Moto G73 5G: ಭಾರತದಲ್ಲಿ ರೋಚಕತೆ ಸೃಷ್ಟಿಸಿದ ಮೋಟೋ G73 5G ಫೋನ್‌ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?

ಕಳೆದ ವಾರ ಭಾರತದ ಮಾರುಕಟ್ಟೆಯಲ್ಲಿ ಹೊಸ ಮೋಟೋ ಜಿ73 5ಜಿ (Moto G73 5G) ಎಂಬ ಫೋನ್ ಅನಾವರಣ ಮಾಡಿತ್ತು. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ. ಇದೀಗ ಈ ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯವಾಗುತ್ತಿದೆ.

Moto G73 5G: ಭಾರತದಲ್ಲಿ ರೋಚಕತೆ ಸೃಷ್ಟಿಸಿದ ಮೋಟೋ G73 5G ಫೋನ್‌ ಈಗ ಖರೀದಿಗೆ ಲಭ್ಯ: ಆಫರ್ ಏನಿದೆ?
Moto G73 5G
Follow us
Vinay Bhat
|

Updated on: Mar 16, 2023 | 2:54 PM

ಟೆಕ್ ಮಾರುಕಟ್ಟೆಯಲ್ಲಿ ವಿಶಿಷ್ಟ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುವುದರಲ್ಲಿ ಮೋಟೋರೊಲಾ (Motorola) ಕಂಪನಿ ಎತ್ತಿದ ಕೈ. ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ಮೋಟೋಮೊನ್ನೆಯಷ್ಟೆ ಹೊಸ ಸ್ಮಾರ್ಟ್​ಫೋನ್​ನೊಂದಿಗೆ (Smartphone) ಸದ್ದು ಮಾಡಿತ್ತು. ಕಳೆದ ವಾರ ಭಾರತದ ಮಾರುಕಟ್ಟೆಯಲ್ಲಿ ಹೊಸ ಮೋಟೋ ಜಿ73 5ಜಿ (Moto G73 5G) ಎಂಬ ಫೋನ್ ಅನಾವರಣ ಮಾಡಿತ್ತು. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ. ಇದೀಗ ಈ ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯವಾಗುತ್ತಿದೆ.

ಬೆಲೆ ಎಷ್ಟು?:

ಮೋಟೋ G73 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆಯಷ್ಟೆ. ಇದರ 8GB RAM + 128GB ಸ್ಟೋರೇಜ್‌ ರೂಪಾಂತರಕ್ಕೆ 18,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮತ್ತು ಆಯ್ದ ರಿಟೆಲ್ ಸ್ಟೋರ್​ಗಳ ಮೂಲಕ ಖರೀದಿಸಬಹುದು. ಆಫರ್ ಕೂಡ ಘೋಷಣೆ ಮಾಡಲಾಗಿದ್ದು, ಆಯ್ದ ಬ್ಯಾಂಕ್ ಕಾರ್ಡ್​ಗಳಿಗೆ 2,000 ರೂ. ಡಿಸ್ಕೌಂಟ್ ಸಿಗುತ್ತದೆ. ನೋ ಕಾಸ್ಟ್ ಇಎಮ್​ಐ ಆಯ್ಕೆ ಕೂಡ ಇದೆ.

Meta Layoff: ಮೆಟಾದಿಂದ ಎರಡನೇ ಸುತ್ತಿನ ಉದ್ಯೋಗ ಕಡಿತ ಘೋಷಣೆ; ಕೆಲಸ ಕಳೆದುಕೊಳ್ಳಲಿದ್ದಾರೆ 10 ಸಾವಿರ ಮಂದಿ

ಫೀಚರ್ಸ್ ಏನಿದೆ?:

ಮೋಟೋ G73 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್​ರೇಟ್​ನಿಂದ ಕೂಡಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್​ನಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಪ್ರಿಯರಿಗೆ ಈ ಫೋನ್ ಇಷ್ಟವಾಗಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಸಪೋರ್ಟ್ ಮಾಡುತ್ತದೆ. ಇದರೊಂದಿಗೆ 3.5mm ಹೆಡ್‌ಫೋನ್ ಜ್ಯಾಕ್, ವೈ-ಫೈ 802.11, ಬ್ಲುಟೂತ್ 5.3, ಯುಎಸ್​ಬು ಟೈಪ್-ಸಿ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿರಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್