Kannada News Technology Moto G82 5G Motorolas new affordable midranger has officially arrived in India and going on sale today
Moto G82 5G: ಹೊಸ ಫೋನ್ ಹುಡುಕುತ್ತಿದ್ದರೆ ಇದುವೇ ಬೆಸ್ಟ್: ಇಂದು ಮಾರಾಟ ಶುರುವಾಗಿದೆ ಮೋಟೋ G82 5G
ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗುತ್ತಿರುವ ಮೋಟೋ ಈಗೀಗ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಈ ಪೈಕಿ ಕೆಲವು ದಿನಗಳ ಹಿಂದೆಯಷ್ಟೆ ತನ್ನ G ಸರಣಿಯಲ್ಲಿ ಹೊಸ ಮೋಟೋ ಜಿ82 5ಜಿ (Moto G82 5G) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು.
Moto G82 5G
Follow us on
ಜಾಗತಿಕ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಇಂದು ಅನೇಕ ಬ್ರ್ಯಾಂಡ್ಗಳು ಹುಟ್ಟುಕೊಂಡಿದ್ದು ದಿನಕ್ಕೊಂದರಂತೆ ಮೊಬೈಲ್ಗಳು ಬಿಡುಗಡೆ ಆಗುತ್ತಿರುತ್ತದೆ. ಇದರಲ್ಲಿ ಕೆಲವೇ ಕೆಲವು ಫೋನ್ಗಳು ತಲೆಎತ್ತಿ ನಿಂತರೆ ಇನ್ನೂ ಅನೇಕ ಫೋನ್ಗಳು ನೆಲಕಚ್ಚುತ್ತವೆ. ಇವೆಲ್ಲದರ ನಡುವೆ ಮೋಟೋರೊಲ(Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗುತ್ತಿರುವ ಮೋಟೋ ಈಗೀಗ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಈ ಪೈಕಿ ಕೆಲವು ದಿನಗಳ ಹಿಂದೆಯಷ್ಟೆ ತನ್ನ G ಸರಣಿಯಲ್ಲಿ ಹೊಸ ಮೋಟೋ ಜಿ82 5ಜಿ (Moto G82 5G) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಈ ಫೋನ್ ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ಮೂಲಕ ಇಂದು (ಜೂ. 14) ಮೊದಲ ಸೇಲ್ ಕಾಣುತ್ತಿದೆ.
ನೀವು ಹೊಸ ಫೋನ್ ಖರೀದಿಸುವ ಪ್ಲಾನ್ನಲ್ಲಿದ್ದರೆ ಇದೊಂದು ಅತ್ಯುತ್ತಮ ಆಯ್ಕೆಯಾಗಿದೆ. ಮಧ್ಯಮ ಬೆಲೆಗೆ ಲಭ್ಯವಿರುವ ಈ ಫೋನ್ನಲ್ಲಿ ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
ಮೋಟೋ G82 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದೆ. ಇದು ಒಂದು ಬಿಲಿಯನ್ ಬಣ್ಣಗಳಿಗೆ ಬೆಂಬಲವನ್ನು ನೀಡಲಿದೆ ಎಂದು ಕಂಪನಿ ಹೇಳಿಕೊಂಡಿದೆ.
ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ನೀಡಲಾಗಿದ್ದು ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ನಲ್ಲಿದ್ದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುತ್ತದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಹೊಂದಿದೆ. 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಇದನ್ನೂ ಓದಿ
5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.
ಮೋಟೋ G82 ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 21,499 ರೂ. ಮತ್ತು 8GB + 128GB ಸ್ಟೋರೇಜ್ ಆಯ್ಕೆಯ ಬೆಲೆ 22,999 ರೂ. ಇದೆ. ನೀವು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 1500 ರೂ. ಗಳ ರಿಯಾಯಿತಿ ಸಿಗಲಿದೆ.