Motorola Edge 40: ಬೊಂಬಾಟ್ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್: ಮಾರುಕಟ್ಟೆಗೆ ಎಂಟ್ರಿಕೊಟ್ಟ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌

ಬಜೆಟ್ ಬೆಲೆಯಿಂದ ಹಿಡಿದು ಹೈ-ರೇಂಜ್ ಮಾದರಿಯ ವರೆಗೆ ಆಕರ್ಷಕ ಮೊಬೈಲ್​ಗಳನ್ನು ಅನಾವರಣ ಮಾಡುವ ಮೋಟೋ ಇದೀಗ ಹೊಸ ಮೋಟೋರೊಲಾ ಎಡ್ಜ್‌ 40 (Motorola Edge 40) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

Motorola Edge 40: ಬೊಂಬಾಟ್ ಕ್ಯಾಮೆರಾ, ಬಲಿಷ್ಠ ಪ್ರೊಸೆಸರ್: ಮಾರುಕಟ್ಟೆಗೆ ಎಂಟ್ರಿಕೊಟ್ಟ ಮೋಟೋ ಎಡ್ಜ್‌ 40 ಸ್ಮಾರ್ಟ್‌ಫೋನ್‌
motorola edge 40

Updated on: May 07, 2023 | 1:23 PM

ವಿಶ್ವದಲ್ಲಿ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಸ್ಮಾರ್ಟ್​​ಫೋನ್ ಬ್ರ್ಯಾಂಡ್​​ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್​ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ-ರೇಂಜ್ ಮಾದರಿಯ ವರೆಗೆ ಆಕರ್ಷಕ ಮೊಬೈಲ್​ಗಳನ್ನು ಅನಾವರಣ ಮಾಡುವ ಮೋಟೋ ಇದೀಗ ಹೊಸ ಮೋಟೋರೊಲಾ ಎಡ್ಜ್‌ 40 (Motorola Edge 40) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಭರ್ಜರಿ ಫೀಚರ್​ಗಳ ಜೊತೆಗೆ ಸಾಕಷ್ಟು ಬಲಿಷ್ಠವಾಗಿರುವ ಈ ಫೋನ್​ನಲ್ಲಿ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ಅಳವಡಿಸಲಾಗಿದೆ. ಈ ಫೋನಿನ ವಿಶೇಷತೆ, ಬೆಲೆ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಯುರೋಪ್‌ನಲ್ಲಿ ಮಾತ್ರ ರಿಲೀಸ್ ಆಗಿದೆ. ಕೆಲ ಸಮಯದ ಬಳಿಕ ಭಾರತಕ್ಕೂ ಕಾಲಿಡಲಿದೆ. ಯುರೋಪ್‌ನಲ್ಲಿ ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ EUR 599.99, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 54,000 ರೂ. ಇರಬಹುದು. ಇದು 8GB RAM + 256GB ಸ್ಟೋರೇಜ್ ಆಯ್ಕೆಯಿಂದ ಕೂಡಿದೆ. ಎಕ್ಲಿಪ್ಸ್ ಬ್ಲ್ಯಾಕ್, ಲೂನಾರ್ ಬ್ಲೂ ಮತ್ತು ನೆಬ್ಯುಲಾ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.

ಇದನ್ನೂ ಓದಿ
Realme 11 Pro Plus: ಮೂರೇ ದಿನ ಬಾಕಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ 200MP ಕ್ಯಾಮೆರಾ ಸ್ಮಾರ್ಟ್​ಫೋನ್
WhatsApp: ವಾಟ್ಸ್​ಆ್ಯಪ್​ನಲ್ಲಿ ಚಾಟ್ ಲಾಕ್ ಹಾಗೂ ಹೈಡ್ ಮಾಡುಬಹುದು: ಬರುತ್ತಿದೆ ಹೊಸ ಫೀಚರ್
Poco F5 Pro 5G: ಮೇ 9ಕ್ಕೆ ಬಹುನಿರೀಕ್ಷಿತ ಪೋಕೋ F5 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ
WhatsApp New Feature: ಮೆಟಾದಿಂದ ಮಹತ್ವದ ನಿರ್ಧಾರ: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಇರಲ್ಲ ಸ್ಕ್ಯಾಮ್ ಕರೆಗಳ ಕಿರಿ ಕಿರಿ

Tech Tips: 5G ಇಂಟರ್ನೆಟ್ ಬಳಸುವಾಗ ಡೇಟಾ ಸೇವ್ ಮಾಡುವುದು ಹೇಗೆ?; ಇಲ್ಲಿದೆ ನೋಡಿ ಟ್ರಿಕ್ಸ್

ಫೀಚರ್ಸ್ ಏನಿದೆ?:

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ+ ಫೋಲ್ಡ್‌ ಸ್ಕ್ರೀನ್‌ ಅನ್ನು ಹೊಂದಿದೆ. 144Hz ರಿಫ್ರೆಶ್ ರೇಟ್, 360 Hz ಟಚ್ ಸ್ಯಾಂಪ್ಲಿಂಗ್ ರೇಟ್ ನೀಡಲಾಗಿದೆ. ಬಲಿಷ್ಠವಾದ ಮಿಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಿಂದ ಕೂಡಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್ ಮ್ಯಾಕ್ರೋ ವಿಷನ್ ಅನ್ನು ಹೊಂದಿದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ತಕ್ಕಂತೆ 68W ಟರ್ಬೋಪವರ್ ವೈರ್ಡ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಉಳಿದಂತೆ 4G LTE ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆಗಳನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ