Moto G73 5G: ಭಾರತೀಯ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಇದರ ಫೀಚರ್ಸ್ ನೋಡಿ

ಮೋಟೋ ಇದೀಗ ಹೊಸ ಸ್ಮಾರ್ಟ್​ಫೋನ್​ವೊಂದನ್ನು (Smartphone) ರಿಲೀಸ್ ಮಾಡಲು ಸಜ್ಜಾಗಿ ನಿಂತಿದೆ. ಅದುವೇ ಮೋಟೋ ಜಿ73 5ಜಿ (Moto G73 5G). ಇದೇ ಮಾರ್ಚ್‌ 10 ರಂದು ಈ ಫೋನ್ ಭಾರತಕ್ಕೆ ಅಪ್ಪಳಿಸಲಿದೆ.

Moto G73 5G: ಭಾರತೀಯ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಇದರ ಫೀಚರ್ಸ್ ನೋಡಿ
Moto G73 5G
Follow us
|

Updated on:Mar 03, 2023 | 11:36 AM

ಟೆಕ್ ಮಾರುಕಟ್ಟೆಯಲ್ಲಿ ವಿಶಿಷ್ಟ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುವುದರಲ್ಲಿ ಮೋಟೋರೊಲಾ (Motorola) ಸಂಸ್ಥೆ ಎತ್ತಿದ ಕೈ. ಇಂದು ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ವರೆಗೆ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ಮೋಟೋ ಇದೀಗ ಹೊಸ ಸ್ಮಾರ್ಟ್​ಫೋನ್​ವೊಂದನ್ನು (Smartphone) ರಿಲೀಸ್ ಮಾಡಲು ಸಜ್ಜಾಗಿ ನಿಂತಿದೆ. ಅದುವೇ ಮೋಟೋ ಜಿ73 5ಜಿ (Moto G73 5G). ಇದೇ ಮಾರ್ಚ್‌ 10 ರಂದು ಈ ಫೋನ್ ಭಾರತಕ್ಕೆ ಅಪ್ಪಳಿಸಲಿದೆ. ಇದೊಂದು ಮಧ್ಯಮ ಬೆಲೆಗೆ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ. ಈ ಫೋನಿನ ಫೀಚರ್ಸ್ ಬಗ್ಗೆ ಕಂಪನಿ ಅಧಿಕೃತ ಮಾಹಿತಿ ತಿಳಿಸಿಲ್ಲ. ಆದರೆ, ಕೆಲ ವಿಶೇಷತೆ ಸೋರಿಕೆ ಆಗಿದೆ.

ಲೀಕ್ ಆಗಿರುವ ಮಾಹಿತಿಯ ಪ್ರಕಾರ, ಮೋಟೋ G73 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿರುವ ಸಾಧ್ಯತೆ ಇದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುವುದು ಖಚಿತವಾಗಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರಲಿದೆ.

WhatsApp Ban: ಭಾರತದಲ್ಲಿ 29 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ತಪ್ಪಿಯೂ ಹೀಗೆ ಮಾಡಬೇಡಿ

ಇದನ್ನೂ ಓದಿ
Image
Tech Tips: ನಿಮ್ಮ ಸ್ಮಾರ್ಟ್​ಫೋನ್ ಸೂಪರ್ ಫಾಸ್ಟ್ ಆಗ್ಬೇಕಾ?: ಮೊದಲು ಈ ಕೆಲಸ ಮಾಡಿ
Image
Battery Phones: ಈ ಸ್ಮಾರ್ಟ್​ಫೋನ್​ನಲ್ಲಿ ಒಮ್ಮೆ ಬ್ಯಾಟರಿ ಫುಲ್ ಮಾಡಿದ್ರೆ 100 ದಿನ ಚಾರ್ಜ್ ಬರುತ್ತದೆ
Image
Realme GT 3: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿಶ್ವದ ಅತಿ ವೇಗದ ಚಾರ್ಜಿಂಗ್ ಫೋನ್ ರಿಯಲ್‌ ಮಿ GT 3: ಬೆಲೆ ಎಷ್ಟು ಗೊತ್ತೇ?
Image
Vivo V27 Series: ಬೆರಗುಗೊಳಿಸುವ ಫೀಚರ್ಸ್: ಮಾರುಕಟ್ಟೆಗೆ ಎಂಟ್ರಿಕೊಟ್ಟ ವಿವೋ V27, V27 ಪ್ರೊ ಸ್ಮಾರ್ಟ್​ಫೋನ್

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್​ನಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಪಡೆದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ ಎಂದು ಹೇಳಲಾಗಿದೆ. ಕ್ಯಾಮೆರಾ ಪ್ರಿಯರಿಗೆ ಈ ಫೋನ್ ಇಷ್ಟವಾಗಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಸಪೋರ್ಟ್ ಮಾಡುತ್ತದೆ. ಇದರೊಂದಿಗೆ 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿರಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ಅಳವಡಿಸಲಾಗಿದೆಯಂತೆ. ಮೋಟೋ G73 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಮಾರ್ಚ್ 10 ರಂದು ಫ್ಲಿಪ್​ಕಾರ್ಟ್​ನಲ್ಲಿ ಬಿಡುಗಡೆಯಾಗಲಿದೆ. ಇದರ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 20,000ರೂ. ಆಸುಪಾಸಿನಲ್ಲಿ ಇರಬಹುದು ಎಂಬ ಮಾತಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:36 am, Fri, 3 March 23

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?