Motorola Edge 30 Ultra: 200MP ಕ್ಯಾಮೆರಾ, 125W ಫಾಸ್ಟ್ ಚಾರ್ಜರ್: ಮಾರುಕಟ್ಟೆಗೆ ಅಪ್ಪಳಿಸಿದೆ ಹೊಸ ಸ್ಮಾರ್ಟ್‌ಫೋನ್: ಬೆಲೆ?
ಮೋಟೋರೊಲಾ ಕಂಪನಿ ಇದೀಗ ತನ್ನ ಹೊಸ ಮೋಟೋರೊಲಾ ಎಡ್ಜ್ 30 ಅಲ್ಟ್ರಾ (Motorola Edge 30 Ultra) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇಂದು ಯುರೋಪಿಯನ್ ಮಾರುಕಟ್ಟೆಗೆ ಅಪ್ಪಳಿಸಿರುವ ಈ ಸ್ಮಾರ್ಟ್‌ಫೋನ್ ಕೆಲವೇ ದಿನಗಳಲ್ಲಿ ಭಾರತಕ್ಕೂ ಕಾಲಿಡಲಿದೆ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್ಸಂಗ್, ರಿಯಲ್ ಮಿ (Realme) ನಡುವೆ ತನ್ನದೇ ಆದ ವಿಶೇಷ ಸ್ಥಾನ ಸ್ಥಾಪಿಸಿರುವ ಮೋಟೋರೊಲಾ ಕಂಪನಿ ಇದೀಗ ತನ್ನ ಹೊಸ ಮೋಟೋರೊಲಾ ಎಡ್ಜ್ 30 ಅಲ್ಟ್ರಾ (Motorola Edge 30 Ultra) ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇಂದು ಯುರೋಪಿಯನ್ ಮಾರುಕಟ್ಟೆಗೆ ಅಪ್ಪಳಿಸಿರುವ ಈ ಸ್ಮಾರ್ಟ್‌ಫೋನ್ ಕೆಲವೇ ದಿನಗಳಲ್ಲಿ ಭಾರತಕ್ಕೂ ಕಾಲಿಡಲಿದೆ. ಮೋಟೋರೊಲಾ ಎಡ್ಜ್ 30 ಅಲ್ಟ್ರಾ ವಿಶೇಷತೆ ಇದು ಬರೋಬ್ಬರಿ 200 ಮೆಗಾಫಿಕ್ಸೆಲ್ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಹೊಂದಿರುವುದು. ಜೊತೆಗೆ ಅತ್ಯಂತ ವೇಗದ 125W ಫಾಸ್ಟ್ ಚಾರ್ಜರ್ ಅಳವಡಿಸಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಹಾಗೂ ಸಂಪೂರ್ಣ ಫೀಚರ್ ಬಗ್ಗೆ ನೋಡೋಣ.
ಎಡ್ಜ್ 30 ಅಲ್ಟ್ರಾ ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 12GB RAM + 256GB ಸ್ಟೋರೇಜ್ ರೂಪಾಂತರಕ್ಕೆ ಯುರೋಪ್ನಲ್ಲಿ EUR 899, ಅಂದರೆ ಭಾರತದಲ್ಲಿ ಇದರ ಬೆಲೆ 72,150 ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಈ ಫೋನ್ ಈಗ ಆಯ್ದ ಕೆಲವು ಮಾರ್ಕೆಟ್ನಲ್ಲಿ ಮಾತ್ರ ಅನಾವರಣ ಮಾಡಲಾಗಿದೆ.
ಮೋಟೋ ಎಡ್ಜ್ 30 ಅಲ್ಟ್ರಾ ಫೀಚರ್ಗಳ ಬಗ್ಗೆ ನೋಡುವುದಾದರೆ, ಇದು 6.67 ಇಂಚಿನ ಫುಲ್ ಹೆಚ್ಡಿ+ pOLED ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ರೇಟ್ನಿಂದ ಕೂಡಿದ್ದು ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ನೀಡಲಾಗಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ನಾಪ್‌ಡ್ರಾಗನ್ ಎಲೈಟ್ ಗೇಮಿಂಗ್ ಫೀಚರ್ ಕೂಡ ಅಳವಡಿಸಲಾಗಿದೆ.
ವಿಶೇಷವಾಗಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದು f/1.9 ಅಪಾರ್ಚರ್ ಲೆನ್ಸ್ನಿಂದ ಕೂಡಿದೆ. ಎರಡನೇ ಕ್ಯಾಮೆರಾ 50 ಮೆಗಾಫಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಬೃಹತ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.ಇದರಲ್ಲಿ ಪ್ರಾಥಮಿಕ ಕ್ಯಾಮರಾ OIS ಬೆಂಬಲವನ್ನು ಪಡೆದುಕೊಂಡಿದೆ.
ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠ 4610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 125W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಪಡೆದುಕೊಂಡಿದೆ. ಈ ಮೂಲಕ ಕೆಲವೇ ನಿಮಿಷಗಳಲ್ಲಿ ಫುಲ್ ಚಾರ್ಜ್ ಮಾಡಲು ಸಾಧ್ಯವಾಗಲಿದೆ. ಕಂಪನಿ ಹೇಳಿರುವ ಪ್ರಕಾರ 7 ನಿಮಿಷ ಚಾರ್ಜ್ ಮಾಡಿದರೆ 12 ಗಂಟೆಗಳ ಕಾಲ ಉಪಯೋಗಿಸಬಹುದಂತೆ.
Published On - 2:23 pm, Fri, 9 September 22