Moto G72: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ 108MP ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದು?, ಎಷ್ಟು ರೂ.

ಮೋಟೋರೊಲಾ ಇದೀಗ ತನ್ನ ಮೊಟೊ G ಸರಣಿಯಲ್ಲಿ ಮೋಟೋ ಜಿ72 (Moto G72) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ವಿಶೇಷ ಎಂದರೆ ಈ ಸ್ಮಾರ್ಟ್​ಫೋನ್​ನಲ್ಲಿ ಬರೋಬ್ಬರಿ 108 ಮೆಗಾಪಿಕ್ಸಲ್‌ ಮುಖ್ಯ ಕ್ಯಾಮೆರಾ ನೀಡಲಾಗಿದೆ.

Moto G72: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ 108MP ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದು?, ಎಷ್ಟು ರೂ.
Moto G72
Follow us
TV9 Web
| Updated By: Vinay Bhat

Updated on:Oct 03, 2022 | 2:05 PM

ದಿನದಿಂದ ದಿನಕ್ಕೆ ಮೋಟೋರೊಲಾ (Motorola) ಕಂಪನಿಯ ಫೋನ್​ಗಳಿಗೆ ಭಾರತದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ತಯಾರು ಮಾಡುತ್ತಿರುವ ಮೋಟೋ ಒಂದರ ಹಿಂದೆ ಒಂದರಂತೆ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೊಟ್ಟ ಮೊದಲ ಫೋನನ್ನು ಅನಾವರಣ ಮಾಡಿ ಭರ್ಜರಿ ಸದ್ದು ಮಾಡಿದ್ದ ಮೋಟೋರೊಲಾ ಇದೀಗ ತನ್ನ ಮೊಟೊ G ಸರಣಿಯಲ್ಲಿ ಮೋಟೋ ಜಿ72 (Moto G72) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ವಿಶೇಷ ಎಂದರೆ ಈ ಸ್ಮಾರ್ಟ್​ಫೋನ್​ನಲ್ಲಿ ಬರೋಬ್ಬರಿ 108 ಮೆಗಾಪಿಕ್ಸಲ್‌ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಮೋಟೋ G72 ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ ಕೇವಲ 18,999 ರೂ., ಇದು 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದೇ ಅಕ್ಟೋಬರ್ 12 ರಂದು ಮಧ್ಯಾಹ್ನ 12 ಗಂಟೆಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಸೇಲ್ ಕಾಣಲಿದೆ. ಮೊದಲ ಸೇಲ್ ಪ್ರಯುಕ್ತ 1,000 ರೂ. ಗಳ ಡಿಸ್ಕೌಂಟ್ ಪಡೆಯಬಹುದು. ಜೊತೆಗೆ ಆಯ್ದ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 3,000 ರೂ. ಗಳ ರಿಯಾಯಿತಿ ನೀಡಲಾಗಿದೆ. ಎಕ್ಸ್​ಚೇಂಜ್ ಆಫರ್ ಕೂಡ ಲಭ್ಯವಿದೆ.

ಇದು 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿದ್ದು, 6.6 ಇಂಚಿನ ಫುಲ್​ ಹೆಚ್​ಡಿ+ pOLED ಡಿಸ್‌ಪ್ಲೇ ಹೊಂದಿದೆ. 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗದ ಜೊತೆ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇದನ್ನೂ ಓದಿ
Image
Redmi Note 12 Pro Plus: ಬರೋಬ್ಬರಿ 210W ಫಾಸ್ಟ್ ಚಾರ್ಜರ್: ಟೆಕ್ ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಲು ಮುಂದಾದ ಶವೋಮಿ
Image
Vivo Y52 5G: 5000mAh ಬ್ಯಾಟರಿ, 50MP ಕ್ಯಾಮೆರಾ: ವಿವೋದಿಂದ ಮಧ್ಯಮ ಬೆಲೆಗೆ ಬೊಂಬಾಟ್ ಸ್ಮಾರ್ಟ್​ಫೋನ್ ಬಿಡುಗಡೆ
Image
5G ಸೇವೆಗಳ ನಂತರ ಇದೀಗ 6G ವಿಭಾಗದಲ್ಲಿ ಮುನ್ನಡೆ ಸಾಧಿಸಲಿರುವ ಭಾರತ
Image
WhatsApp: ಆಂಡ್ರಾಯ್ಡ್ ಮತ್ತು ಐಫೋನ್​ನಲ್ಲಿ ವಾಟ್ಸ್​ಆ್ಯಪ್ ಡಿಸಪಿಯರಿಂಗ್ ಮೆಸೇಜ್ ಸಕ್ರಿಯಗೊಳಿಸುವುದು ಹೇಗೆ?

6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯೊಂದಿಗೆ ರಿಲೀಸ್ ಆಗಿದೆ. ಹಾಗೆಯೇ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ಇರಲಿದೆ. IP52 ರೇಟಿಂಗ್ ಅನ್ನು ಸಹ ಹೊಂದಿದ್ದು, ವಾಟರ್ ರೆಸಿಸ್ಟೆನ್ಸ್‌ ಆಯ್ಕೆ ಪಡೆದಿದೆ. ಡಾಬ್ಲಿ ಅಟ್ಮೋಸ್‌ ಆಡಿಯೋದೊಂದಿಗೆ ಸ್ಟಿರಿಯೊ ಸ್ಪೀಕರ್ ರಚನೆಯನ್ನು ಈ ಸ್ಮಾರ್ಟ್‌ಫೋನ್‌ ಪಡೆದಿರುವುದು ವಿಶೇಷ.

ಮೋಟೋ G72 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇದು ಫೋಟೋಗ್ರಫಿಗೆ ಹೇಳಿಮಾಡಿಸಿದಂತಿದೆ. ಸ್ಯಾಮ್​ಸಂಗ್ HM6 ಸೆನ್ಸಾರ್ ನೀಡಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಫಿಕ್ಸೆಲ್​ನ ಆಲ್ಟ್ರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಮೂರನೇ ಕ್ಯಾಮೆರಾ 2 ಮೆಗಾಫಿಕ್ಸೆಲ್​ನ ಮೈಕ್ರೋ ಶೂಟರ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ನೀಡಲಾಗಿದ್ದು, 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಕೂಡ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ ಎಂಬುದು ಬೇಸರದ ಸಂಗತಿ. 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ನೀಡಲಾಗಿದೆ.

Published On - 2:05 pm, Mon, 3 October 22

ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ