Moto G62 5G: ಭಾರತದಲ್ಲಿ ಮೋಟೋ G62 ಬಿಡುಗಡೆ: ಈ 5G ಫೋನಿನ ಬೆಲೆ ಕೇವಲ …
ಮೋಟೋರೊಲಾ ತನ್ನ ಜಿ ಸರಣಿಯಲ್ಲಿ ಮೋಟೋ ಜಿ62 (Moto G62) ಫೋನನ್ನು ರಿಲೀಸ್ ಮಾಡಿದೆ. ಇದು 5ಜಿ ಬೆಂಬಲ ಪಡೆದುಕೊಂಡಿದ್ದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ.
ಮೋಟೋರೊಲಾ (Motorola) ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ತನ್ನ G ಸರಣಿಯ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ಎರಡು ದಿನಗಳ ಹಿಂದೆಯಷ್ಟೆ ಮೋಟೋರೊಲಾ ಕಂಪನಿ ಸದ್ದಿಲ್ಲದೆ ಭಾರತದಲ್ಲಿ ತನ್ನ ಹೊಸ ಮೋಟೋ ಜಿ32 (Moto G32) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ಜಿ ಸರಣಿಯಲ್ಲಿ ಮೋಟೋ ಜಿ62 (Moto G62) ಫೋನನ್ನು ರಿಲೀಸ್ ಮಾಡಿದೆ. ಇದು 5ಜಿ ಬೆಂಬಲ ಪಡೆದುಕೊಂಡಿದ್ದು ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಆಕರ್ಷಕ ಕ್ಯಾಮೆರಾ, ಬ್ಯಾಟರಿ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
- ಮೋಟೋ G62 ಸ್ಮಾರ್ಟ್‌ಫೋನ್ ಸದ್ಯಕ್ಕೆ ಭಾರತದ ಮಾರುಕಟ್ಟೆಯಲ್ಲಿ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 21,999 ರೂ. ನಿಗದಿ ಮಾಡಲಾಗಿದೆ.
- ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಈ ಫೋನ್ ಆಗಸ್ಟ್ 19 ರಿಂದ ಖರೀದಿಗೆ ಸಿಗಲಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಕೂಡ ನೀಡಲಾಗಿದ್ದು, HDFC ಬ್ಯಾಂಕ್ ಕಾರ್ಡ್ ಮೂಲಕ ಪಡೆದುಕೊಂಡರೆ 1,500 ರೂ. ಗಳ ರಿಯಾಯಿತಿ ಸಿಗಲಿದೆ.
- ಈ ಫೋನ್ 6.5 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ದ ಜೊತೆಗೆ 120Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.
- ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
- ಮೋಟೋ G32 ಸ್ಮಾರ್ಟ್‌ಫೋನ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿ ನೀಡಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್+ ಡೆಪ್ತ್ ಸೆನ್ಸಾರ್ ಹೊಂದಿದೆ.
- ಈ ಫೋನ್ನಲ್ಲಿರುವ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
- ಬಲಿಷ್ಠವಾದ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಅತ್ಯಂತ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಯುಎಸ್ಬಿ-C ಪೋರ್ಟ್ ಅನ್ನು ಅಳವಡಿಸಲಾಗಿದೆ.
ಇದನ್ನೂ ಓದಿ
Published On - 2:02 pm, Thu, 11 August 22