Motorola Edge 30 Pro: 68W ಟರ್ಬೊ ಚಾರ್ಜರ್, 50MP ಕ್ಯಾಮೆರಾ: ಮೋಟೋ ಎಡ್ಜ್ 30 ಪ್ರೊ ಇಂದು ಮೊದಲ ಸೇಲ್
Motorola Edge 30 Pro Price: ಅತ್ಯಂತ ವೇಗದ ಚಾರ್ಜರ್, ಬೊಂಬಾಟ್ ಕ್ಯಾಮೆರಾ, ಬಲಿಷ್ಠವಾದ ಪ್ರೊಸೆಸರ್, ಸೂಪರ್ ಡಿಸ್ ಪ್ಲೇ ಮೂಲಕ ಟೆಕ್ ಪ್ರಿಯರ ನಿದ್ದೆ ಕದ್ದಿದ್ದ ಮೋಟೋ ಎಡ್ಜ್ 30 ಪ್ರೊ ಇಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಭಾರತದಲ್ಲಿ ತನ್ನ ಮೊದಲ ಸೇಲ್ ಆರಂಭಿಸಲಿದೆ.
ವಾರದ ಹಿಂದೆಯಷ್ಟೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿ ಭರ್ಜರಿ ಸುದ್ದಿಯಾಗಿದ್ದ ಮೋಟೋ (Moto) ಕಂಪನಿಯ ಬಹುನಿರೀಕ್ಷಿತ ಮೋಟೋರೊಲಾ ಎಡ್ಜ್ 30 ಪ್ರೊ (Motorola Edge 30 Pro) ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಅತ್ಯಂತ ವೇಗದ ಚಾರ್ಜರ್, ಬೊಂಬಾಟ್ ಕ್ಯಾಮೆರಾ, ಬಲಿಷ್ಠವಾದ ಪ್ರೊಸೆಸರ್, ಸೂಪರ್ ಡಿಸ್ ಪ್ಲೇ ಮೂಲಕ ಟೆಕ್ ಪ್ರಿಯರ ನಿದ್ದೆ ಕದ್ದಿದ್ದ ಈ ಸ್ಮಾರ್ಟ್‌ಫೋನ್ ಇಂದು (ಮಾರ್ಚ್ 4) ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಮೂಲಕ ಭಾರತದಲ್ಲಿ ತನ್ನ ಮೊದಲ ಸೇಲ್ ಆರಂಭಿಸಲಿದೆ. ಹಾಗಾದ್ರೆ ಈ ಫೋನಿನ ವಿಶೇಷತೆ ಏನು?, ಬೆಲೆ ಎಷ್ಟು?, ಏನು ಆಫರ್ಗಳಿವೆ ಎಂಬುದನ್ನು ನೋಡೋಣ.
ಬೆಲೆ-ಆಫರ್ ಏನು?:
ಭಾರತದಲ್ಲಿ ಮೋಟೋರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್ ಸದ್ಯಕ್ಕೆ ಇಂದು ಮಾದರಿಯಲ್ಲಷ್ಟೆ ಖರೀದಿಗೆ ಲಭ್ಯವಾಗುತ್ತಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 49,999 ರೂ. ನಿಗದಿ ಮಾಡಲಾಗಿದೆ. ಇದು ಫ್ಲಿಪ್‌ಕಾರ್ಟ್ ಮತ್ತು ದೇಶದಾದ್ಯಂತದ ಪ್ರಮುಖ ರಿಟೇಲ್ ಸ್ಟೋರ್‌ಗಳ ಮೂಲಕ ಇಂದು ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಲಭ್ಯವಿದೆ. ಮಾರಾಟದ ಅವಧಿಯಲ್ಲಿ SBI ಕ್ರೆಡಿಟ್ ಕಾರ್ಡ್‌ಗಳನ್ನು ಬಳಸುವ ಗ್ರಾಹಕರಿಗೆ 5,000 ರೂ. ತ್ವರಿತ ರಿಯಾಯಿತಿ ಸಿಗಲಿದೆ. ಅಲ್ಲದೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿಮಾಡಿದರೆ 5% ಕ್ಯಾಶ್‌ಬ್ಯಾಕ್ ಅನ್ನು ಫ್ಲಿಪ್‌ಕಾರ್ಟ್ ನೀಡುತ್ತಿದೆ. ಈ ಸ್ಮಾರ್ಟ್‌ಫೋನ್ ಕಾಸ್ಮೊಸ್ ಬ್ಲೂ ಮತ್ತು ಸ್ಟಾರ್ಡಸ್ಟ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
ಏನು ವಿಶೇಷತೆ?:
ಮೋಟೋರೊಲಾ ಎಡ್ಜ್ 30 ಪ್ರೊ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ರೇಟ್ ಹೊಂದಿದ್ದು, DCI-P3 ಕಲರ್ ನೀಡಲಾಗಿದೆ. ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದಿಂದ ಕೂಡಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಮತ್ತು ಓಮ್ನಿ-ಡೈರೆಕ್ಷನಲ್ ಫೇಸ್-ಡಿಟೆಕ್ಷನ್ ಆಟೋಫೋಕಸ್ ಜೊತೆಗೆ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇನ್ನು ಈ ಸ್ಮಾರ್ಟ್‌ಫೋನ್ 4,800mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಟಕ್ ಹೊಂದಿದೆ. ಇದು 68W ಟರ್ಬೊ ಪವರ್ ಫಾಸ್ಟ್ ವೈರ್ಡ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, NFC, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಕೂಡ ನೀಡಲಾಗಿದೆ.
Redmi Note 11 Pro series: ಬಹುನಿರೀಕ್ಷಿತ ರೆಡ್ಮಿ ನೋಟ್ 11 ಫೋನ್ ಬೆಲೆಯ ಬಗ್ಗೆ ಹೊರಬಿತ್ತು ಶಾಕಿಂಗ್ ವಿಚಾರ
Realme Narzo 50: ಮೊದಲ ಸೇಲ್ನಲ್ಲೇ ಬಂಪರ್ ಡಿಸ್ಕೌಂಟ್: ಇಂದೇ ಖರೀದಿಸಿ ಹೊಸ ರಿಯಲ್ ಮಿ ನಾರ್ಜೊ 50 ಫೋನ್