AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Motorola Edge 30 Ultra: ಭಾರತದಲ್ಲಿಂದು ಮೊಟ್ಟ ಮೊದಲ 200MP ಕ್ಯಾಮೆರಾ ​ಫೋನ್ ಬಿಡುಗಡೆ: ಬೆಲೆ ಎಷ್ಟು?

200MP Camera Phone: ಇಂದು ದೇಶದಲ್ಲಿ ಮೋಟೋ ಕಂಪನಿ ತನ್ನ ಹೊಸ ಮೋಟೋರೊಲಾ ಎಡ್ಜ್ 30 ಅಲ್ಟ್ರಾ (Motorola Edge 30 Ultra) ಸ್ಮಾರ್ಟ್‌ಫೋನ್‌ ಅನಾವರಣ ಮಾಡಲಿದೆ. ಈ ಫೋನಿನ ಪ್ರಮುಖ ವಿಶೇಷತೆ ಕ್ಯಾಮೆರಾ ಆಗಿದ್ದು, ಇದು ವಿಶ್ವದ ಮೊಟ್ಟ ಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಫೋನಾಗಿದೆ.

Motorola Edge 30 Ultra: ಭಾರತದಲ್ಲಿಂದು ಮೊಟ್ಟ ಮೊದಲ 200MP ಕ್ಯಾಮೆರಾ ​ಫೋನ್ ಬಿಡುಗಡೆ: ಬೆಲೆ ಎಷ್ಟು?
Motorola Edge 30 Ultra
TV9 Web
| Updated By: Vinay Bhat|

Updated on: Sep 13, 2022 | 7:15 AM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ನಡುವೆ ತನ್ನದೇ ಆದ ವಿಶೇಷ ಸ್ಥಾನ ಸ್ಥಾಪಿಸಿರುವ ಮೋಟೋರೊಲಾ ಕಂಪನಿ ಇದೀಗ ಭಾರತದಲ್ಲಿ ವಿಶೇಷವಾದ ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ಇಂದು ದೇಶದಲ್ಲಿ ಮೋಟೋ ಕಂಪನಿ ತನ್ನ ಹೊಸ ಮೋಟೋರೊಲಾ ಎಡ್ಜ್ 30 ಅಲ್ಟ್ರಾ (Motorola Edge 30 Ultra) ಸ್ಮಾರ್ಟ್‌ಫೋನ್‌ ಅನಾವರಣ ಮಾಡಲಿದೆ. ಈ ಫೋನಿನ ಪ್ರಮುಖ ವಿಶೇಷತೆ ಕ್ಯಾಮೆರಾ ಆಗಿದ್ದು, ಇದು ವಿಶ್ವದ ಮೊಟ್ಟ ಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಫೋನಾಗಿದೆ. ಜೊತೆಗೆ ಅತ್ಯಂತ ವೇಗದ 125W ಫಾಸ್ಟ್ ಚಾರ್ಜರ್ ಅಳವಡಿಸಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಹಾಗೂ ಸಂಪೂರ್ಣ ಫೀಚರ್ ಬಗ್ಗೆ ನೋಡೋಣ.

ಮೋಟೋ ಎಡ್ಜ್‌ 30 ಅಲ್ಟ್ರಾ ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ಇದರ 12GB RAM + 256GB ಸ್ಟೋರೇಜ್ ರೂಪಾಂತರಕ್ಕೆ ಭಾರತದಲ್ಲಿ ಅಂದಾಜು 75,000 ರೂ. ಆಸುಪಾಸು ಇರಬಹುದು.

ಇದನ್ನೂ ಓದಿ
Image
Galaxy A32: ಸ್ಯಾಮ್​ಸಂಗ್ ಗ್ಯಾಲಕ್ಸಿಯ ಈ ಸ್ಮಾರ್ಟ್​​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಆಫರ್ ಮಿಸ್ ಮಾಡ್ಬೇಡಿ
Image
Oppo F21s Pro: ಪವರ್​ಫುಲ್ ಮೈಕ್ರೊ ಲೆನ್ಸ್ ಕ್ಯಾಮೆರಾ: ರೋಚಕತೆ ಸೃಷ್ಟಿಸಿದ ಒಪ್ಪೋ F21s ಪ್ರೊ ಸರಣಿ
Image
WhatsApp: ವಾಟ್ಸ್​ಆ್ಯಪ್ ಖಾತೆಯನ್ನು ಸುಲಭವಾಗಿ ಡಿಲೀಟ್ ಮಾಡುವುದು ಹೇಗೆ?: ಇಲ್ಲಿದೆ ಟಿಪ್ಸ್
Image
iPhone Mobiles: iPhone 14 ಬಿಡುಗಡೆಯಾಗಿದ್ದರೂ ಕಡಿತ ಬೆಲೆಯೊಂದಿಗೆ ಲಭ್ಯವಾಗಲಿದೆ iPhone 13

ಮೋಟೋ ಎಡ್ಜ್‌ 30 ಅಲ್ಟ್ರಾ ಫೀಚರ್​ಗಳ ಬಗ್ಗೆ ನೋಡುವುದಾದರೆ, ಇದು 6.67 ಇಂಚಿನ ಫುಲ್ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೆಶ್ ರೇಟ್​ನಿಂದ ಕೂಡಿದ್ದು ಗೋರಿಲ್ಲ ಗ್ಲಾಸ್ 5 ಪ್ರೊಟೆಕ್ಷನ್ ನೀಡಲಾಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8+ Gen ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ನಾಪ್‌ಡ್ರಾಗನ್ ಎಲೈಟ್ ಗೇಮಿಂಗ್ ಫೀಚರ್ ಕೂಡ ಅಳವಡಿಸಲಾಗಿದೆ.

ವಿಶೇಷವಾಗಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದು f/1.9 ಅಪಾರ್ಚರ್ ಲೆನ್ಸ್​ನಿಂದ ಕೂಡಿದೆ. ಎರಡನೇ ಕ್ಯಾಮೆರಾ 50 ಮೆಗಾಫಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 60 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಬೃಹತ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.ಇದರಲ್ಲಿ ಪ್ರಾಥಮಿಕ ಕ್ಯಾಮರಾ OIS ಬೆಂಬಲವನ್ನು ಪಡೆದುಕೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠ 4610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 125W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಪಡೆದುಕೊಂಡಿದೆ. ಈ ಮೂಲಕ ಕೆಲವೇ ನಿಮಿಷಗಳಲ್ಲಿ ಫುಲ್‌ ಚಾರ್ಜ್‌ ಮಾಡಲು ಸಾಧ್ಯವಾಗಲಿದೆ. ಕಂಪನಿ ಹೇಳಿರುವ ಪ್ರಕಾರ 7 ನಿಮಿಷ ಚಾರ್ಜ್ ಮಾಡಿದರೆ 12 ಗಂಟೆಗಳ ಕಾಲ ಉಪಯೋಗಿಸಬಹುದಂತೆ.

ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ