AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moto G Power 2022: 5000mAh ಬ್ಯಾಟರಿ, ಪವರ್​ಫುಲ್ ಚಾರ್ಜರ್: ಮೋಟೋ G ಪವರ್‌ 2022 ಸ್ಮಾರ್ಟ್‌ಫೋನ್‌ ಬಿಡುಗಡೆ

ಮೋಟೋರೊಲಾ ಸದ್ಯ ಹೊಸ ಮೋಟೋ ಜಿ ಪವರ್ 2022 (Moto G Power 2022) ಅನ್ನು ಬಿಡುಗಡೆ ಮಾಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್, 5,000mAh ಸಾಮರ್ಥ್ಯದ ಬ್ಯಾಟರಿ, 10W ವೇಗದ ಚಾರ್ಜಿಂಗ್‌ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಈ ಫೋನ್ ಕೂಡಿದೆ.

Moto G Power 2022: 5000mAh ಬ್ಯಾಟರಿ, ಪವರ್​ಫುಲ್ ಚಾರ್ಜರ್: ಮೋಟೋ G ಪವರ್‌ 2022 ಸ್ಮಾರ್ಟ್‌ಫೋನ್‌ ಬಿಡುಗಡೆ
Moto G Power (2022)
TV9 Web
| Updated By: Vinay Bhat|

Updated on: Nov 18, 2021 | 1:07 PM

Share

ಮೊಬೈಲ್ ಮಾರುಕಟ್ಟೆಯಲ್ಲಿ ಸಾಕಷ್ಟು ಹೆಸರು ಮಾಡಿರುವ ಮೋಟೋರೊಲಾ (Motorola) ಕಂಪನಿ ಈಗೀಗ ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸಿ ಭದ್ರವಾಗಿ ನೆಲೆಯೂರಲು ಪ್ರಯತ್ನ ಪಡುತ್ತಿದೆ. ಇದಕ್ಕಾಗಿಯೆ ಈ ವರ್ಷ ಬಿಡುಗಡೆಯಾಗಿರುವ ಮೋಟೋ ಜಿ ಪವರ್​ನ (Moto G Power) ಉತ್ತರಾಧಿಕಾರಿಯಾಗಿ ಹೊಸ ಸ್ಮಾರ್ಟ್​ಫೋನ್ ಒಂದನ್ನು ಪರಿಚಯಿಸಿದೆ. ಹೌದು, ಮೋಟೋರೊಲಾ ಸದ್ಯ ಹೊಸ ಮೋಟೋ ಜಿ ಪವರ್ 2022 (Moto G Power 2022) ಅನ್ನು ಬಿಡುಗಡೆ ಮಾಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್, 5,000mAh ಸಾಮರ್ಥ್ಯದ ಬ್ಯಾಟರಿ, 10W ವೇಗದ ಚಾರ್ಜಿಂಗ್‌ ಸೇರಿದಂತೆ ಆಕರ್ಷಕ ಫೀಚರ್​ಗಳಿಂದ ಈ ಫೋನ್ ಕೂಡಿದೆ.

ಮೋಟೋ G ಪವರ್‌ 2022 ಸ್ಮಾರ್ಟ್‌ಫೋನ್‌ US ನಲ್ಲಿ 4GB RAM ಮತ್ತು 64GB ರೂಪಾಂತರದ ಆಯ್ಕೆಗೆ $199. ಅಂದರೆ ಭಾರತದಲ್ಲಿ ಇದರ ಬೆಲೆ ಸುಮಾರು 14,000 ರೂ. ಎನ್ನಬಹುದು. ಜೊತೆಗೆ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ರೂಪಾಂತರದೊಂದಿಗೆ ಬರುವ ಸಾದ್ಯತೆ ಕೂಡ ಇದ್ದು, ಇದು $249 ಬೆಲೆ ಹೊಂದಿರಲಿದೆ ಎನ್ನಲಾಗಿದೆ. ಭಾರತ ಸೇರಿದಂತೆ ಇತರ ದೇಶಗಳಲ್ಲಿ ಈ ಸ್ಮಾರ್ಟ್‌ಫೋನ್ ಸದ್ಯದಲ್ಲೇ ಬಿಡುಗಡೆ ಆಗಲಿದೆಯಂತೆ.

ಮೋಟೋ G ಪವರ್‌ (2022) ಸ್ಮಾರ್ಟ್‌ಪೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ IPS LCD ಸ್ಕ್ರೀನ್​ನಿಂದ ಕೂಡಿದೆ. ಮೀಡಿಯಾಟೆಕ್‌ ಹಿಲಿಯೋ G37 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಸ್ಮಾರ್ಟ್‌ಫೋನ್ ಕಾರ್ಯನಿರ್ವಹಿಸುತ್ತದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಪಡೆದಿದೆ. ಇದರೊಂದಿಗೆ 8MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಟಾ, ಬ್ಲೂಟೂತ್‌, ವೈಫೈ ಸೇರಿದಂತೆ ಇತ್ತೀಚೆಗಿನ ಹೊಸ ಆಯ್ಕೆಯಿಂದ ಕೂಡಿದೆ.

Infinix Smart 5 Pro: 6000mAh ಬ್ಯಾಟರಿಯ ಅತೀ ಕಡಿಮೆ ಬೆಲೆಯ ಸ್ಮಾರ್ಟ್​ಫೋನ್ ಬಿಡುಗಡೆ

(Motorola has now launched the Moto G Power 2022 with Helio G37 SoC and 5000mAh battery)

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ