Moto E40: ಬಜೆಟ್ ಸ್ಮಾರ್ಟ್‌ಫೋನ್ ಬೇಕಿದ್ದರೆ ಇಲ್ಲಿದೆ ಬಂಪರ್ ಆಫರ್: ಮೋಟೋ E40 ಬೆಲೆ ಕೇವಲ 8,599 ರೂ.
Flipkart Offer: ಭಾರತದಲ್ಲಿ ಮೋಟೋ E40 ಸ್ಮಾರ್ಟ್‌ಫೋನಿನ 4GB RAM ಮತ್ತು 64GB ಸ್ಟೋರೇಜ್ ರೂಪಾಂತರ 10,999 ರೂ. ಗೆ ರಿಲೀಸ್ ಆಗಿತ್ತು. ಇದೀಗ ಫ್ಲಿಪ್ಕಾರ್ಟ್ನಲ್ಲಿ ಈ ಪೋನ್ 8,599 ರೂ. ಗೆ ನಿಮ್ಮದಾಗಿಸಬಹುದು.

ಮೋಟೋರೊಲಾ ಕಂಪನಿ ಈ ವರ್ಷ ಅನೇಕ ಪ್ರಯೋಗಗಳನ್ನು ನಡೆಸಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಮೋಟೋ ಸಂಸ್ಥೆಯ 4,5 ಸ್ಮಾರ್ಟ್ಫೋನ್ಗಳು (Smartphones) ಘೋಷಣೆ ಆಗಿದ್ದು ಬಿಡುಗಡೆಗೆ ತಯಾರಾಗಿ ನಿಂತಿದೆ. ಇದರ ನಡುವೆ ತನ್ನ ಹಳೆಯ ಮೊಬೈಲ್ ಅನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಕಳೆದ ವರ್ಷ ಮೋಟೋರೊಲಾ ಬಿಡುಗಡೆ ಮಾಡಿದ ಮೋಟೋ ಇ40 (Moto E40) ಸ್ಮಾರ್ಟ್‌ಫೋನ್ ಈಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ (Flipkart) ಬಂಪರ್ ಡಿಸ್ಕೌಂಟ್ ಮೂಲಕ ಮಾರಾಟ ಆಗುತ್ತಿದೆ. ಈಗಾಗಲೇ ಬಜೆಟ್ ಬೆಲೆಗೆ ಲಭ್ಯವಿರುವ ಈ ಫೋನ್ ಮತ್ತಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಭಾರತದಲ್ಲಿ ಮೋಟೋ E40 ಸ್ಮಾರ್ಟ್‌ಫೋನಿನ 4GB RAM ಮತ್ತು 64GB ಸ್ಟೋರೇಜ್ ರೂಪಾಂತರ 10,999 ರೂ. ಗೆ ರಿಲೀಸ್ ಆಗಿತ್ತು. ಇದೀಗ ಫ್ಲಿಪ್ಕಾರ್ಟ್ನಲ್ಲಿ ಈ ಪೋನ್ 8,599 ರೂ. ಗೆ ನಿಮ್ಮದಾಗಿಸಬಹುದು. 2400 ರೂ. ಗಳ ರಿಯಾಯಿತಿ ದರದಲ್ಲಿ ಸೇಲ್ ಕಾಣುತ್ತಿದೆ. ಕಾರ್ಬನ್ ಗ್ರೇ ಮತ್ತು ಪಿಂಕ್ ಕ್ಲೇ ಬಣ್ಣಗಳಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಾಗಲಿದೆ.
ಮೋಟೋ E40 ಸ್ಮಾರ್ಟ್‌ಫೋನ್ 720*1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಮ್ಯಾಕ್ಸ್ ವಿಷನ್ ಹೆಚ್‌ಡಿ+ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಯೂನಿಸೋಕ್ T700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು 1TB ವರೆಗೆ ವಿಸ್ತರಿಸಬಹುದಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್ ಜೊತೆಗೆ f/1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಜೊತೆಗೆ f/2.4 ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇನ್ನು ರಿಯರ್ ಕ್ಯಾಮೆರಾಗಳು ಪೋರ್ಟ್ರೇಟ್ ಮೋಡ್, ಪನೋರಮಾ, ಫೇಸ್ ಬ್ಯೂಟಿ, ಎಚ್‌ಡಿಆರ್ ನೈಟ್ ವಿಷನ್, ಮ್ಯಾಕ್ರೋ ವಿಷನ್ ಮತ್ತು ಪ್ರೊ ಮೋಡ್ ಫೀಚರ್ಸ್‌ಗಳನ್ನು ಬೆಂಬಲಿಸುತ್ತವೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11 a/b/g, ಬ್ಲೂಟೂತ್ v5.0, GPS/A-GPS, FM ರೇಡಿಯೋ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಮತ್ತು ಸಾಮೀಪ್ಯ ಸೆನ್ಸರ್ ಅನ್ನು ಒಳಗೊಂಡಂತೆ ಇತ್ತೀಚೆಗಿನ ಹೆಚ್ಚಿನ ಆಯ್ಕೆಯನ್ನು ಸೇರಿಸಲಾಗಿದೆ.
Published On - 3:04 pm, Sun, 30 October 22