Moto G05: ಮೋಟೋದಿಂದ ಬಂತು ಬೆರಗುಗೊಳಿಸುವ ಸ್ಮಾರ್ಟ್​ಫೋನ್: ಬೆಲೆ ಕೇವಲ 6,999 ರೂ.

ಭಾರತದಲ್ಲಿ ಮೋಟೋ G05 ಸದ್ಯಕ್ಕೆ ಒಂದು ಆಯ್ಕೆಯಲ್ಲಷ್ಟೆ ಬಿಡುಗಡೆ ಮಾಡಲಾಗಿದೆ. ಇದರ 4GB RAM + 64GB ಸ್ಟೋರೇಜ್ ಕಾನ್ಫಿಗರೇಶನ್‌ಗೆ ಕೇವಲ 6,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ದೇಶದಲ್ಲಿ ಫ್ಲಿಪ್‌ಕಾರ್ಟ್, ಮೊಟೊರೊಲಾ ಇಂಡಿಯಾ ವೆಬ್‌ಸೈಟ್ ಮತ್ತು ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಜನವರಿ 13 ರಂದು ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ.

Moto G05: ಮೋಟೋದಿಂದ ಬಂತು ಬೆರಗುಗೊಳಿಸುವ ಸ್ಮಾರ್ಟ್​ಫೋನ್: ಬೆಲೆ ಕೇವಲ 6,999 ರೂ.
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 08, 2025 | 12:44 PM

ಪ್ರಸಿದ್ಧ ಮೋಟೋರೊಲ ಕಂಪನಿ ಭಾರತದಲ್ಲಿ ತನ್ನ ಹೊಸ ಮೋಟೋ G05 ಸ್ಮಾರ್ಟ್​ಫೋನ್ ಅನ್ನು ಅನಾವರಣ ಮಾಡಿದೆ. ಮೀಡಿಯಾಟೆಕ್ ಹಿಲಿಯೊ G81 ಪ್ರೊಸೆಸರ್​ನಿಂದ ಚಾಲಿತವಾಗಿರುವ ಈ ಫೋನ್ 18W ವೈರ್ಡ್ ಚಾರ್ಜಿಂಗ್​ ಬೆಂಬಲದೊಂದಿಗೆ ದೊಡ್ಡದಾದ 5,200mAh ಬ್ಯಾಟರಿಯನ್ನು ಹೊಂದಿದೆ. ಜೊತೆಗೆ 50-ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾವನ್ನು ನೀಡಲಾಗಿದೆ. ಇಷ್ಟೆಲ್ಲ ಅದ್ಭುತ ಫೀಚರ್​ಗಳಿಂದ ಆವೃತ್ತವಾಗಿರುವ ಈ ಫೋನಿನ ಬೆಲೆ ಮಾತ್ರ ಕೇವಲ 10,000 ಕ್ಕಿಂತ ಕಡಿಮೆ. G05 ಅನ್ನು ಡಿಸೆಂಬರ್ 2024 ರಲ್ಲಿ ಮೋಟೋ E15 ಜೊತೆಗೆ ಆಯ್ದ ಜಾಗತಿಕ ಮಾರುಕಟ್ಟೆಗಳಲ್ಲಿ ಅನಾವರಣಗೊಳಿಸಲಾಗಿತ್ತು.

ಭಾರತದಲ್ಲಿ ಮೋಟೋ G05 ಬೆಲೆ, ಲಭ್ಯತೆ:

ಭಾರತದಲ್ಲಿ ಮೋಟೋ G05 ಸದ್ಯಕ್ಕೆ ಒಂದು ಆಯ್ಕೆಯಲ್ಲಷ್ಟೆ ಬಿಡುಗಡೆ ಮಾಡಲಾಗಿದೆ. ಇದರ 4GB RAM + 64GB ಸ್ಟೋರೇಜ್ ಕಾನ್ಫಿಗರೇಶನ್‌ಗೆ ಕೇವಲ 6,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ದೇಶದಲ್ಲಿ ಫ್ಲಿಪ್‌ಕಾರ್ಟ್, ಮೊಟೊರೊಲಾ ಇಂಡಿಯಾ ವೆಬ್‌ಸೈಟ್ ಮತ್ತು ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಜನವರಿ 13 ರಂದು ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಸಿಗಲಿದೆ. ಇದನ್ನು ಫಾರೆಸ್ಟ್ ಗ್ರೀನ್ ಮತ್ತು ಪ್ಲಮ್ ರೆಡ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ.

ಭಾರತದಲ್ಲಿ ರಿಲಯನ್ಸ್ ಜಿಯೋ ಬಳಕೆದಾರರು ಮೋಟೋ G05 ಖರೀದಿಯ ಮೇಲೆ 2,000 ಕ್ಯಾಶ್‌ಬ್ಯಾಕ್ ಪಡೆಯಬಹುದು.

ಮೋಟೋ G05 ಫೀಚರ್ಸ್:

ಮೋಟೋ G05 ಸ್ಮಾರ್ಟ್​ಫೋನ್ 6.67-ಇಂಚಿನ HD+ (720 x 1,612 ಪಿಕ್ಸೆಲ್‌ಗಳು) LCD ಸ್ಕ್ರೀನ್ ಜೊತೆಗೆ 90Hz ರಿಫ್ರೆಶ್ ರೇಟ್, 1,000 nits ಗರಿಷ್ಠ ಬ್ರೈಟ್‌ನೆಸ್ ಮಟ್ಟ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ. ಈ ಫೋನ್ 4GB LPDDR4X RAM ಮತ್ತು 64GB ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ಮೀಡಿಯಾ ಟೆಕ್ ಹಿಲಿಯೊ G81 ಎಕ್ಸ್‌ಟ್ರೀಮ್ SoC ನಿಂದ ನಡೆಸಲ್ಪಡುತ್ತದೆ. RAM ಅನ್ನು ವಾಸ್ತವಿಕವಾಗಿ 12GB ವರೆಗೆ ವಿಸ್ತರಿಸಬಹುದು ಮತ್ತು ಮೈಕ್ರೋ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹಣೆಯನ್ನು ಹೆಚ್ಚಿಸಬಹುದು.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಮೋಟೋ G05 ಕ್ವಾಡ್ ಪಿಕ್ಸೆಲ್ ತಂತ್ರಜ್ಞಾನದೊಂದಿಗೆ 50-ಮೆಗಾಪಿಕ್ಸೆಲ್ ಮುಖ್ಯ ಹಿಂಭಾಗದ ಕ್ಯಾಮೆರಾವನ್ನು ಹೊಂದಿದೆ ಮತ್ತು ಮುಂಭಾಗದಲ್ಲಿ 8-ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ನೀಡಲಾಗಿದೆ. ಈ ಹ್ಯಾಂಡ್‌ಸೆಟ್ ಧೂಳು ಮತ್ತು ಸ್ಪ್ಲಾಶ್ ಪ್ರವೇಶದ ವಿರುದ್ಧ IP52 ರೇಟಿಂಗ್‌ನೊಂದಿಗೆ ಬರುತ್ತದೆ. ಡಾಲ್ಬಿ ಅಟ್ನೋಮಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ.

ಇದನ್ನೂ ಓದಿ: ನೀವು ಹೋಗುತ್ತಿರುವ ರೈಲಿನಿಂದ ಫೋನ್ ಕೆಳಗೆ ಬಿದ್ದರೆ ಏನು ಮಾಡಬೇಕು?: ಇಲ್ಲಿದೆ ಮಾಹಿತಿ

ಮೋಟೋ G05 18W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ 5,200mAh ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G ಎಲ್​ಟಿಇ, ಬ್ಲೂಟೂತ್ 5.0, ಎಫ್​ಎಮ್ ರೇಡಿಯೋ, ಜಿಪಿಎಸ್, A-GPS, LTEPP, SUPL, GLONASS, ಗೆಲಿಲಿಯೋ, ವೈ- ಫೈ, 3.5mm ಆಡಿಯೋ ಜಾಕ್ ಮತ್ತು ಯುಎಸ್​ಬಿ ಟೈಪ್-C ಪೋರ್ಟ್ ಸೇರಿವೆ. ಭದ್ರತೆಗಾಗಿ, ಈ ಹ್ಯಾಂಡ್ಸೆಟ್ ಸೈಡ್-ಮೌಂಟೆಡ್ ಫಿಂಗರ್​ಪ್ರಿಂಟ್ ಸಂವೇದಕವನ್ನು ಹೊಂದಿದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?