Moto G82 5G: ಮೋಟೋ G82 ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್: ಈ ಆಫರ್ ಮಿಸ್ ಮಾಡ್ಬೇಡಿ

|

Updated on: Mar 07, 2023 | 6:50 AM

ಮೋಟೋ ಕಂಪನಿ ಕಳೆದ ವರ್ಷ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡಿದ ಮೋಟೋ ಜಿ82 5ಜಿ (Moto G82 5G) ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ OIS ಬೆಂಬಲವನ್ನು ಹೊಂದಿದೆ.

Moto G82 5G: ಮೋಟೋ G82 ಸ್ಮಾರ್ಟ್​ಫೋನ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್: ಈ ಆಫರ್ ಮಿಸ್ ಮಾಡ್ಬೇಡಿ
Moto G82
Follow us on

ಜಾಗತಿಕ ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ಶವೋಮಿ (Xiaomi), ರಿಯಲ್ ಮಿ, ಸ್ಯಾಮ್​ಸಂಗ್ ಹಾಗೂ ಒನ್​ಪ್ಲಸ್​ ನಂತಹ ಘಟಾನುಘಟಿ ಮೊಬೈಲ್ ಬ್ರ್ಯಾಂಡ್​​ಗಳು ತಲೆಯೆತ್ತಿ ಮೆರೆಯುತ್ತಿರುವಾಗ ಮೋಟೋರೊಲಾ (Motorola) ಸಂಸ್ಥೆ ತನ್ನದೆಯಾದ ವಿಶೇಷ ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿ ಯಶಸ್ಸು ಸಾಧಿಸುತ್ತಿದೆ. ಭಾರತದಲ್ಲಿ ಕೂಡ ಮೋಟೋ ಕಂಪನಿಯ ಫೋನ್​ಗಳಿಗೆ ಅತ್ಯುತ್ತಮ ಬೇಡಿಕೆಯಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಹುನಿರೀಕ್ಷಿತ ಮೋಟೋ G73 ಅನಾವರಣಗೊಳ್ಳುವುದರಲ್ಲಿದೆ. ಇದರ ನಡುವೆ ಕಂಪನಿ ಕಳೆದ ವರ್ಷ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡಿದ ಮೋಟೋ ಜಿ82 5ಜಿ (Moto G82 5G) ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಈ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ OIS ಬೆಂಬಲವನ್ನು ಹೊಂದಿದೆ. ಹಾಗಾದ್ರೆ ಈ ಫೋನಿನ ನೂತನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​​ ಇದೆ?, ಇಲ್ಲಿದೆ ನೋಡಿ ಮಾಹಿತಿ.

ಮೋಟೋ G82 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಆಗಿತ್ತು. ಇದರ 6GB RAM ಮತ್ತು 128GB ಸ್ಟೋರೇಜ್‌ ಆಯ್ಕೆಗೆ 21,499 ರೂ. ಇತ್ತು. ಇದೀಗ ಇದರ ಬೆಲೆಯಲ್ಲಿ 1500 ರೂ. ಇಳಿಕೆ ಆಗಿದೆ. ಬೆಲೆ ಇಳಿಕೆ ಬಳಿಕ 6GB + 128GB ವೇರಿಯಂಟ್‌ ಕೇವಲ 19,999 ರೂ. ಗೆ ಮಾರಾಟ ಆಗುತ್ತಿದೆ. ಅದೇ ರೀತಿ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆ 22,999 ರೂ. ಆಗಿದೆ. ಇದನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಸಬಹುದು.

Jio vs Airtel: ದಿನಕ್ಕೆ 2GB ಡೇಟಾ: ಜಿಯೋ-ಏರ್ಟೆಲ್​ನ ಬಂಪರ್ ಪ್ಲಾನ್ ಇಲ್ಲಿದೆ ನೋಡಿ

ಇದನ್ನೂ ಓದಿ
Xiaomi 13 Pro: ಮೂರು ಕ್ಯಾಮೆರಾ ಕೂಡ 50MP ಸೆನ್ಸಾರ್: ಇಂದಿನಿಂದ ಶವೋಮಿ 13 ಪ್ರೊ ಖರೀದಿಗೆ ಲಭ್ಯ: 10,000 ರೂ. ಡಿಸ್ಕೌಂಟ್
Best Smartphones: ಕಡಿಮೆ ಬೆಲೆಯ ಮೊಬೈಲ್ ಬೇಕೇ?: ಇಲ್ಲಿದೆ ನೋಡಿ 10,000 ರೂ. ಒಳಗಿನ ಟಾಪ್ 5 ಸ್ಮಾರ್ಟ್​ಫೋನ್
WhatsApp Features: ಅಪರಿಚಿತರಿಂದ ಕರೆ ಬರುತ್ತಿದ್ದರೆ ಟೆನ್ಶನ್ ಬೇಡ: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಊಹಿಸಲಾಗದ ಫೀಚರ್
Vivo V27 Pro: ಭರ್ಜರಿ ಫೀಚರ್ಸ್​ನ ವಿವೋ V27 ಪ್ರೊ ಸ್ಮಾರ್ಟ್​ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಬೆಲೆ ಎಷ್ಟು?

ಈ ಸ್ಮಾರ್ಟ್‌ಫೋನ್‌ 1,080*2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ HD+ ಪೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದುಕೊಂಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಅಳವಡಿಸಲಾಗಿದ್ದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಮೋಟೋ G82 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಅನ್ನು ಬೆಂಬಲಿಸುತ್ತದೆ. ಇನ್ನು ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದಲ್ಲದೆ 16ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.1, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ