ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ (Samsung) ಕಂಪನಿಯ ಗ್ಯಾಲಕ್ಸಿ M ಸರಣಿಯ ಫೋನ್ಗಳಿಗೆ ಭಾರತದಲ್ಲಿ ಎಲ್ಲಿಲ್ಲದ ಬೇಡಿಕೆಯಿದೆ. ಈಗಾಗಲೇ ಈ ಸರಣಿಯಡಿಯಲ್ಲಿ ಕಂಪನಿ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿದೆ. ಇದೀಗ ಮತ್ತೊಂದು ಬೊಂಬಾಟ್ ಫೋನನ್ನು ಭಾರತದಲ್ಲಿ ಸ್ಯಾಮ್‌ಸಂಗ್ ಬಿಡುಗಡೆ ಮಾಡಿದೆ. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಮ್53 5ಜಿ (Samsung Galaxy M53 5G). ಅಚ್ಚರಿ ಎಂದರೆ ಇದು ಬರೋಬ್ಬರಿ 108 ಮೆಗಾಫಿಕ್ಸೆಲ್ (108MP Camera) ಸೆನ್ಸಾರ್ ಸಾಮರ್ಥ್ಯದ ಆಕರ್ಷಕ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ 120Hz ರೀಫ್ರೇಶ್ ರೇಟ್, ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲ ಸೇರಿದಂತೆ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ವಿಶೇಷತೆ ಏನೆಲ್ಲ ಇದೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ ಭಾರದಲ್ಲಿ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಮಾದರಿಗೆ 23,999 ರೂ. ನಿಗದಿ ಮಾಡಲಾಗದೆ. ಹಾಗೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 25,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್ ಖರೀದಿಸುವವರು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು EMI ವಹಿವಾಟುಗಳಿಗೆ 2,500 ತ್ವರಿತ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಇದು ನೀಲಿ ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಈ ಫೋನ್ ಏಪ್ರಿಲ್ 29 ರಂದು ಮಧ್ಯಾಹ್ನ 12 ಗಂಟೆಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್ ಮತ್ತು ಚಿಲ್ಲರೆ ಚಾನೆಲ್‌ಗಳ ಮೂಲಕ ಸೇಲ್ ಕಾಣಲಿದೆ.
ಏನು ವಿಶೇಷತೆ?:
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ HD+ ಇನ್ಫಿನಿಟಿ ಒ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್ ಸ್ಯಾಮ್‌ಸಂಗ್‌ನ ‘RAM ಪ್ಲಸ್’ ಫೀಚರ್ಸ್ ಹೊಂದಿರುವುದು ಮತ್ತೊಂದು ವಿಶೇಷ.
ಆಕರ್ಷಕವಾದ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇನ್ನು ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/ A-GPS ಮತ್ತು ಯುಎಸ್‌ಬಿ ಟೈಪ್ C ಪೋರ್ಟ್ ಹೊಂದಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಅಳವಡಿಸಲಾಗಿದೆ.
Realme GT 2: 50MP ಕ್ಯಾಮೆರಾ, 65W ಫಾಸ್ಟ್ ಚಾರ್ಜರ್: ಭಾರತದಲ್ಲಿ ರಿಯಲ್ ಮಿ GT 2 ಸ್ಮಾರ್ಟ್‌ಫೋನ್ ಬಿಡುಗಡೆ