Kannada News Technology Motorola is set to launch yet another budget smartphone in India Moto E22s
Moto E22s: ನಾಳೆ ಭಾರತದಲ್ಲಿ ಬಹುನಿರೀಕ್ಷಿತ ಮೋಟೋ E22s ಸ್ಮಾರ್ಟ್‌ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ
ಇತ್ತೀಚೆಗಷ್ಟೆ ತನ್ನ E ಸರಣಿಯಲ್ಲಿ ಮೋಟೋ E32 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ಇದೇ ಸರಣಿಯಡಿಯಲ್ಲಿ ಮೋಟೋ ಇ22ಎಸ್ (Moto E22s) ಫೋನನ್ನು ಬಿಡುಗಡೆ ಮಾಡಲು ಸಜ್ಜಾಗಿದೆ.
Moto E22s
Follow us on
ಮೋಟೋರೊಲಾ (Motorola) ಕಂಪನಿ ಭಾರತದಲ್ಲಿ ಈಗೀಗ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್ಗಳನ್ನು ತಯಾರು ಮಾಡುತ್ತಿರುವ ಮೋಟೋ ಕಂಪನಿ ಪೋನ್ಗಳಿಗೆ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೆ ತನ್ನ E ಸರಣಿಯಲ್ಲಿ ಮೋಟೋ E32ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ಇದೇ ಸರಣಿಯಡಿಯಲ್ಲಿ ಮೋಟೋ ಇಎ22ಎಸ್ (Moto E22s) ಫೋನನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಮೋಟೋ E22s ಸ್ಮಾರ್ಟ್‌ಫೋನ್ (Smartphone) ಅಕ್ಟೋಬರ್ 17 ಸೋಮವಾರದಂದು ಭಾರತದಲ್ಲಿ ರಿಲೀಸ್ ಆಗಿಲಿದೆ. ಇದುಕೂಡ ಬಜೆಟ್ ಬೆಲೆಯ ಅತ್ಯತ್ತುಮ ಫೋನ್ ಆಗಿದ್ದು, 10,000 ರೂ. ಒಳಗಡೆ ಇದರ ಬೆಲೆ ಇರಬಹುದೆಂದು ಅಂದಾಜಿಸಲಾಗಿದೆ. ಈ ಫೋನಿನ ಫೀಚರ್ಸ್ ಕುರಿತ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಮೋಟೋ E32s ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ. ಇದರ ಖಚಿತ ಬೆಲೆ ಇನ್ನೂ ಬಹಿರಂಗಗೊಂಡಿಲ್ಲ.
ಈ ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ ಪ್ಲಸ್ IPS LCD ಡಿಸ್‌ಪ್ಲೇ ಇರಬಹುದು. ಇದು 90Hz ರಿಫ್ರೆಶ್ ರೇಟ್ನಿಂದ ಕೂಡಿದೆ.
ಮೀಡಿಯಾ ಟೆಕ್ ಹೆಲಿಯೊ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 OS ಜೊತೆಗೆ ಮೊಟೊರೊಲಾ ಕಂಪೆನಿಯ My UXನಲ್ಲಿ ರನ್ ಆಗಲಿದೆ. ಎರಡು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ನಿರರೀಕ್ಷಿಸಲಾಗಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಮೋಟೋ E32s ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಎರಡನೇ ಕ್ಯಾಮೆರಾ 2 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್ ಇರಬಹುದು.
ಇವುಗಳ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳ ಮೂಲಕ 30fps ಫುಲ್ HD ವಿಡಿಯೋವನ್ನು ರೆಕಾರ್ಡಿಂಗ್ ಮಾಡಬಹುದು.
5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಇದು 10W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ.
4G VoLTE, Wi-Fi 802.11ac, ಬ್ಲೂಟೂತ್ 5.0, GPS, ಮೆಮೊರಿ ಕಾರ್ಡ್ ಸ್ಲಾಟ್, USB-C ಪೋರ್ಟ್ ಸೇರಿಸಲಾಗಿದೆ. ಸೈಂಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಮತ್ತು ಫೆಸ್ ಅನ್ಲಾಕ್ ಆಯ್ಕೆ ನಿರೀಕ್ಷಿಸಲಾಗಿದೆ.