AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Motorola Edge 40: ಭಾರತಕ್ಕೆ ಕಾಲಿಡಲಿದೆ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌: ಫೀಚರ್ಸ್ ಏನಿದೆ ನೋಡಿ

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಇದೇ ತಿಂಗಳಲ್ಲಿ ಭಾರತಕ್ಕೆ ಕಾಲಿಡಲಿದೆಯಂತೆ. ಮೊನ್ನೆ ಯುರೋಪ್‌ನಲ್ಲಿ ಮಾತ್ರ ರಿಲೀಸ್ ಆದ ಈ ಫೋನ್ ಬೆಲೆ EUR 599.99, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 54,000 ರೂ.

Motorola Edge 40: ಭಾರತಕ್ಕೆ ಕಾಲಿಡಲಿದೆ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌: ಫೀಚರ್ಸ್ ಏನಿದೆ ನೋಡಿ
Motorola Edge 40
Vinay Bhat
|

Updated on: May 13, 2023 | 4:52 PM

Share

ಮುಖ್ಯಾಂಶಗಳು

  • ಬೊಂಬಾಟ್ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್
  • ಮಾರುಕಟ್ಟೆಗೆ ಎಂಟ್ರಿಕೊಡಲಿದೆ ಮೋಟೋ ಎಡ್ಜ್‌ 40
  • ಡೈಮೆನ್ಸಿಟಿ 8020 SoC ಪ್ರೊಸೆಸರ್‌ ಅಳವಡಿಸಲಾಗಿದೆ

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಬ್ರ್ಯಾಂಡ್​​ಗಳ ನಡುವೆ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಸ್ಥಾನವನ್ನು ಸಂಪಾದಿಸಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್​ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ-ರೇಂಜ್ ಮಾದರಿಯ ವರೆಗೆ ಆಕರ್ಷಕ ಮೊಬೈಲ್​ಗಳನ್ನು ಅನಾವರಣ ಮಾಡುವ ಮೋಟೋ ಇದೀಗ ದೇಶದಲ್ಲಿ ಮೋಟೋರೊಲಾ ಎಡ್ಜ್‌ 40 (Motorola Edge 40) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ತಯಾರಿಸಿ ನಡೆಸಿದೆ. ಇತ್ತೀಚೆಗಷ್ಟೆ ಈ ಫೋನ್ ವಿದೇಶದಲ್ಲಿ ಅನಾವರಣಗೊಂಡಿತ್ತು. ಭರ್ಜರಿ ಫೀಚರ್​ಗಳ ಜೊತೆಗೆ ಸಾಕಷ್ಟು ಬಲಿಷ್ಠವಾಗಿರುವ ಈ ಫೋನ್​ನಲ್ಲಿ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ಅಳವಡಿಸಲಾಗಿದೆ. ಈ ಫೋನಿನ ವಿಶೇಷತೆ, ಬೆಲೆ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಇದೇ ತಿಂಗಳಲ್ಲಿ ಭಾರತಕ್ಕೆ ಕಾಲಿಡಲಿದೆಯಂತೆ. ಮೊನ್ನೆ ಯುರೋಪ್‌ನಲ್ಲಿ ಮಾತ್ರ ರಿಲೀಸ್ ಆದ ಈ ಫೋನ್ ಬೆಲೆ EUR 599.99, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 54,000 ರೂ. ಇರಬಹುದು. ಇದು 8GB RAM + 256GB ಸ್ಟೋರೇಜ್ ಆಯ್ಕೆಯಿಂದ ಕೂಡಿದೆ. ಎಕ್ಲಿಪ್ಸ್ ಬ್ಲ್ಯಾಕ್, ಲೂನಾರ್ ಬ್ಲೂ ಮತ್ತು ನೆಬ್ಯುಲಾ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.

AGI: ‘ಹತ್ತಿಪ್ಪತ್ತು ವರ್ಷಗಳಲ್ಲಿ ಸಾರ್ವತ್ರಿಕ ಕೃತಕ ಬುದ್ಧಿಮತ್ತೆಯ ಕನಸು ಸಾಕಾರವಾದೀತು’

ಫೀಚರ್ಸ್ ಏನಿದೆ?:

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ+ ಫೋಲ್ಡ್‌ ಸ್ಕ್ರೀನ್‌ ಅನ್ನು ಹೊಂದಿದೆ. 144Hz ರಿಫ್ರೆಶ್ ರೇಟ್, 360 Hz ಟಚ್ ಸ್ಯಾಂಪ್ಲಿಂಗ್ ರೇಟ್ ನೀಡಲಾಗಿದೆ. ಬಲಿಷ್ಠವಾದ ಮಿಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಿಂದ ಕೂಡಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್ ಮ್ಯಾಕ್ರೋ ವಿಷನ್ ಅನ್ನು ಹೊಂದಿದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ತಕ್ಕಂತೆ 68W ಟರ್ಬೋಪವರ್ ವೈರ್ಡ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಉಳಿದಂತೆ 4G LTE ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆಗಳನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ