Moto G22: 50MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 10,999 ರೂ. ಗೆ ಮೋಟೋದಿಂದ ಅಚ್ಚರಿ ಫೋನ್ ಬಿಡುಗಡೆ
ಮೋಟೋರೊಲಾ ಇಂದು ಭಾರತದಲ್ಲಿ ತನ್ನ ಹೊಸ ಮೋಟೋ ಜಿ22 (Moto G22) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಈ ಫೋನಿನಲ್ಲಿ ಅಚ್ಚರಿ ಎಂಬಂತೆ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50MP ಸೆನ್ಸಾರ್ ನೀಡಲಾಗಿದೆ.
ಭಾರತದಲ್ಲೀಗ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳಿಗೆ (Budget Smartphone) ಭರ್ಜರಿ ಬೇಡಿಕೆ ಶುರುವಾಗಿದೆ. ಮೊದಲ ಬಾರಿಗೆ ಮೊಬೈಲ್ ಕೊಂಡುಕೊಳ್ಳುವವರ ಮೊದಲ ಆಯ್ಕೆ ಕಡಿಮೆ ಬೆಲೆಯ ಅತ್ಯುತ್ತಮ ಫೋನ್ ಆಗಿದೆ. ಇದನ್ನೇ ಟಾರ್ಗೆಟ್ ಮಾಡಿರುವ ಮೊಬೈಲ್ ಕಂಪನಿಗಳು ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಇದೀಗ ಈ ಸಾಲಿಗೆ ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಕೂಡ ಸೇರ್ಪಡೆಯಾಗಿದೆ. ಹೌದು, ಮೋಟೋರೊಲಾ ಇಂದು ಭಾರತದಲ್ಲಿ ತನ್ನ ಹೊಸ ಮೋಟೋ ಜಿ22 (Moto G22) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಈ ಫೋನಿನಲ್ಲಿ ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್ ಇದೆ. ಅಚ್ಚರಿ ಎಂಬಂತೆ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50MP ಸೆನ್ಸಾರ್ ನೀಡಲಾಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಸೇರಿದಂತೆ ಇತರೆ ಮಾಹಿತಿ ತಿಳಿದುಕೊಳ್ಳೋಣ.
ಬೆಲೆ ಎಷ್ಟು?:
ಮೋಟೋ G22 ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ರಿಲೀಸ್ ಆಗಿದೆ. ಇದರ 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯಕ್ಕೆ ಕೇವಲ 10,999 ರೂ. ನಿಗದಿ ಮಾಡಲಾಗಿದೆ. ಬ್ಯಾಂಕ್ ಆಫರ್ನಲ್ಲಿ ರಿಯಾಯಿ ಕೂಡ ನೀಡಲಾಗಿದ್ದು 9,999 ರೂ. ಗೆ ನಿಮ್ಮದಾಗಿಸಬಹುದು. ಈ ಆಫರ್ ಏಪ್ರಿಲ್ 13 ಮತ್ತು ಏಪ್ರಿಲ್ 14 ರಂದು ಮಾತ್ರ ಲಭ್ಯವಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಏಪ್ರಿಲ್ 13 ರಿಂದ ಇದು ಖರೀದಿಗೆ ಸಿಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ಯುರೋಪಿಯನ್ ಮಾರುಕಟ್ಟೆಗಳಲ್ಲಿ ಅಧಿಕೃತಗೊಳಿಸಲಾಗಿತ್ತು. ಯುರೋಪ್‌ನಲ್ಲಿ ಮೋಟೋ G22 ಫೋನ್ ಯುರೋ 169.99 ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನ್ ನೀಲಿ ಮತ್ತು ಕಪ್ಪು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.
ಏನು ವಿಶೇಷತೆ?:
ಮೋಟೋ G22 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇ 84.2% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದ್ದು, ರಚನೆಯ ಅನುಪಾತ 20:9 ಇಂದ ಕೂಡಿದೆ. ಮೀಡಿಯಾಟೆಕ್ ಹಿಲಿಯೋ G37 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ನೀಡಿದೆ.
ಆಕರ್ಷಕವಾದ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇಷ್ಟು ಕಡಿಮೆ ಬೆಲೆಯಲ್ಲಿ 8 ಮೆಗಾಫಿಕ್ಸೆಲ್ನ ಆಲ್ಟ್ರಾವೈಡ್ ಲೆನ್ಸ್ ಸಾಮರ್ಥ್ಯವಿರುವ ಫೋನ್ ಬರುತ್ತಿರುವುದು ಇದೇ ಮೊದಲು.
ಮೋಟೋ G22 ಸ್ಮಾರ್ಟ್‌ಫೋನ್ 20W ಟರ್ಬೋಚಾರ್ಜಿಂಗ್ ಬೆಂಬಲಿಸುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊ ಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್ ಅನ್ನು ಒಳಗೊಂಡಿದೆ.
Vivo Y21G: ಭಾರತದಲ್ಲಿ ಕೇವಲ 13,990 ರೂಪಾಯಿಗೆ ಲಾಂಚ್ ಆಗಿದೆ ವಿವೋ Y21G ಸ್ಮಾರ್ಟ್‌ಫೋನ್
Realme GT 2 Pro: ಭಾರತದಲ್ಲಿ ರಿಯಲ್ ಮಿ GT 2 ಪ್ರೊ ಫೋನ್ ಬಿಡುಗಡೆ: ಖರೀದಿಸಲು ಕ್ಯೂ ಗ್ಯಾರಂಟಿ