AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G31: ಹೊಸ ವರ್ಷಕ್ಕೆ ಬಿಗ್ ಶಾಕ್: ಈ ಎರಡು ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬರೋಬ್ಬರಿ 3000 ರೂ. ಏರಿಕೆ

Moto G51: ಮೋಟೋ G31 ಸ್ಮಾರ್ಟ್‌ಫೋನ್ 4GB RAM ಮತ್ತು 64GB ವೇರಿಯಂಟ್‌ ಆಯ್ಕೆಯನ್ನು 12,999 ರೂ.ಗಳಿಗೆ ಬಿಡುಗಡೆ ಮಾಡಿತ್ತು. ಇದೀಗ ಈ  ವೇರಿಯಂಟ್‌ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆಯನ್ನು 13,999 ರೂ. ಗಳಿಗೆ ಏರಿಕೆ ಮಾಡಿದೆ.

Moto G31: ಹೊಸ ವರ್ಷಕ್ಕೆ ಬಿಗ್ ಶಾಕ್: ಈ ಎರಡು ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬರೋಬ್ಬರಿ 3000 ರೂ. ಏರಿಕೆ
Moto G31 and Moto G51
TV9 Web
| Updated By: Vinay Bhat|

Updated on: Jan 01, 2022 | 12:50 PM

Share

ಹೊಸ ವರ್ಷದ ಬೆಲೆ ಏರಿಕೆ ಬಿಸಿ ಸ್ಮಾರ್ಟ್​ಫೋನ್ (Smartphone) ಪ್ರಿಯರಿಗೂ ತಟ್ಟಿದೆ. ಹೌದು, ನ್ಯೂ ಈಯರ್ (New Year) ಪ್ರಯುಕ್ತ ಬಹುತೇಕ ಸ್ಮಾರ್ಟ್​ಫೋನ್​ಗಳು ಆಫರ್​ಗಳಿಗೆ ಸೇಲ್ ಆಗುತ್ತಿದ್ದರೆ ಇತ್ತ ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ತನ್ನ ಎರಡು ಫೋನ್​ಗಳು ಬೆಲೆಯಲ್ಲಿ ಭರ್ಜರಿ ಏರಿಕೆ ಮಾಡಿದೆ. ಒಂದು ತಿಂಗಳ ಹಿಂದೆ ಭಾರತದಲ್ಲಿ ಬಿಡುಗಡೆಯಾದ ಮೋಟೋ ಜಿ31 (Moto G31) ಮತ್ತು ಮೋಟೋ ಜಿ51 (Moto G51) ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಬರೋಬ್ಬರಿ 3,000 ರೂ.ಗಳ ತನಕ ಬೆಲೆ ಹೆಚ್ಚಳ ಮಾಡಿದೆ. ಮೋಟೋ G31 ಸ್ಮಾರ್ಟ್‌ಫೋನ್‌ ನವೆಂಬರ್ 29 ರಂದು ಮತ್ತು ಮೋಟೋ G51 ಡಿಸೆಂಬರ್ 10 ರಂದು ದೇಶದಲ್ಲಿ ಬಿಡುಗಡೆ ಆಗಿತ್ತು. ಇದೀಗ ಬಿಡುಗಡೆಯಾದ ಕೇವಲ ಒಂದು ತಿಂಗಳ ಅವಧಿಯಲ್ಲಿ ಈ ಎರಡೂ ಫೋನ್​ಗಳ ಬೆಲೆಯಲ್ಲಿ ಹೆಚ್ಚಳವನ್ನು ಮಾಡಲಾಗಿದೆ.

ಮೋಟೋ G31 ಸ್ಮಾರ್ಟ್‌ಫೋನ್ 4GB RAM ಮತ್ತು 64GB ವೇರಿಯಂಟ್‌ ಆಯ್ಕೆಯನ್ನು 12,999 ರೂ.ಗಳಿಗೆ ಬಿಡುಗಡೆ ಮಾಡಿತ್ತು. ಇದೀಗ ಈ  ವೇರಿಯಂಟ್‌ ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆಯನ್ನು 13,999 ರೂ. ಗಳಿಗೆ ಏರಿಕೆ ಮಾಡಿದೆ. ಇನ್ನು 14,999ರೂ. ಬೆಲೆಯಲ್ಲಿ ಲಭ್ಯವಾಗುತ್ತಿದ್ದ 6GB RAM ರೂಪಾಂತರವು ಈಗ ಭಾರತದಲ್ಲಿ 16,999 ರೂ. ಗಳಿಗೆ ಲಭ್ಯವಾಗಲಿದೆ. ಅದೇ ರೀತಿ, ಮೋಟೋ G51 ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಆಯ್ಕೆಗೆ 14,999 ರೂ. ಬೆಲೆಯಲ್ಲಿ ಲಾಂಚ್‌ ಮಾಡಲಾಗಿತ್ತು. ಈ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ 3000 ರೂ. ಗಳಷ್ಟು ಏರಿಕೆ ಮಾಡಲಾಗಿದ್ದು, ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೆಲೆ ಈಗ 17,999 ರೂ. ಆಗಿದೆ.

ಮೋಟೋ G31 ಸ್ಮಾರ್ಟ್‌ಫೋನ್‌ ಮೊಟೊ G31 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.4 ಇಂಚಿನ ಪೂರ್ಣ ಹೆಚ್‌ಡಿ OLED ಡಿಸ್‌ಪ್ಲೇ ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ.

ಇನ್ನು ಮೋಟೋ G51 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ v11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ S5JKN1 ಸೆನ್ಸಾರ್‌ ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಆಟೋ ಫೋಕಸ್‌, ಫ್ಲ್ಯಾಶ್‌, ಅನ್ನು ಪಡೆದುಕೊಂಡಿದೆ. ಮೋಟೋ G51 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Flipkart Year End sale: ಇಂದೇ ಕೊನೆಯ ದಿನ: ವರ್ಷಾಂತ್ಯಕ್ಕೆ ಈ ಸ್ಮಾರ್ಟ್​ಫೋನ್ ಮೇಲೆ ಬಿಗ್ ಡಿಸ್ಕೌಂಟ್

(Motorola has increased the price of the Moto G31 and Moto G51 a month after the smartphones were released)

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್