ಸೈಬರ್ ಕ್ರೈಮ್ ತಡೆಗಟ್ಟಲು ಮಾಸ್ಟರ್ ಪ್ಲಾನ್ ರೂಪಿಸಿದ ಮೋದಿ ಸರ್ಕಾರ: ವಂಚಕರಿಗೆ ಟೆನ್ಶನ್

Cyber Crime: ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಸುಮಾರು 5000 ದೂರುಗಳು ಪ್ರತಿದಿನ ದಾಖಲಾಗುತ್ತವೆ ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ವಂಚಕರು ಇದುವರೆಗೆ 9 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿಪಶು ಮಾಡಿದ್ದಾರೆ. ಇದೀಗ ಸೈಬರ್ ಅಪರಾಧ ತಡೆಗಟ್ಟಲು ಕೇಂದ್ರ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೈಬರ್ ಕ್ರೈಮ್ ತಡೆಗಟ್ಟಲು ಮಾಸ್ಟರ್ ಪ್ಲಾನ್ ರೂಪಿಸಿದ ಮೋದಿ ಸರ್ಕಾರ: ವಂಚಕರಿಗೆ ಟೆನ್ಶನ್
Cyber Crime
Follow us
Vinay Bhat
|

Updated on: Jan 16, 2024 | 12:16 PM

ಅಮಾಯಕರು ವಂಚನೆಗೆ ಒಳಗಾಗುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ, ಸೈಬರ್ ಅಪರಾಧವನ್ನು (Cyber Crime) ತಡೆಗಟ್ಟಲು ಕೇಂದ್ರ ಸರ್ಕಾರವು ಈಗ ಬ್ಯಾಂಕ್‌ಗಳು ಮತ್ತು ಟೆಲಿಕಾಂ ಕಂಪನಿಗಳಿಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ಗೃಹ ಸಚಿವಾಲಯದ ನಿರ್ದೇಶನದ ಪ್ರಕಾರ, ಬ್ಯಾಂಕ್‌ಗಳು ಮತ್ತು ಟೆಲಿಕಾಂ ಕಂಪನಿಗಳು ಸೈಬರ್ ಸೆಲ್ ಪ್ರಧಾನ ಕಚೇರಿಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕಾಗುತ್ತದೆ. ಸರ್ಕಾರದ ಈ ಕ್ರಮವು ಎರಡು ಪ್ರಮುಖ ಪ್ರಯೋಜನಗಳನ್ನು ಹೊಂದಿದೆ.

ಮೊದಲ ಪ್ರಯೋಜನವೆಂದರೆ, ಇದರಿಂದ ಸೈಬರ್ ಅಪರಾಧದಲ್ಲಿ ಭಾಗಿಯಾಗಿರುವ ಬ್ಯಾಂಕ್ ಖಾತೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬಹುದು. ಮತ್ತೊಂದು ಪ್ರಯೋಜನವೆಂದರೆ ಮೊಬೈಲ್ ಸಂಖ್ಯೆಯ ಮೇಲೆ ಕ್ರಮ ಕೈಗೊಳ್ಳುವುದು ಮೊದಲಿಗಿಂತ ಸುಲಭವಾಗುತ್ತದೆ. ಜನರನ್ನು ವಂಚಿಸುವ ಘಟನೆಗಳು ಹೆಚ್ಚಾದ ನಂತರ ಸೈಬರ್ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಬಹಳ ಮುಖ್ಯವಾಗಿದೆ. ಸೈಬರ್ ಅಪರಾಧದಂತಹ ಘಟನೆಗಳಲ್ಲಿ ಸಮಯ ವ್ಯರ್ಥ ಮಾಡದೆ ಕ್ರಮ ಕೈಗೊಳ್ಳಲು ಸೈಬರ್ ಸೆಲ್ ಪ್ರಧಾನ ಕಛೇರಿಯಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲು ಗೃಹ ಸಚಿವಾಲಯ ನಿರ್ದೇಶನ ನೀಡಿದೆ. ಸರ್ಕಾರದ ಈ ಹೊಸ ಕ್ರಮವು ದೊಡ್ಡ ಪ್ರಯೋಜನೆವಾಗಲಿದೆ.

ಸೇಲ್ ಅಲರ್ಟ್: ಭಾರತದಲ್ಲಿ ಪೋಕೋ X6-ಪೋಕೋ X6 ಪ್ರೊ ಮಾರಾಟ ಇಂದಿನಿಂದ ಆರಂಭ

ಇದನ್ನೂ ಓದಿ
Image
ರಿಪಬ್ಲಿಕ್ ಡೇ ಸೇಲ್: ಒನ್‌ಪ್ಲಸ್-ರೆಡ್ಮಿ ಫೋನುಗಳು ಅತಿ ಕಡಿಮೆ ಬೆಲೆಗೆ ಲಭ್ಯ
Image
ರಾತ್ರಿ ಪೂರ್ತಿ ಫೋನ್ ಚಾರ್ಜ್​ಗೆ ಹಾಕಬಹುದು: ಆದರೆ, ಈ ವಿಚಾರ ನೆನಪಿರಲಿ
Image
ಪಾಸ್​ಪೋರ್ಟ್ ಸೈಜ್ ಫೋಟೋ ಬೇಕಿದ್ದರೆ ನಿಮಿಷದಲ್ಲಿ ಪಡೆಯಿರಿ: ಹೇಗೆ ಗೊತ್ತೇ?
Image
ಸ್ಮಾರ್ಟ್​ಫೋನ್ ಡಿಸ್​ಪ್ಲೇ ಬಗ್ಗೆ ಇವೆಲ್ಲಾ ನೀವು ತಿಳಿದಿರಬೇಕು!

ಪ್ರತಿದಿನ ಸಾವಿರಾರು ದೂರು

ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಸುಮಾರು 5000 ದೂರುಗಳು ಪ್ರತಿದಿನ ದಾಖಲಾಗುತ್ತವೆ ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ವಂಚಕರು ಇದುವರೆಗೆ 9 ಲಕ್ಷಕ್ಕೂ ಹೆಚ್ಚು ಜನರನ್ನು ಬಲಿಪಶು ಮಾಡಿದ್ದಾರೆ. ಈ ಪೈಕಿ ಶೇ 10ರಷ್ಟು ಪ್ರಕರಣಗಳಲ್ಲಿ ಮಾತ್ರ ಫಲಿತಾಂಶ ಕಂಡುಬಂದಿದೆ.

ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ

ಸೈಬರ್ ಅಪರಾಧಕ್ಕೆ ಸಂಬಂಧಿಸಿದ ಯಾವುದೇ ಘಟನೆಯು ಯಾರಿಗಾದರೂ ಸಂಭವಿಸಿದರೆ, ಅಂತಹ ವ್ಯಕ್ತಿಯು ತಡಮಾಡದೆ ತಕ್ಷಣವೇ ಸರ್ಕಾರದ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ ಸಂಖ್ಯೆ 1930 ಗೆ ಕರೆ ಮಾಡಬೇಕು. ಕರೆ ಮಾಡಿದ ನಂತರ, ನಿಮಗೆ ಸಂಭವಿಸಿದ ಘಟನೆಯ ಬಗ್ಗೆ ತಿಳಿಸುವ ಮೂಲಕ ದೂರು ನೀಡಿ.

ಸಹಾಯವಾಣಿ ಸಂಖ್ಯೆಯನ್ನು ಹೊರತುಪಡಿಸಿ ನೀವು ದೂರು ನೀಡಲು ಇನ್ನೊಂದು ಆಯ್ಕೆಯನ್ನು ಸಹ ಆಯ್ಕೆ ಮಾಡಬಹುದು. https://cybercrime.gov.in/ ಗೆ ಭೇಟಿ ನೀಡುವ ಮೂಲಕ ನೀವು ಆನ್‌ಲೈನ್‌ನಲ್ಲಿ ದೂರು ಸಲ್ಲಿಸಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ