Motorola Edge 40: ಇಂದಿನಿಂದ ಮೋಟೋ ಎಡ್ಜ್‌ 40 ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯ: ಫೀಚರ್ಸ್ ಏನಿದೆ ನೋಡಿ

|

Updated on: May 30, 2023 | 6:55 AM

ಕಳೆದ ವಾರ ಮೋಟೋ (Moto) ದೇಶದಲ್ಲಿ ಹೊಸ ಮೋಟೋರೊಲಾ ಎಡ್ಜ್‌ 40 (Motorola Edge 40) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಇಂದಿನಿಂದ ಈ ಫೋನ್ ಖರೀದಿಗೆ ಸಿಗಲಿದೆ.

Motorola Edge 40: ಇಂದಿನಿಂದ ಮೋಟೋ ಎಡ್ಜ್‌ 40 ಸ್ಮಾರ್ಟ್​ಫೋನ್ ಖರೀದಿಗೆ ಲಭ್ಯ: ಫೀಚರ್ಸ್ ಏನಿದೆ ನೋಡಿ
motorola edge 40
Follow us on

ಭಾರತದಲ್ಲಿ ಮೋಟೋರೊಲಾ ಕಂಪನಿಯ ಫೋನ್​ಗಳು ಭರ್ಜರಿ ಆಗಿ ಸೇಲ್ ಆಗುತ್ತದೆ. ಇದಕ್ಕೆ ಮುಖ್ಯ ಕಾರಣ ಈ ಕಂಪನಿ ಬಜೆಟ್ ಬೆಲೆಯಿಂದ ಹಿಡಿದು ಹೈ-ರೇಂಜ್ ಮಾದರಿಯ ವರೆಗೆ ಆಕರ್ಷಕ ಮೊಬೈಲ್​ಗಳನ್ನು (Mobile) ಅನಾವರಣ ಮಾಡುವುದು. ಈ ಪೈಕಿ ಕಳೆದ ವಾರ ಮೋಟೋ (Moto) ದೇಶದಲ್ಲಿ ಹೊಸ ಮೋಟೋರೊಲಾ ಎಡ್ಜ್‌ 40 (Motorola Edge 40) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಇಂದಿನಿಂದ ಈ ಫೋನ್ ಖರೀದಿಗೆ ಸಿಗಲಿದೆ. ಆಕರ್ಷಕ ಫೀಚರ್​ಗಳ ಜೊತೆಗೆ ಸಾಕಷ್ಟು ಬಲಿಷ್ಠವಾಗಿರುವ ಈ ಫೋನ್​ನಲ್ಲಿ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ಅಳವಡಿಸಲಾಗಿದೆ. ಈ ಫೋನಿನ ವಿಶೇಷತೆ, ಬೆಲೆ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಖರೀದಿಗೆ ಸಿಗಲಿದೆ. ಇದರ 8GB RAM + 256GB ಸ್ಟೋರೇಜ್ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ. ಹಸಿರು ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಮಾರಾಟ ಕಾಣಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್, ಮೋಟೋರೊಲಾ ಇಂಡಿಯಾ ವೆಬ್​ಸೈಟ್ ಮೂಲಕ ಇಂದು ಮಧ್ಯಾಹ್ನ 12 ಗಂಟೆಯಿಂದ ಸೇಲ್ ಪ್ರಾರಂಭವಾಗುತ್ತದೆ.

ಇದನ್ನೂ ಓದಿ
Vivo Y35+ 5G: ಸದ್ದಿಲ್ಲದೆ ಒಂದೇ ದಿನ ಎರಡು ಆಕರ್ಷಕ ಸ್ಮಾರ್ಟ್​ಫೋನ್ಸ್ ಬಿಡುಗಡೆ ಮಾಡಿದ ವಿವೋ: ಯಾವುದು ನೋಡಿ
Tecno Camon 20 series: ಬಜೆಟ್ ಬೆಲೆಗೆ ಬಹುನಿರೀಕ್ಷಿತ ಟೆಕ್ನೋ ಕ್ಯಾಮನ್ 20 ಸರಣಿಯಲ್ಲಿ ಮೂರು ಸ್ಮಾರ್ಟ್​ಫೋನ್ಸ್ ಬಿಡುಗಡೆ
WhatsApp New Feature: ವಾಟ್ಸ್​ಆ್ಯಪ್​ನಿಂದ ಅಚ್ಚರಿಯ ಅಪ್ಡೇಟ್: ಇನ್ಮುಂದೆ ಸ್ಕ್ರೀನ್‌ ಶೇರ್ ಮಾಡಬಹುದು
Redmi A2: ಬಜೆಟ್ ಫೋನ್ ಪ್ರಿಯರಿಗೆ ಬಂದಿದೆ ಹೊಸ ಶಓಮಿ ರೆಡ್ಮಿ ಫೋನ್

ISRO: GSLV-F12 ನ್ಯಾವಿಗೇಷನ್ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

ಫೀಚರ್ಸ್ ಏನಿದೆ?:

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ+ ಫೋಲ್ಡ್‌ ಸ್ಕ್ರೀನ್‌ ಅನ್ನು ಹೊಂದಿದೆ. 144Hz ರಿಫ್ರೆಶ್ ರೇಟ್, 360 Hz ಟಚ್ ಸ್ಯಾಂಪ್ಲಿಂಗ್ ರೇಟ್ ನೀಡಲಾಗಿದೆ. ಬಲಿಷ್ಠವಾದ ಮಿಡಿಯಾ ಟೆಕ್ ಡೈಮೆನ್ಸಿಟಿ 8020 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಿಂದ ಕೂಡಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್ ಮ್ಯಾಕ್ರೋ ವಿಷನ್ ಅನ್ನು ಹೊಂದಿದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಮೋಟೋರೊಲಾ ಎಡ್ಜ್‌ 40 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ತಕ್ಕಂತೆ 68W ಟರ್ಬೋಪವರ್ ವೈರ್ಡ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿದೆ. ಉಳಿದಂತೆ 4G LTE ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆಗಳನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ