ಮೋಟೋರೊಲಾ (Motorola) ಕಂಪನಿ ಭಾರತದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುತ್ತಲೇ ಇದೆ. ಬಜೆಟ್ ಬೆಲೆಯಿಂದ ಹಿಡಿದು ಹೈ ರೇಂಜ್ ಮಾದರಿಯ ಫೋನ್ಗಳನ್ನು ತಯಾರು ಮಾಡುತ್ತಿರುವ ಮೋಟೋ ಕಂಪನಿಯ ಪೋನ್ಗಳಿಗೆ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೆ ತನ್ನ E ಸರಣಿಯಲ್ಲಿ ಹೊಸ ಮೋಟೋ ಇಎ22ಎಸ್ (Moto E22s) ಫೋನನ್ನು ರಿಲೀಸ್ ಮಾಡಿತ್ತು. ಬಜೆಟ್ ಬೆಲೆಯ ಈ ಅತ್ಯತ್ತುಮ ಫೋನ್ ಇಂದಿನಿಂದ ದೇಶದಲ್ಲಿ ಖರೀದಿಗೆ ಸಿಗುತ್ತಿದೆ. ಭಾರತೀಯ ಮಾರುಕಟ್ಟೆಯಲ್ಲಿ 10,000 ರೂ. ಒಳಗಡೆ ಲಭ್ಯವಿರುವ ಕೆಲವೇ ಕೆಲವು ಬೆಸ್ಟ್ ಸ್ಮಾರ್ಟ್ಫೋನ್ಗಳ ಸಾಲಿಗೆ ಇದುಕೂಡ ಸೇರಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.
ಮೋಟೋ E32s ಸ್ಮಾರ್ಟ್‌ಫೋನ್ ಭಾರತದಲ್ಲಿ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಆಯ್ಕೆಗೆ ಕೇವಲ 8,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ ಮೂಲಕ ಇಂದು ಮಧ್ಯಾಹ್ನ 12 ಗಂಟೆಯಿಂದ ಖರೀದಿಗೆ ಲಭ್ಯವಿದೆ. ಕಪ್ಪು ಮತ್ತು ಆರ್ಟಿಕ್ ಬ್ಲೂ ಕಲರ್ನಲ್ಲಿ ಮೋಟೋ E32s ಸ್ಮಾರ್ಟ್‌ಫೋನ್ ಅನ್ನು ನಿಮ್ಮದಾಗಿಸಬಹುದು.
ಮೊದಲ ಸೇಲ್ ಪ್ರಯುಕ್ತ ಬಂಪರ್ ಆಫರ್ ಕೂಡ ನೀಡಲಾಗಿದ್ದು ನಿಮ್ಮಲ್ಲಿ ಜಿಯೋ ಸಿಮ್ ಇದ್ದರೆ ಮೈಜಿಯೋ ಆ್ಯಪ್ ಓಪನ್ ಮಾಡಿ, ಅದರಲ್ಲೊಂದು ಕೂಪನ್ ನೀಡಲಾಗಿದೆ. ಇದನ್ನು ಬಳಸಿ ಮೋಟೋ E32s ಫೋನನ್ನು ನೀವು ಕಡಿಮೆ ಬೆಲೆಗೆ ಖರೀದಿಸಬಹುದು.
ಈ ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಮೀಡಿಯಾ ಟೆಕ್ ಹೆಲಿಯೊ G37 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 OS ಜೊತೆಗೆ ರನ್ ಆಗಲುತ್ತಿದ್ದು 1TB ವರೆಗೆ ಮೆಮೋರಿಯನ್ನು ಹೆಚ್ಚಿಸಬಹುದಾಗಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಮೋಟೋ E32s ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್ ಹಾಗೂ ಎರಡನೇ ಕ್ಯಾಮೆರಾ 2 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್ ನೀಡಲಾಗಿದೆ. ಇವುಗಳ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳ ಮೂಲಕ 30fps ಫುಲ್ HD ವಿಡಿಯೋವನ್ನು ರೆಕಾರ್ಡಿಂಗ್ ಮಾಡಬಹುದು. ಜೊತೆಗೆ ಪನೋರಮ, ಪೋಟ್ರೆಟ್, ನೈಟ್ ವರ್ಷನ್, ಡ್ಯುಯೆಲ್ ಕಾಪ್ಚರ್, ಲೈವ್ ಫಿಲ್ಟರ್ ಸೇರಿದಂತೆ ಅನೇಕ ಆಯ್ಕೆಗಳಿವೆ.
ಮೋಟೋ E22s ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದಿದೆ. ಇದು 10W ಚಾರ್ಜಿಂಗ್ ವೇಗವನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್, ವೈಫೈ, ಬ್ಲೂಟೂತ್ v5.0 ಬೆಂಬಲ ಪಡೆದುಕೊಂಡಿದೆ. ಭದ್ರತೆಗಾಗಿ. ಇದು 5ಜಿ ಬೆಂಬಲ ಪಡೆದುಕೊಂಡಿಲ್ಲ ಬದಲಾಗಿ 4G VoLTE ಸಪೋರ್ಟ್ ಮಾಡುತ್ತದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಜೊತೆಗೆ ಫೇಸ್ ಅನ್‌ಲಾಕ್ ತಂತ್ರಜ್ಞಾನ ಒಳಗೊಂಡಿರಿವುದು ಈ ಫೋನಿನ ವಿಶೇಷತೆ.
Published On - 11:15 am, Sat, 22 October 22