Moto G73 5G: ಭಾರತದಲ್ಲಿ ರೋಚಕತೆ ಸೃಷ್ಟಿಸಿದ್ದ ಮೋಟೋ G73 5G ಸ್ಮಾರ್ಟ್‌ಫೋನ್ ಬಿಡುಗಡೆ: ಬೆಲೆ ಎಷ್ಟು?, ಏನು ಫೀಚರ್ಸ್?
ಭಾರತದ ಮಾರುಕಟ್ಟೆಯಲ್ಲಿಂದು ಹೊಸ ಮೋಟೋ ಜಿ73 5ಜಿ (Moto G73 5G). ಫೋನ್ ಅನಾವರಣಗೊಂಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ.
ಟೆಕ್ ಮಾರುಕಟ್ಟೆಯಲ್ಲಿ ವಿಶಿಷ್ಟ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸುವುದರಲ್ಲಿ ಮೋಟೋರೊಲಾ (Motorola) ಕಂಪನಿ ಎತ್ತಿದ ಕೈ. ಇಂದು ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಮೊಬೈಲ್ಗಳನ್ನು ಬಿಡುಗಡೆ ಮಾಡುವ ಮೋಟೋ ಇದೀಗ ಹೊಸ ಸ್ಮಾರ್ಟ್ಫೋನ್ನೊಂದಿಗೆ (Smartphone) ಮತ್ತೆ ಬಂದಿದೆ. ಭಾರತದ ಮಾರುಕಟ್ಟೆಯಲ್ಲಿಂದು ಹೊಸ ಮೋಟೋ ಜಿ73 5ಜಿ (Moto G73 5G). ಫೋನ್ ಅನಾವರಣಗೊಂಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಲೆ ಎಷ್ಟು?:
ಮೋಟೋ G73 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆಯಷ್ಟೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 18,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಮಾರ್ಚ್ 16 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮತ್ತು ಆಯ್ದ ರಿಟೆಲ್ ಸ್ಟೋರ್ಗಳ ಮೂಲಕ ಖರೀದಿಸಬಹುದು. ಆಫರ್ ಕೂಡ ಘೋಷಣೆ ಮಾಡಲಾಗಿದ್ದು, ಆಯ್ದ ಬ್ಯಾಂಕ್ ಕಾರ್ಡ್ಗಳಿಗೆ 2,000 ರೂ. ಡಿಸ್ಕೌಂಟ್ ಸಿಗುತ್ತದೆ. ನೋ ಕಾಸ್ಟ್ ಇಎಮ್ಐ ಆಯ್ಕೆ ಕೂಡ ಇದೆ.
Are you ready to #GoUltra with #motog73 5G? It’s time to experience MediaTek Dimensity 930, a 50MP Camera System, True 5G with 13 5G Bands and much more! Sale starts 16th March on @reliancedigital and @JioMart Stores at just ₹16,999* (limited time offer) pic.twitter.com/1qzQk1oaSA
— Motorola India (@motorolaindia) March 10, 2023
iPhone 14: ಐಫೋನ್ ಪ್ರಿಯರಿಗೆ ಸಂತಸದ ಸುದ್ದಿ: ಹೊಸ ಕಲರ್ನಲ್ಲಿ ಬಂತು ಐಫೋನ್ 14, ಐಫೋನ್ 14 ಪ್ಲಸ್
ಫೀಚರ್ಸ್ ಏನಿದೆ?:
ಮೋಟೋ G73 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ರೇಟ್ನಿಂದ ಕೂಡಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ನಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಪ್ರಿಯರಿಗೆ ಈ ಫೋನ್ ಇಷ್ಟವಾಗಲಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಸಪೋರ್ಟ್ ಮಾಡುತ್ತದೆ. ಇದರೊಂದಿಗೆ 3.5mm ಹೆಡ್‌ಫೋನ್ ಜ್ಯಾಕ್, ವೈ-ಫೈ 802.11, ಬ್ಲುಟೂತ್ 5.3, ಯುಎಸ್ಬು ಟೈಪ್-ಸಿ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿರಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ಅಳವಡಿಸಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:12 pm, Fri, 10 March 23