National Technology Day: ಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ: ಇದರ ಇತಿಹಾಸ, ಮಹತ್ವವೇನು?

ಭಾರತದಲ್ಲಿ ಪ್ರತಿ ವರ್ಷ ಮೇ 11ನೇ ತಾರೀಕು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಏನು ಈ ದಿನದ ಮಹತ್ವ, ಇತಿಹಾಸ ಹಾಗೂ ಈ ವರ್ಷದ ಘೋಷವಾಕ್ಯ ಏನು ಎಂಬುದರ ಮಾಹಿತಿ ಇಲ್ಲಿದೆ.

National Technology Day: ಇಂದು ಮೇ 11 ರಾಷ್ಟ್ರೀಯ ತಂತ್ರಜ್ಞಾನ ದಿನ: ಇದರ ಇತಿಹಾಸ, ಮಹತ್ವವೇನು?
National Technology Day
Follow us
Vinay Bhat
|

Updated on: May 11, 2023 | 6:51 AM

ಭಾರತದಲ್ಲಿ ಪ್ರತಿ ವರ್ಷ ಮೇ 11ನೇ ತಾರೀಕು ರಾಷ್ಟ್ರೀಯ ತಂತ್ರಜ್ಞಾನ ದಿನ (National Technology Day) ಆಚರಿಸಲಾಗುತ್ತದೆ. ಎಂಜಿನಿಯರ್​​ಗಳು, ವಿಜ್ಞಾನಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳನ್ನು ಗೌರವಿಸುವ ಸಲುವಾಗಿ ಈ ದಿನ ಮೀಸಲಾಗಿದೆ. 2021ರ ಮೇ 11ನೇ ತಾರೀಕಿನಂದು 30ನೇ ರಾಷ್ಟ್ರೀಯ ತಂತ್ರಜ್ಞಾನ (Technology) ದಿನಾಚರಣೆ. ಭಾರತದ (India) ತಾಂತ್ರಿಕ ಸಾಧನೆಗಳನ್ನು ಮತ್ತೊಮ್ಮೆ ನೆನಪಿಸಿಕೊಳ್ಳುವಂಥ ದಿನ ಇದಾಗಿದೆ.

1998ನೇ ಇಸವಿಯ ಇದೇ ಮೇ 11ನೇ ತಾರೀಕು ಭಾರತದ ಪಾಲಿಗೆ ಮಹತ್ತರವಾದ ದಿನ. ರಾಜಸ್ಥಾನದ ಪೋಖ್ರಾನ್​ನಲ್ಲಿ ಶಕ್ತಿ-1 ಅಣ್ವಸ್ತ್ರ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಆ ಕಾರ್ಯಾಚರಣೆಯನ್ನು ಮುನ್ನಡೆಸಿದವರು ಮಾಜಿ ರಾಷ್ಟ್ರಪತಿ, ದಿವಂಗತರಾದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ. ಆ ನಂತರ ದೇಶದಲ್ಲಿ ಇನ್ನಷ್ಟು ಅಣ್ವಸ್ತ್ರ ಪರೀಕ್ಷೆಗಳು ಯಶಸ್ವಿಯಾಗಿ ನಡೆದವು. ಇವೆಲ್ಲ ಆದ ನಂತರ ಆಗಿನ ಪ್ರಧಾನಿಗಳಾಗಿದ್ದ ಅಟಲ್​ ಬಿಹಾರಿ ವಾಜಪೇಯಿ ಅವರು ಭಾರತವನ್ನು ಅಣ್ವಸ್ತ್ರ ರಾಷ್ಟ್ರ ಎಂದು ಘೋಷಣೆ ಮಾಡಿದರು. ಆ ಮೂಲಕ ಅಣ್ವಸ್ತ್ರ ಹೊಂದಿದ ದೇಶಗಳ ಸಾಲಿನಲ್ಲಿ ಆರನೆಯದಾಗಿ ಭಾರತ ಕೂಡ ಸೇರ್ಪಡೆಯಾಯಿತು.

Tech Tips: ಸೋಲಾರ್ ಚಾರ್ಜರ್​ನಿಂದ ನಿಮ್ಮ ಮೊಬೈಲ್ ಬ್ಯಾಟರಿ ಫುಲ್ ಮಾಡಬಹುದು: ಹೇಗೆ ಗೊತ್ತೇ?

ಇದನ್ನೂ ಓದಿ
Image
Pixel 6a: ಪಿಕ್ಸೆಲ್ 7a ಬಿಡುಗಡೆಗೆ ಕ್ಷಣಗಣನೆ: ಪಿಕ್ಸೆಲ್ 6a ಫೋನ್ ಮೇಲೆ ಬಂಪರ್ ಆಫರ್ ಘೋಷಿಸಿದ ಫ್ಲಿಪ್​ಕಾರ್ಟ್
Image
Poco F5 5G: ಭಾರತದಲ್ಲಿ ಬಹುನಿರೀಕ್ಷಿತ ಪೋಕೋ F5 5G ಸ್ಮಾರ್ಟ್​ಫೋನ್ ಬಿಡುಗಡೆ: ಏನು ವಿಶೇಷತೆ?, ಬೆಲೆ ಎಷ್ಟು?
Image
Google I/O 2023: ಇಂದು ಗೂಗಲ್ ವಾರ್ಷಿಕ ಸಮ್ಮೇಳನ: ಪಿಕ್ಸೆಲ್ 7a, ಪಿಕ್ಸೆಲ್ ಫೋಲ್ಡ್ ಬಿಡುಗಡೆ ಸಾಧ್ಯತೆ: ಲೈವ್ ವೀಕ್ಷಿಸುವುದು ಹೇಗೆ?
Image
Google Pixel 7a: ಗೂಗಲ್‌ ಪಿಕ್ಸೆಲ್‌ 7a ಸ್ಮಾರ್ಟ್​ಫೋನ್​ನ ಬೆಲೆ ಆನ್​ಲೈನ್​ನಲ್ಲಿ ಸೋರಿಕೆ

ಅಣ್ವಸ್ತ್ರ ಪರೀಕ್ಷೆಯನ್ನು ಹೊರತುಪಡಿಸಿ, ಭಾರತವು ಅದೇ ದಿನ (ಮೇ 11) ಮೊದಲ ದೇಶೀಯ ವಿಮಾನವಾದ ಹಂಸ- 3 ಕೂಡ ಪರೀಕ್ಷಿಸಿತು. ಇದನ್ನು ರೂಪಿಸಿದ್ದು ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿ. ಕರ್ನಾಟಕದ ಬೆಂಗಳೂರಿನಲ್ಲಿ ಈ ವಿಮಾನ ಸಿದ್ಧವಾಯಿತು. ಹಗುರವಾದ ಎರಡು ಆಸನದ ಈ ವಿಮಾನವನ್ನು ಸಿದ್ಧಪಡಿಸಿದ್ದು ಪೈಲಟ್ ತರಬೇತಿ, ಸರ್ವೇಲನ್ಸ್ ಮತ್ತು ಇತರ ಉದ್ದೇಶಗಳಿಗಾಗಿ.

ಇಂಥ ಪರೀಕ್ಷೆಗಳ ಸಾಲಿಗೆ ಡಿಫೆನ್ಸ್ ರೀಸರ್ಷ್ ಅಂಡ್ ಡೆವಲಪ್​ಮೆಂಟ್ ಆರ್ಗನೈಸೇಷನ್ (ಡಿಆರ್​ಡಿಒ) ಕೂಡ ಕೊಡುಗೆ ನೀಡಿದೆ. ಇದೇ ದಿನದಂದು ನೆಲದಿಂದ ಆಕಾಶಕ್ಕೆ ಚಿಮ್ಮುವಂಥ ತ್ರಿಶೂಲ್ ಕ್ಷಿಪಣಿಯ ಯಶಸ್ವಿ ಪ್ರಯೋಗ ಮಾಡಿತು. ಇದರ ಯಶಸ್ವಿ ಪ್ರಯೋಗದ ನಂತರ ಭಾರತೀಯ ಸೇನೆ ಮತ್ತು ವಾಯು ಸೇನೆಗೆ ಸೇರ್ಪಡೆ ಮಾಡಲಾಯಿತು. ಈ ಎಲ್ಲ ತಂತ್ರಜ್ಞಾನ ಸಾಧನೆಗಳೂ ಮೇ 11ನೇ ತಾರೀಕಿನಂದೇ ಆಗಿವೆ. ಭಾರತ ಸರ್ಕಾರ ಮೇ 11ನೇ ತಾರೀಕಿನ ದಿನವನ್ನು ಅಧಿಕೃತವಾಗಿ ತಂತ್ರಜ್ಞಾನ ದಿನ ಎಂದು ಘೋಷಣೆ ಮಾಡಿದೆ.

1999ರಿಂದ ಈಚೆಗೆ ಪ್ರತಿ ವರ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಟಿಡಿಬಿ)ಯಿಂದ ಈ ದಿನವನ್ನು ಆಚರಿಸಲಾಗುತ್ತದೆ. ವಿವಿಧ ಕಾರ್ಯಾಗಾರ, ಸೆಮಿನಾರ್​ಗಳನ್ನು ಆಯೋಜಿಸಲಾಗುತ್ತದೆ. ಜತೆಗೆ ಮಂಡಳಿಯಿಂದ ಬೆಂಬಲಿಸಿದ ಕಂಪೆನಿಗಳ ತಂತ್ರಜ್ಞಾನದ ಪ್ರದರ್ಶನ ಆಗುತ್ತದೆ. ಈ ವರ್ಷದ ರಾಷ್ಟ್ರೀಯ ತಂತ್ರಜ್ಞಾನ ದಿನದ ಘೋಷ ವಾಕ್ಯ: ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ