Moto G72: ಫೋಟೋಗ್ರಫಿಗೆ ಮೋಟೋ ಸಿದ್ಧಪಡಿಸಿದೆ ಆಕರ್ಷಕ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?

ಮೋಟೋರೊಲಾ ಇದೀಗ ತನ್ನ ಮೊಟೊ G ಸರಣಿಯಲ್ಲಿ ಮೋಟೋ G72 ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸಜ್ಜಾಗಿದೆ. ಇದೇ ಅಕ್ಟೋಬರ್‌ 3 ರಂದು ಅಧಿಕೃತವಾಗಿ ಈ ಫೋನ್ ಮಾರುಕಟ್ಟೆಗೆ ಅಪ್ಪಳಿಸಲಿದೆ.

Moto G72: ಫೋಟೋಗ್ರಫಿಗೆ ಮೋಟೋ ಸಿದ್ಧಪಡಿಸಿದೆ ಆಕರ್ಷಕ ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು?
Moto G72
Edited By:

Updated on: Sep 30, 2022 | 6:12 AM

ಮೋಟೋರೊಲಾ (Motorola) ಕಂಪನಿಯ ಫೋನ್​ಗೆ ಭಾರತದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್​ಗಳನ್ನು ತಯಾರು ಮಾಡುತ್ತಿರುವ ಮೋಟೋ ಒಂದರ ಹಿಂದೆ ಒಂದರಂತೆ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಇತ್ತೀಚೆಗಷ್ಟೆ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೊಟ್ಟ ಮೊದಲ ಫೋನನ್ನು ಅನಾವರಣ ಮಾಡಿ ಭರ್ಜರಿ ಸದ್ದು ಮಾಡಿದ್ದ ಮೋಟೋರೊಲಾ ಇದೀಗ ತನ್ನ ಮೊಟೊ G ಸರಣಿಯಲ್ಲಿ ಮೋಟೋ ಜಿ72 (Moto G72) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸಜ್ಜಾಗಿದೆ. ಇದೇ ಅಕ್ಟೋಬರ್‌ 3 ರಂದು ಅಧಿಕೃತವಾಗಿ ಈ ಫೋನ್ ಮಾರುಕಟ್ಟೆಗೆ ಅಪ್ಪಳಿಸಲಿದೆ. ವಿಶೇಷ ಎಂದರೆ ಇದುಕೂಡ ವಿಶಿಷ್ಠವಾದ ಕ್ಯಾಮೆರಾ ಫೋನಾಗಿದ್ದು 108 ಮೆಗಾಪಿಕ್ಸಲ್‌ ಮುಖ್ಯ ಕ್ಯಾಮೆರಾ ನೀಡಲಾಗಿದೆ.

ಮೋಟೋ G72 ಸ್ಮಾರ್ಟ್‌ಫೋನಿನ ಬೆಲೆ ಎಷ್ಟಿರಬಹುದು ಎಂಬ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ ಇದು 1080 x 2400 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್‌ ಪಡೆದಿರಲಿದ್ದು, 6.78 ಇಂಚಿನ OLED ಡಿಸ್‌ಪ್ಲೇ ಹೊಂದಿರಲಿದೆ. ಮೀಡಿಯಾ ಟೆಕ್ ಹಿಲಿಯೋ G99 ಪ್ರೊಸೆಸರ್‌ ವೇಗದ ಜೊತೆ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸದ್ಯಕ್ಕೆ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯೊಂದಿಗೆ ರಿಲೀಸ್ ಆಗಲಿದೆ ಎನ್ನಲಾಗಿದೆ. ಹಾಗೆಯೇ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡುವ ಆಯ್ಕೆ ಇರಲಿದೆ. IP52 ರೇಟಿಂಗ್ ಅನ್ನು ಸಹ ಹೊಂದಿದ್ದು, ವಾಟರ್ ರೆಸಿಸ್ಟೆನ್ಸ್‌ ಆಯ್ಕೆ ಪಡೆದಿದೆ. ಡಾಬ್ಲಿ ಅಟ್ಮೋಸ್‌ ಆಡಿಯೋದೊಂದಿಗೆ ಸ್ಟಿರಿಯೊ ಸ್ಪೀಕರ್ ರಚನೆಯನ್ನು ಈ ಸ್ಮಾರ್ಟ್‌ಫೋನ್‌ ಪಡೆದಿರುವುದು ವಿಶೇಷ.

ಇದನ್ನೂ ಓದಿ
Xiaomi 12T: 200MP ಕ್ಯಾಮೆರಾದ ಶವೋಮಿ 12T ಸರಣಿ ಬಿಡುಗಡೆಗೆ ದಿನಾಂಕ ಫಿಕ್ಸ್: ಯಾವಾಗ?, ಬೆಲೆ ಎಷ್ಟು?
WhatsApp: ವಾಟ್ಸ್​ಆ್ಯಪ್​ನಿಂದ ಬಂದಿದೆ ತುರ್ತು ಸಂದೇಶ: ಕೂಡಲೇ ಅಪ್ಡೇಟ್ ಮೂಡುವಂತೆ ಸೂಚನೆ
Jio Phone 5G: ರೋಚಕತೆ ಸೃಷ್ಟಿಸಿದ ಜಿಯೋ ಫೋನ್ 5G: ಸೋರಿಕೆಯಾಗಿದೆ ಫೀಚರ್ಸ್, ಬೆಲೆ ಎಷ್ಟು?
Duplicate contacts: ಮೊಬೈಲ್​ನಲ್ಲಿರುವ ಡುಪ್ಲಿಕೇಟ್ ಕಾಂಟೆಕ್ಟ್​ಗಳನ್ನು ಡಿಲೀಟ್ ಮಾಡುವುದು ಹೇಗೆ?: ಇಲ್ಲಿದೆ ಟ್ರಿಕ್

ಮೋಟೋ G72 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರುವುದು ಖಚಿತವಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ. ಇದು ಫೋಟೋಗ್ರಫಿಗೆ ಹೇಳಿಮಾಡಿಸಿದಂತಿದೆ. ಎರಡನೇ ಕ್ಯಾಮೆರಾ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿರಲಿದೆ. ಮೂರನೇ ಕ್ಯಾಮೆರಾ ಮೈಕ್ರೋ ಶೂಟರ್ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿರಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಹಾಗೆಯೇ 33W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರುವ ನಿರೀಕ್ಷೆಗಳಿವೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ ಎಂಬುದು ಬೇಸರದ ಸಂಗತಿ. 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ನೀಡಲಾಗಿದೆ.