Motorola G200: ವಿದೇಶದಲ್ಲಿ ಮೋಟೋ G ಸಿರೀಸ್ ಭರ್ಜರಿ ಸೇಲ್: ಕೆಲವೇ ದಿನಗಳಲ್ಲಿ ಭಾರತಕ್ಕೂ ಲಗ್ಗೆ

ಮೋಟೋ G200 ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ+ LCD ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್​ನಲ್ಲಿದೆ.

Motorola G200: ವಿದೇಶದಲ್ಲಿ ಮೋಟೋ G ಸಿರೀಸ್ ಭರ್ಜರಿ ಸೇಲ್: ಕೆಲವೇ ದಿನಗಳಲ್ಲಿ ಭಾರತಕ್ಕೂ ಲಗ್ಗೆ
Motorola G Series Moto G200
Follow us
TV9 Web
| Updated By: Vinay Bhat

Updated on: Nov 21, 2021 | 3:20 PM

ಮೋಟೋರೊಲಾ (Motorola) ಕಂಪನಿ ಎರಡು ದಿನಗಳ ಹಿಂದೆಯಷ್ಟೇ ತನ್ನ ಜಿ ಸರಣಿಯ (Moto G Series) ಐದು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದವು. ಇದರಲ್ಲಿ ಮೋಟೋ G200, ಮೋಟೋ G71, ಮೋಟೋ G51, ಮೋಟೋ G41 ಮತ್ತು ಮೋಟೋ G31 (Motorola G200, G71, G51, G41, G31) ಸೇರಿವೆ. ಇದೀಗ ತನ್ನ ಜಿ ಸರಣಿಯ ಸ್ಮಾರ್ಟ್‌ಫೋನ್‌ಗಳು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೂ ಲಗ್ಗೆಯಿಡಲಿದೆ. ವಿದೇಶದಲ್ಲಿ ಈ ಸ್ಮಾರ್ಟ್​ಫೋನ್​ಗಳಿಗೆ (Smartphone) ಅತ್ಯುತ್ತಮ ವಿಮರ್ಶೆ ಕೇಳಿಬಂದ ಹಿನ್ನಲೆಯಲ್ಲಿ ದೇಶದಲ್ಲೂ ಇದು ಸದ್ಯದಲ್ಲೇ ರಿಲೀಸ್ ಆಗಲಿದೆಯಂತೆ. ಇದು ಸ್ನಾಪ್‌ಡ್ರಾಗನ್ 888+ ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿದೆ. ಈ ನಾಲ್ಕು ಫೋನುಗಳು ಒಂದೊಂದು ವಿಶೇಷತೆಯನ್ನು ಹೊಂದಿದೆ.

ಮೋಟೋ G200 ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್, HDR10 ಮತ್ತು DCI-P3 ಕಲರ್ ಗ್ಯಾಮಟ್ ಕವರೇಜ್ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಮೋಟೋ G51 ಸ್ಮಾರ್ಟ್‌ಫೋನ್‌ 6.8-ಇಂಚಿನ ಫುಲ್‌ ಹೆಚ್‌ಡಿ+ LCD ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480+ ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 10W ಚಾರ್ಜಿಂಗ್‌ ಬೆಂಬಲಿಸಲಿದೆ.

ಮೋಟೋ G41 ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ ಹೆಚ್‌ಡಿ+ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೆಟ್‌ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 ಪ್ರೊಸೆಸರ್‌ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಟರ್ಬೊ ಚಾರ್ಜ್ 30 ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಮೋಟೋ G200 ಅನ್ನು 450 ಯುರೋ ಬೆಲೆಯಲ್ಲಿ ಲಾಂಚ್‌ ಮಾಡಲಾಗಿದೆ. ಭಾರತದಲ್ಲಿ ಇದರ ಬೆಲೆ ಅಂದಾಜಿ 37,900 ರೂ. ಎನ್ನಬಹುದು. ಇನ್ನು ಮೋಟೋ G51 ಬೆಲೆ 230 ಯುರೋ (ಸುಮಾರು 19,372ರೂ) ಲಭ್ಯವಿದೆ. ಆದಾಗ್ಯೂ, G41 ಅನ್ನು 249 ಯುರೋಗಳಿಗೆ (21,000) ಬಿಡುಗಡೆ ಮಾಡಲಾಗಿದೆ.

Smart TV: ಹೊಸ ಟಿವಿ ಖರೀದಿಸುವ ಪ್ಲಾನ್​ನಲ್ಲಿದ್ದೀರಾ?: ಹಾಗಿದ್ರೆ ಇಲ್ಲೊಮ್ಮೆ ಕಣ್ಣಾಡಿಸಿ

(Motorolas new devices Moto G200 G71 G51 G41 G31 to launch in India soon)

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ