: ಕಿಸೆಯಲ್ಲಿದ್ದ ಒನ್‌ಪ್ಲಸ್ ನಾರ್ಡ್ CE ಸ್ಮಾರ್ಟ್‌ಫೋನ್ ಸ್ಪೋಟ: ಪ್ರಾಣಾಪಾಯದಿಂದ ಪಾರು