AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ ಮೂರು ದಿನವಿರುವಾಗ ಬಹುನಿರೀಕ್ಷಿತ ಮೋಟೋ ಎಡ್ಜ್ 20 ಫೋನಿನ ಬೆಲೆ ಬಹಿರಂಗ

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯವಾಗಲಿದೆ. ಮೋಟೋ ಎಡ್ಜ್ 20 ಫೋನ್ ಇತ್ತೀಚೆಗಷ್ಟೆ ಬಿಡುಗಡೆ ಆದ ಒನ್​ಪ್ಲಸ್ ನಾರ್ಡ್ 2ಗೆ ಸವಾಲೊಡ್ಡಿದರೆ, ಮೋಟೋ ಎಡ್ಜ್ 20 ಫ್ಯೂಷನ್ ಎಂಐ 11 ಲೈಟ್​ಗೆ ಟಕ್ಕರ್ ಕೊಡಲಿದೆ.

ಬಿಡುಗಡೆಗೆ ಮೂರು ದಿನವಿರುವಾಗ ಬಹುನಿರೀಕ್ಷಿತ ಮೋಟೋ ಎಡ್ಜ್ 20 ಫೋನಿನ ಬೆಲೆ ಬಹಿರಂಗ
Motorola Edge 20 and Edge 20 Fusion
TV9 Web
| Updated By: Vinay Bhat|

Updated on: Aug 14, 2021 | 1:56 PM

Share

ಲೆನೊವಾ ಒಡೆತನದ ಮೋಟೋರೊಲಾ (Motorola) ಕಂಪೆನಿ ಇದೇ ಆಗಸ್ಟ್ 17ರಂದು ಭಾರತದಲ್ಲಿ ತನ್ನ ಎಡ್ಜ್ ಸರಣಿಯಲ್ಲಿ ಮೋಟೋ ಎಡ್ಜ್ 20 ಮತ್ತು ಮೋಟೋ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್‌ಗಳನ್ನು ಅಧಿಕೃತವಾಗಿ ಅನಾವರಣ ಮಾಡಲು ತಯಾರಾಗಿದೆ. ಆಕರ್ಷಕ ಕ್ಯಾಮೆರಾ, ಸ್ನ್ಯಾಪ್‌ಡ್ರಾಗನ್ ಪ್ರೊಸೆಸರ್​ನಿಂದ ಕೂಡಿರುವ ಈ ಸ್ಮಾರ್ಟ್​ಫೋನಿನ ಬೆಲೆ ಈಗ ಆನ್​ಲೈನ್​ನಲ್ಲಿ ಸೋರಿಕೆಯಾಗಿದೆ.

ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಮೋಟೋ ಮೋಟೋ ಎಡ್ಜ್ 20 ಫ್ಯೂಷನ್ ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ ಪ್ರಕಾರ 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯದ ಬೆಲೆ 21,499 ರೂ. ಇರಲಿದೆಯಂತೆ. 8GB RAM ಮತ್ತು 128GB ಸ್ಟೋರೆಜ್​ಗೆ 23,999 ರೂ. ನಿಗದಿ ಮಾಡಲಾಗಿದೆ. ಇನ್ನೂ ಮೋಟೋ ಎಡ್ಜ್ 20 ಕೇವಲ ಒಂದು ಆಯ್ಕೆಯಲ್ಲಿ ಮಾರಾಟ ಕಾಣಲಿದೆ. ಇದರ 8GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯಕ್ಕೆ 29,999 ರೂ. ಇರಲಿದೆಯಂತೆ.

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯವಾಗಲಿದೆ. ಮೋಟೋ ಎಡ್ಜ್ 20 ಫೋನ್ ಇತ್ತೀಚೆಗಷ್ಟೆ ಬಿಡುಗಡೆ ಆದ ಒನ್​ಪ್ಲಸ್ ನಾರ್ಡ್ 2ಗೆ ಸವಾಲೊಡ್ಡಿದರೆ, ಮೋಟೋ ಎಡ್ಜ್ 20 ಫ್ಯೂಷನ್ ಎಂಐ 11 ಲೈಟ್​ಗೆ ಟಕ್ಕರ್ ಕೊಡಲಿದೆ.

ಮೋಟೋ ಎಡ್ಜ್ 20 ವಿಶೇಷತೆ?:

ಮೋಟೋ ಎಡ್ಜ್ 20 ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿರಲಿದೆ. ಆಕ್ಟಾ ಕೋರ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಹೊಂದಿರಲಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿರಲಿದ್ದು, ಕ್ರಮವಾಗಿ 108 ಮೆಗಾಫಿಕ್ಸೆಲ್ + 16ಎಂಪಿ + 8ಎಂಪಿ ಸೆನ್ಸಾರ್‌ ಪಡೆದಿರಲಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಜೊತೆಗೆ 4000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿರಲಿದ್ದು, 33W ಟರ್ಬೊಪವರ್ ಚಾರ್ಜಿಂಗ್ ಬೆಂಬಲ ಇರಲಿದೆ.

ಮೋಟೋ ಎಡ್ಜ್ 20 ಫ್ಯೂಷನ್ ವಿಶೇಷತೆ?:

ಮೋಟೋ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ OLED ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿರಲಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 720 ಪ್ರೊಸೆಸರ್‌ ಬಲವನ್ನು ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಹೊಂದಿರಲಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿರಲಿದ್ದು, ಕ್ರಮವಾಗಿ 108ಎಂಪಿ + 8ಎಂಪಿ + 2ಎಂಪಿ ಸೆನ್ಸಾರ್‌ ಪಡೆದಿರಲಿವೆ. ಇನ್ನು ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇರಲಿದೆ. ಜೊತೆಗೆ 5000mAh ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿರಲಿದ್ದು, 30W ಫಾಸ್ಟ್‌ ಚಾರ್ಜಿಂಗ್ ಬೆಂಬಲದೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

JioPhone Next: ಜಿಯೋ ಫೋನ್ ನೆಕ್ಸ್ಟ್​​ನ ಅಚ್ಚರಿ ಫೀಚರ್ ಲೀಕ್: ನೀವು ಬೆರಗಾಗುವುದು ಗ್ಯಾರೆಂಟಿ

Fake news: ಕೊರೊನಾ ಲಸಿಕೆಯಿಂದ ಮನುಷ್ಯರು ಚಿಂಪಾಂಜಿಯಾಗಿ ಮಾರ್ಪಡುವ ಸುಳ್ಳು ಸುದ್ದಿಯ ಚುಂಗು ಹಿಡಿದು

(Motorola Edge 20 and Edge 20 Fusion prices leaked in India will launch August 17th)

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ