ಬರುತ್ತಿದೆ ಮೊಟೊರೊಲಾ ಎಡ್ಜ್ 40 ಸ್ಮಾರ್ಟ್‌ಫೋನ್​ನ ನಿಯೋ ವರ್ಷನ್: ಧೂಳೆಬ್ಬಿಸುವುದು ಖಚಿತ

Moto Edge 40 Neo Launch in India soon: ಮೋಟೋರೊಲಾ ಎಡ್ಜ್ 40 ಸ್ಮಾರ್ಟ್‌ಫೋನ್ ಯಶಸ್ವಿಯಾದ ಬೆನ್ನಲ್ಲೇ ಇದೀಗ ಕಂಪನಿಯು ಈ ಫೋನ್ ಅನ್ನು 'ನಿಯೋ' ಮಾದರಿಯಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಸದ್ಯದಲ್ಲೇ ಭಾರತದಲ್ಲಿ ಮೋಟೋ ಎಡ್ಜ್ 40 ನಿಯೋ ಫೋನ್ ಅನಾವರಣಗೊಳ್ಳಲಿದೆ.

ಬರುತ್ತಿದೆ ಮೊಟೊರೊಲಾ ಎಡ್ಜ್ 40 ಸ್ಮಾರ್ಟ್‌ಫೋನ್​ನ ನಿಯೋ ವರ್ಷನ್: ಧೂಳೆಬ್ಬಿಸುವುದು ಖಚಿತ
moto edge 40 neo
Follow us
|

Updated on: Aug 27, 2023 | 11:19 AM

ಮೋಟೋರೊಲಾ ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ವಿಶ್ವದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಈ ಕಂಪನಿಯಿಂದ ಬಜೆಟ್ ಬೆಲೆಯಿಂದ ಹಿಡಿದು ಹೈ-ರೇಂಜ್ ಮಾದರಿಯ ಫೋನ್​ಗಳು ಬಿಡುಗಡೆ ಆಗುತ್ತವೆ. ಮೋಟೋ ಕಂಪನಿಯ ಎಡ್ಜ್ ಸರಣಿಯ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿದೆ. ಕಳೆದ ಮೇ ತಿಂಗಳಲ್ಲಿ ಮೋಟೋರೊಲಾ ಎಡ್ಜ್ 40 (Moto Edge 40) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೂಡ ಕೇಳಿಬಂದಿತ್ತು.

ಎಡ್ಜ್ 40 ಸ್ಮಾರ್ಟ್‌ಫೋನ್ ಯಶಸ್ವಿಯಾದ ಬೆನ್ನಲ್ಲೇ ಜೂನ್‌ನಲ್ಲಿ ಮೋಟೋ ಎಡ್ಜ್ ಹೊಸ ‘ವಿವಾ ಮೆಜೆಂಟಾ’ ಬಣ್ಣದ ರೂಪಾಂತರವನ್ನು ಪರಿಚಯಿಸಿತ್ತು. ಇದೀಗ ಕಂಪನಿಯು ಈ ಫೋನ್ ಅನ್ನು ‘ನಿಯೋ’ ಮಾದರಿಯಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಸದ್ಯದಲ್ಲೇ ಭಾರತದಲ್ಲಿ ಮೋಟೋ ಎಡ್ಜ್ 40 ನಿಯೋ ಫೋನ್ ಅನಾವರಣಗೊಳ್ಳಲಿದೆ. ವಿಶೇಷ ಎಂದರೆ ಈ ಮೊಬೈಲ್ ಕೈಗೆಟಕುವ ಬೆಲೆಗೆ ಲಭ್ಯವಾಗಲಿದೆಯಂತೆ.

ಜಿಯೋ ಬಳಕೆದಾರರಿಗೆ ಬಿಗ್ ಶಾಕ್: ಟ್ರೆಂಡಿಂಗ್ ಪ್ಲಾನ್ ಅನ್ನು ದಿಢೀರ್ ಸ್ಥಗಿತಗೊಳಿಸಿದ ಕಂಪನಿ

ಇದನ್ನೂ ಓದಿ
Image
Aadhaar Card: ನಿಮ್ಮ ಆಧಾರ್ ಮೂಲಕ ಬೇರೆಯವರು ಸಿಮ್ ಖರೀದಿಸಿದ್ದಾರೆಯೇ? ಚೆಕ್ ಮಾಡಿ..
Image
ಒಂದೇ ದಿನ ಬಾಕಿ: ನಾಳೆ ಭಾರತದಲ್ಲಿ ರೋಚಕತೆ ಸೃಷ್ಟಿಸಿರುವ ವಿವೋ V29e ಸ್ಮಾರ್ಟ್​ಫೋನ್ ಬಿಡುಗಡೆ
Image
ಬಜೆಟ್ ಪ್ರಿಯರು ಸಿದ್ಧರಾಗಿ: ಭಾರತಕ್ಕೆ ಬರುತ್ತಿದೆ ರಿಯಲ್ ಮಿಯ ಅತಿ ಕಡಿಮೆ ಬೆಲೆಯ ಸ್ಮಾರ್ಟ್​ಫೋನ್
Image
ಕುತೂಹಲ ಕೆರಳಿಸಿದ ಒನ್​ಪ್ಲಸ್ 12 5G ಸ್ಮಾರ್ಟ್​ಫೋನ್: ಬಿಡುಗಡೆ ಯಾವಾಗ?, ಏನಿದೆ ಫೀಚರ್ಸ್?

ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ ಅನ್ನು Geekbench ನಲ್ಲಿ ಪಟ್ಟಿ ಮಾಡಲಾಗಿದೆ. ಇಲ್ಲಿ, ಚಿಪ್‌ಸೆಟ್ ಯಾವುದು ಎಂಬುದನ್ನು ಸ್ಪಷ್ಟವಾಗಿ ಹೇಳಲಾಗಿಲ್ಲ. ಆದರೆ ಇದು ARM v8 ಆಕ್ಟಾ-ಕೋರ್ ಪ್ರೊಸೆಸರ್ ಆಗಿದ್ದು ಗರಿಷ್ಠ ವೇಗ 2.50GHz, ಮತ್ತು Mali-G610 MC3 GPU ನೊಂದಿಗೆ ರಿಲೀಸ್ ಆಗಲಿದೆ ಎಂಬುದು ತಿಳಿದುಬಂದಿದೆ. ಈ ಮಾಹಿತಿಯ ಆಧಾರದ ಮೇಲೆ, ಇದು ಮೀಡಿಯಾಟೆಕ್ ಡೈಮೆನ್ಸಿಟಿ 1050 SoC ಆಗಿರಬಹುದು. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 ಮೂಲಕ ಕಾರ್ಯನಿರ್ವಹಿಸುತ್ತದೆ.

ಮೋಟೋ ಎಡ್ಜ್ 40 ನಿಯೋ ಬಿಡುಗಡೆ ದಿನಾಂಕ, ಬೆಲೆ ಎಷ್ಟಿರಬಹುದು?:

ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ ಬಗ್ಗೆ ಈ ಹಿಂದೆ ವಿದೇಶದಲ್ಲಿ ಕೆಲ ಮಾಹಿತಿ ಸೋರಿಕೆ ಆಗಿದ್ದವು. ಯುಎಇಯ ಟೆಲಿಕಮ್ಯುನಿಕೇಷನ್ಸ್ ಮತ್ತು ಡಿಜಿಟಲ್ ಗವರ್ನಮೆಂಟ್ ರೆಗ್ಯುಲೇಟರಿ ಅಥಾರಿಟಿ (ಟಿಡಿಆರ್‌ಎ) ವೆಬ್‌ಸೈಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಇತ್ತೀಚೆಗೆ ಕಾಣಿಸಿಕೊಂಡಿದೆ. ಮೂಲಗಳ ಪ್ರಕಾರ ಮೋಟೋ ಎಡ್ಜ್ 40 ನಿಯೋ ಫೋನ್ ಸೆಪ್ಟೆಂಬರ್ 15 ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದರ ಬೆಲೆ ಭಾರತದಲ್ಲಿ ಸುಮಾರು 30,000 ರೂ. ಆಸುಪಾಸಿನಲ್ಲಿ ಇರಬಹುದು.

ಮೋಟೋ ಎಡ್ಜ್ 40 ನಿಯೋ ಫೀಚರ್ಸ್ ಏನಿರಬಹುದು?:

  • ಡಿಸ್‌ಪ್ಲೇ: ಮೋಟೋ ಎಡ್ಜ್ 40 ನಿಯೋ 144Hz ರಿಫ್ರೆಶ್ ರೇಟ್‌ನೊಂದಿಗೆ 6.55-ಇಂಚಿನ ಪೂರ್ಣ HD+ ಪೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿರುವ ನಿರೀಕ್ಷೆಯಿದೆ.
  • ಪ್ರೊಸೆಸರ್: ಈ ಸ್ಮಾರ್ಟ್​ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1050 SoC ನಿಂದ ಚಾಲಿತವಾಗಿದೆ ಎಂದು ಹೇಳಲಾಗುತ್ತದೆ.
  • RAM ಮತ್ತು ಸಂಗ್ರಹಣೆ: ಇದು 12GB RAM ಮತ್ತು 256GB ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ಬರಬಹುದು.
  • ಕ್ಯಾಮೆರಾಗಳು: ಮೋಟೋ ಎಡ್ಜ್ 40 ನಿಯೋ ಸ್ಮಾರ್ಟ್​ಫೋನ್ 50MP ಮತ್ತು 13MP ಸಂವೇದಕಗಳೊಂದಿಗೆ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು 32MP ಮುಂಭಾಗದ ಕ್ಯಾಮೆರಾವನ್ನು ಹೊಂದುವ ನಿರೀಕ್ಷೆಯಿದೆ.
  • ಬ್ಯಾಟರಿ, ಇತರ ವೈಶಿಷ್ಟ್ಯಗಳು: ಇದು 5,000mAh ಬ್ಯಾಟರಿಯನ್ನು ಹೊಂದಬಹುದು ಮತ್ತು IP68 ರೇಟಿಂಗ್‌ನೊಂದಿಗೆ ಬರಬಹುದು. ಬ್ಲ್ಯಾಕ್ ಬ್ಯೂಟಿ ಶೇಡ್ ಬಣ್ಣದಲ್ಲಿ ಈ ಸ್ಮಾರ್ಟ್‌ಫೋನ್ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಇದು ಎಷ್ಟಿ ವೋಲ್ಟ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ ಎಂಬುದು ತಿಳಿದುಬಂದಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ