ಮಾರುಕಟ್ಟೆಯಲ್ಲೀಗ ಆಕರ್ಷಕ ಕ್ಯಾಮೆರಾ ಸ್ಮಾರ್ಟ್ಫೋನ್ಗಳಿಗೆ ಎಲ್ಲಿಲ್ಲದ ಬೇಡಿಕೆ. 108 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್ಗಳು (108MP Camera Phone) ಬಂದಾಗಿನಿಂದ ಬಹುತೇಕ ಎಲ್ಲ ಮೊಬೈಲ್ ಕಂಪನಿಗಳು ತನ್ನ ಕ್ಯಾಮೆರಾದ ಕ್ವಾಲಿಟಿಯಲ್ಲಿ ಬದಲಾವಣೆ ಮಾಡುತ್ತಲೇ ಇದೆ. ಹೀಗಿರುವಾಗ ಇದೀಗ ಮಾರುಕಟ್ಟೆಗೆ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೊದಲ ಸ್ಮಾರ್ಟ್‌ಫೋನ್ (200MP Camera Phone) ಲಗ್ಗೆಯಿಟ್ಟಿದೆ. ಈ ಮಹತ್ವದ ಹೆಜ್ಜೆಯಿಟ್ಟಿರುವುದು ಮೋಟೋರೊಲಾ ಕಂಪನಿ. ಗುರುವಾರ ರಾತ್ರಿ ಮೋಟೋರೊಲಾ ಜಾಗತಿಕ ಮಾರುಕಟ್ಟೆಯಲ್ಲಿ 200 ಮೆಗಾಫಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಒಳಗೊಂಡಿರುವ ಬಹುನಿರೀಕ್ಷಿತ ಮೊಟೊ ಎಕ್ಸ್30 ಪ್ರೊ (Motorola X30 Pro) ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಕೇವಲ ಕ್ಯಾಮೆರಾ ಮಾತ್ರವಲ್ಲದೆ ಈ ಫೋನಿನಲ್ಲಿ ಬಲಿಷ್ಠ ಪ್ರೊಸೆಸರ್, ಬ್ಯಾಟರಿ, ಫಾಸ್ಟ್ ಚಾರ್ಜರ್ ಕೂಡ ನೀಡಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
ಮೋಟೋ X30 ಪ್ರೊ ಸ್ಮಾರ್ಟ್ಫೋನ್ನಲ್ಲಿ 6.73 ಇಂಚಿನ ಫುಲ್ HD+ OLED ಡಿಸ್‌ಪ್ಲೇಯನ್ನು ನೀಡಲಾಗಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಹೊಂದಿದ್ದು, 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು ಅತ್ಯುತ್ತಮಮ ಅನುಭವವನ್ನು ನೀಡುವುದು ಖಚತ. ಬಲಿಷ್ಠವಾದ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಅನಾವರಣಗೊಂಡಿದೆ.
ಈ ಸ್ಮಾರ್ಟ್ಫೋನ್ನ ಮುಖ್ಯ ಹೈಲೇಟ್ ಆಗಿರುವ ಕ್ಯಾಮೆರಾವು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ನಿಂದ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸಾಮರ್ಥ್ಯ ಹೊಂದಿದೆ. ಇದು ಸ್ಯಾಮ್ಸಂಗ್ ISOCELL HP1 ಸೆನ್ಸಾರ್ನಲ್ಲಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಬರೋಬ್ಬರಿ 60 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಮೋಟೋ X30 ಪ್ರೊ ಸ್ಮಾರ್ಟ್‌ಫೋನ್ 125W ವೇಗದ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಕೇವಲ 7 ನಿಮಿಷಗಳಲ್ಲಿ ಬ್ಯಾಟರಿಯನ್ನು 50% ಚಾರ್ಜ್ ಮಾಡಲಿದೆ ಎಂದು ಕಂಪನಿ ಹೇಳಿದೆ. ಅಲ್ಲದೆ 100% ಚಾರ್ಜ್ ಆಗಲು ಕೇವಲ 19 ನಿಮಿಷ ಸಾಕಂತೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 50W ವಾಯರ್‌ಲೆಸ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್–ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಕೂಡ ಒಳಗೊಂಡಿದೆ.
ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಮೋಟೋ X30 ಪ್ರೊ ಸ್ಮಾರ್ಟ್‌ಫೋನ್ ರಿಲೀಸ್ ಆಗಿದೆ. ಇದರ ಬೇಸ್ ಮಾಡೆಲ್ 8GB RAM ಮತ್ತು 128GB ಸ್ಟೋರೇಜ್ ಮಾದರಿ ಬೆಲೆ CNY 3,699, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 43,600ರೂ. ಎನ್ನಬಹುದು. 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ CNY 4,199 (ಸುಮಾರು 49,500ರೂ) ಆಗಿದ್ದು, ಇದರ ಟಾಪ್ ಎಂಡ್ ಮಾಡೆಲ್ 12GB + 512GB ಸ್ಟೋರೇಜ್ ರೂಪಾಂತರದ ಆಯ್ಕೆಯು CNY 4,499 (ಅಂದಾಜು 53,000ರೂ) ಬೆಲೆ ಹೊಂದಿದೆ. ಸದ್ಯಕ್ಕೆ ಈ ಫೋನ್ ಚೀನಾದಲ್ಲಿ ಬಿಡುಗಡೆಗೊಂಡಿದ್ದು, ಕೆಲವೇ ತಿಂಗಳಲ್ಲಿ ಭಾರತಕ್ಕೂ ಕಾಲಿಡಲಿದೆಯಂತೆ.
Published On - 9:19 am, Fri, 12 August 22