Moto G73 5G: ಭಾರತದಲ್ಲಿ ರೋಚಕತೆ ಸೃಷ್ಟಿಸಿದ್ದ ಮೋಟೋ G73 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?, ಏನು ಫೀಚರ್ಸ್?

| Updated By: Digi Tech Desk

Updated on: Mar 10, 2023 | 2:13 PM

ಭಾರತದ ಮಾರುಕಟ್ಟೆಯಲ್ಲಿಂದು ಹೊಸ ಮೋಟೋ ಜಿ73 5ಜಿ (Moto G73 5G). ಫೋನ್ ಅನಾವರಣಗೊಂಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ.

Moto G73 5G: ಭಾರತದಲ್ಲಿ ರೋಚಕತೆ ಸೃಷ್ಟಿಸಿದ್ದ ಮೋಟೋ G73 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?, ಏನು ಫೀಚರ್ಸ್?
Moto G73 5G
Follow us on

ಟೆಕ್ ಮಾರುಕಟ್ಟೆಯಲ್ಲಿ ವಿಶಿಷ್ಟ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸುವುದರಲ್ಲಿ ಮೋಟೋರೊಲಾ (Motorola) ಕಂಪನಿ ಎತ್ತಿದ ಕೈ. ಇಂದು ಮಾರುಕಟ್ಟೆಯಲ್ಲಿ ಅತಿ ಕಡಿಮೆ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಮೊಬೈಲ್​ಗಳನ್ನು ಬಿಡುಗಡೆ ಮಾಡುವ ಮೋಟೋ ಇದೀಗ ಹೊಸ ಸ್ಮಾರ್ಟ್​ಫೋನ್​ನೊಂದಿಗೆ (Smartphone) ಮತ್ತೆ ಬಂದಿದೆ. ಭಾರತದ ಮಾರುಕಟ್ಟೆಯಲ್ಲಿಂದು ಹೊಸ ಮೋಟೋ ಜಿ73 5ಜಿ (Moto G73 5G). ಫೋನ್ ಅನಾವರಣಗೊಂಡಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಬ್ಯಾಟರಿಯಿಂದ ಆವೃತ್ತವಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ಮೋಟೋ G73 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಸದ್ಯಕ್ಕೆ ಒಂದು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆಯಷ್ಟೆ. ಇದರ 8GB RAM + 128GB ಸ್ಟೋರೇಜ್‌ ರೂಪಾಂತರಕ್ಕೆ 18,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಮಾರ್ಚ್ 16 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮತ್ತು ಆಯ್ದ ರಿಟೆಲ್ ಸ್ಟೋರ್​ಗಳ ಮೂಲಕ ಖರೀದಿಸಬಹುದು. ಆಫರ್ ಕೂಡ ಘೋಷಣೆ ಮಾಡಲಾಗಿದ್ದು, ಆಯ್ದ ಬ್ಯಾಂಕ್ ಕಾರ್ಡ್​ಗಳಿಗೆ 2,000 ರೂ. ಡಿಸ್ಕೌಂಟ್ ಸಿಗುತ್ತದೆ. ನೋ ಕಾಸ್ಟ್ ಇಎಮ್​ಐ ಆಯ್ಕೆ ಕೂಡ ಇದೆ.

 

iPhone 14: ಐಫೋನ್ ಪ್ರಿಯರಿಗೆ ಸಂತಸದ ಸುದ್ದಿ: ಹೊಸ ಕಲರ್​ನಲ್ಲಿ ಬಂತು ಐಫೋನ್ 14, ಐಫೋನ್ 14 ಪ್ಲಸ್

ಫೀಚರ್ಸ್ ಏನಿದೆ?:

ಮೋಟೋ G73 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್​ರೇಟ್​ನಿಂದ ಕೂಡಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 930 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್​ನಲ್ಲಿ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅಳವಡಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಪ್ರಿಯರಿಗೆ ಈ ಫೋನ್ ಇಷ್ಟವಾಗಲಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ತಕ್ಕಂತೆ 30W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಸಪೋರ್ಟ್ ಮಾಡುತ್ತದೆ. ಇದರೊಂದಿಗೆ 3.5mm ಹೆಡ್‌ಫೋನ್ ಜ್ಯಾಕ್, ವೈ-ಫೈ 802.11, ಬ್ಲುಟೂತ್ 5.3, ಯುಎಸ್​ಬು ಟೈಪ್-ಸಿ ಮತ್ತು ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿರಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ ಇತ್ತೀಚಿನ ಎಲ್ಲ ಆಯ್ಕೆ ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Fri, 10 March 23