Moto E13: ಇಂದು ಮಧ್ಯಾಹ್ನ 12 ಗಂಟೆಯಿಂದ ಕೇವಲ 6,999 ರೂ. ಗೆ ಖರೀದಿಸಿ ಈ ಸ್ಮಾರ್ಟ್​ಫೋನ್

Best Budget Smartphones: ಕಳೆದ ವಾರ ಕಂಪನಿ ಮೋಟೋ ಇ13 (Moto E13) ಎಂಬ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿರುವ ಈ ಫೋನ್ ಇಂದಿನಿಂದ ದೇಶದಲ್ಲಿ ಮಾರಾಟ ಕಾಣಲಿದೆ.

Moto E13: ಇಂದು ಮಧ್ಯಾಹ್ನ 12 ಗಂಟೆಯಿಂದ ಕೇವಲ 6,999 ರೂ. ಗೆ ಖರೀದಿಸಿ ಈ ಸ್ಮಾರ್ಟ್​ಫೋನ್
MOTO E13
Follow us
| Updated By: Vinay Bhat

Updated on: Feb 15, 2023 | 6:27 AM

ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ರಿಲೀಸ್ ಮಾಡುತ್ತಿರುವ ಮೋಟೋ ಇತ್ತೀಚೆಗಷ್ಟೆ ತನ್ನ E ಸರಣಿಯಲ್ಲಿ ಮೋಟೋ E32s ಎಂಬ ಸ್ಮಾರ್ಟ್‌ಫೋನ್‌ (Smartphone) ಅನ್ನು ಅನಾವರಣ ಮಾಡಿ ಸದ್ದು ಮಾಡಿತ್ತು. ಬಳಿಕ ಕಳೆದ ವಾರ ಇದೇ ಸರಣಿಯಡಿಯಲ್ಲಿ ಕಂಪನಿ ಮೋಟೋ ಇ13 (Moto E13) ಎಂಬ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದು ಅತ್ಯಂತ ಕಡಿಮೆ ಬೆಲೆಯ ಸ್ಮಾರ್ಟ್​ಫೋನ್ ಆಗಿದ್ದರೂ ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಇಂದಿನಿಂದ ಈ ಫೋನ್ ದೇಶದಲ್ಲಿ ಮಾರಾಟ ಕಾಣಲಿದೆ.

ಬೆಲೆ ಎಷ್ಟು?:

ಮೋಟೋ E13 ಸ್ಮಾರ್ಟ್‌ಫೋನ್​ ಭಾರತದಲ್ಲಿ ಒಟ್ಟು ಎರಡು ಸ್ಟೋರೇಜ್ ಆಯ್ಕೆಯನ್ನು ರಿಲೀಸ್ ಆಗಿದೆ. ಇದರ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯ ಬೆಲೆ ಕೇವಲ 6,999 ರೂ. ಆಗಿದೆ. ಅಂತೆಯೆ 4GB RAM ಮತ್ತು 64GB ಸ್ಟೋರೇಜ್ ಸಾಮರ್ಥ್ಯಕ್ಕೆ 7,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ.

ಇದನ್ನೂ ಓದಿ
Image
Realme 10 Pro Coca-Cola: ಕೋಕಾ-ಕೋಲಾ ಚೊಚ್ಚಲ ಸ್ಮಾರ್ಟ್​ಫೋನ್ ಈಗ ಭಾರತದಲ್ಲಿ ಖರೀದಿಗೆ ಲಭ್ಯ: ಬೆಲೆ ಎಷ್ಟು?, ಏನು ಫೀಚರ್ಸ್
Image
Jio Valentine’s Day Offer: ವ್ಯಾಲೆಂಟೈನ್ಸ್​ ಡೇಗೆ ಜಿಯೋದಿಂದ ಧಮಕಾ ಆಫರ್ ಘೋಷಣೆ: ಕೂಡಲೇ ರಿಚಾರ್ಜ್ ಮಾಡಿರಿ
Image
OnePlus 11 5G: ಒನ್​ಪ್ಲಸ್​ನ 2023ರ ಮೊದಲ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಯಾವುದು?, ಏನು ಫೀಚರ್ಸ್?
Image
Tech Tips: ನಿಮ್ಮ ಫೇಸ್​ಬುಕ್ ಪ್ರೊಫೈಲ್ ಯಾರು ನೋಡುತ್ತಿದ್ದಾರೆಂದು ತಿಳಿಯಬೇಕೆ?: ಇಲ್ಲಿದೆ ಸಿಂಪಲ್ ಟ್ರಿಕ್

WhatsApp Web: ನೀವು ವಾಟ್ಸ್​ಆ್ಯಪ್ ವೆಬ್ ಬಳಸುತ್ತಿದ್ದೀರಾ?: ಬರುತ್ತಿದೆ ಅಚ್ಚರಿ ಗೊಳಿಸುವ ಹೊಸ ಫೀಚರ್

ಏನು ಫೀಚರ್ಸ್?:

ಈ ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 OS ಜೊತೆಗೆ ರನ್ ಆಗಲುತ್ತಿದ್ದು 1TB ವರೆಗೆ ಮೆಮೋರಿಯನ್ನು ಹೆಚ್ಚಿಸಬಹುದಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಮೋಟೋ E13 ಸ್ಮಾರ್ಟ್‌ಫೋನ್‌ ಸಿಂಗಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹಾಗೂ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳ ಮೂಲಕ 30fps ಫುಲ್‌ HD ವಿಡಿಯೋವನ್ನು ರೆಕಾರ್ಡಿಂಗ್ ಮಾಡಬಹುದು. ಜೊತೆಗೆ ಪನೋರಮ, ಪೋಟ್ರೆಟ್, ನೈಟ್ ವರ್ಷನ್, ಡ್ಯುಯೆಲ್ ಕಾಪ್ಚರ್, ಲೈವ್ ಫಿಲ್ಟರ್ ಸೇರಿದಂತೆ ಅನೇಕ ಆಯ್ಕೆಗಳಿವೆ.

ಮೋಟೋ E13 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದಿದೆ. ಇದು 10W ಚಾರ್ಜಿಂಗ್ ವೇಗವನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್‌, ವೈಫೈ, ಬ್ಲೂಟೂತ್ v5.0 ಬೆಂಬಲ ಪಡೆದುಕೊಂಡಿದೆ. ಇದು 5ಜಿ ಬೆಂಬಲ ಪಡೆದುಕೊಂಡಿಲ್ಲ ಬದಲಾಗಿ 4G VoLTE ಸಪೋರ್ಟ್ ಮಾಡುತ್ತದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್​ನೊಂದಿಗೆ ಲಗ್ಗೆಯಿಟ್ಟಿದೆ. ಸದ್ಯ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಉತ್ತಮ ಫೀಚರ್​ಗಳ ಕೆಲವೇ ಕೆಲವು ಸ್ಮಾರ್ಟ್​ಫೋನ್​ಗಳ ಸಾಲಿಗೆ ಇದು ಕೂಡ ಸೇರ್ಪಡೆಯಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು