Moto G71 5G: ಬಿಡುಗಡೆಗೆ ಸಜ್ಜಾದ ಮೋಟೋ G71 5G ಸ್ಮಾರ್ಟ್‌ಫೋನ್‌: ಇದರ ಬೆಲೆ ಕೇವಲ 18,999 ರೂ.

ಮೋಟೋ G71 5G ಭಾರತೀಯ ಮಾರುಕಟ್ಟೆಯಲ್ಲಿ ಇದೇ ಜನವರಿ 10 ರಂದು ಬಿಡುಗಡೆ ಆಗಲಿದೆ. ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 ಚಿಪ್‌ಸೆಟ್‌ ಹೊಂದಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಜೊತೆಗೆ ಆಕರ್ಷಕ ಬ್ಯಾಟರಿ ಬ್ಯಾಕಪ್​ನಿಂದ ಕೂಡಿದೆ.

Moto G71 5G: ಬಿಡುಗಡೆಗೆ ಸಜ್ಜಾದ ಮೋಟೋ G71 5G ಸ್ಮಾರ್ಟ್‌ಫೋನ್‌: ಇದರ ಬೆಲೆ ಕೇವಲ 18,999 ರೂ.
Moto G71 5G
Follow us
TV9 Web
| Updated By: Vinay Bhat

Updated on: Jan 08, 2022 | 2:04 PM

ಕಳೆದ ವರ್ಷ 2021 ರಲ್ಲಿ ಮಾರುಕಟ್ಟೆಗೆ ಅತಿ ಹೆಚ್ಚು ಸ್ಮಾರ್ಟ್​ಫೋನ್​ಗಳನ್ನು (Smartphone) ಪರಿಚಯಿಸಿದ್ದ ಪ್ರಸಿದ್ಧ ಮೋಟೋರೊಲಾ (Motorola) ಕಂಪನಿ ಈ ವರ್ಷ ಕೂಡ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಇರಾದೆ ಇಟ್ಟುಕೊಂಡಿದೆ. ಈಗಾಗಲೇ 200 ಮೆಗಾಫಿಕ್ಸೆಲ್ ಕ್ಯಾಮೆರಾ ಸ್ಮಾರ್ಟ್​ಫೋನ್ ಅನ್ನು ತಯಾರು ಮಾಡುತ್ತಿದೆ. ಇದರ ನಡುವೆ ಇದೀಗ ಭಾರತದಲ್ಲಿ ತನ್ನ ಹೊಸ ಮೋಟೋ ಜಿ71 5ಜಿ (Moto G71 5G) ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಈ ಸ್ಮಾರ್ಟ್‌ಫೋನ್‌ ಭಾರತೀಯ ಮಾರುಕಟ್ಟೆಯಲ್ಲಿ ಇದೇ ಜನವರಿ 10 ರಂದು ಬಿಡುಗಡೆ ಆಗಲಿದೆ. ಈ ಫೋನ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 ಚಿಪ್‌ಸೆಟ್‌ ಹೊಂದಿದ್ದು, ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಜೊತೆಗೆ ಆಕರ್ಷಕ ಬ್ಯಾಟರಿ ಬ್ಯಾಕಪ್​ನಿಂದ ಕೂಡಿದೆ.

ಏನು ವಿಶೇಷತೆ?:

ಮೋಟೋ G71 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 ಚಿಪ್‌ಸೆಟ್‌ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ 3GB ವರ್ಚುವಲ್ RAM ತಂತ್ರಜ್ಞಾನವನ್ನು ಹೊಂದಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಹೊಂದಿದ್ದು, 30W ಟರ್ಬೊ ಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ 5, GPS / A-GPS, USB ಟೈಪ್-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್‌ನಂತಹ ಆಯ್ಕೆಗಳನ್ನು ಒದಗಿಸುತ್ತದೆ. ಈ ಫೋನಿನ ಬೆಲೆ ಕೂಡ ಬಹಿರಂಗವಾಗಿದ್ದು, 18,999 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಇದು ಬಿಡುಗಡೆ ಬಳಿಕ ಖರೀದಿಗೆ ಸಿಗಲಿದೆಯಂತೆ.

iQoo 9 Series: ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ ಐಕ್ಯೂ ಬಿಡುಗಡೆ ಮಾಡಿರುವ ಎರಡು ಹೊಸ ಸ್ಮಾರ್ಟ್​ಫೋನ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ