ಭಾರತದಲ್ಲಿ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ರಿಲೀಸ್ ಆಗಿದೆ. ಇದರ 3GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕೆ 10,299 ರೂ. ನಿಗದಿ ಮಾಡಲಾಗಿದೆ.
Ad
Nokia C21 Plus
Follow us on
ನೋಕಿಯಾ (Nokia) ಕಂಪನಿಯ ಸ್ಮಾರ್ಟ್ಫೋನ್ಗಳಿಗೆ ಭಾರತದಲ್ಲಿ ಹಿಂದಿನ ರೀತಿ ದೊಡ್ಟ ಮಟ್ಟದ ಮಾರ್ಕೆಟ್ ಇಲ್ಲ. ಒಂದು ಕಾಲದಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಶವೋಮಿ (Xiaomi), ಸ್ಯಾಮ್ಸಂಗ್, ರಿಯಲ್ ಮಿ, ವಿವೋ ಬ್ರ್ಯಾಂಡ್ಗಳು ಬಂದ ಮೇಲೆ ನೋಕಿಯಾ ಮೊಬೈಲ್ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ನೋಕಿಯಾ ಆಗಾಗ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದೀಗ ದೇಶದಲ್ಲಿ ಬಜೆಟ್ ಬೆಲೆಗೆ ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 21 ಪ್ಲಸ್ (Nokia C21 Plus) ಫೋನನ್ನು ಅನಾವರಣ ಮಾಡಿದೆ. ನೋಕಿಯಾ. ಕಾಮ್ನಲ್ಲಿ ಈ ಫೋನನ್ನು ನೀವು ಖರೀದಿಸಬಹುದು. ಇತರೆ ಇ ಕಾಮರ್ಸ್ ತಾಣದಲ್ಲಿ ಸದ್ಯದಲ್ಲೇ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ನೋಕಿಯಾ C21 ಪ್ಲಸ್ ಸ್ಮಾರ್ಟ್ಫೋನಿನ ಬೆಲೆ, ವಿಶೇಷತೆ ಕುರಿತ ಎಲ್ಲ ಮಾಹಿತಿ ಇಲ್ಲಿದೆ ನೋಡಿ.
ಭಾರತದಲ್ಲಿ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ರಿಲೀಸ್ ಆಗಿದೆ. ಇದರ 3GB RAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕೆ 10,299 ರೂ. ನಿಗದಿ ಮಾಡಲಾಗಿದೆ. ಅಂತೆಯೆ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯ ಬೆಲೆ 11,299 ರೂ. ಆಗಿದೆ.
ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 81.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ.
ಆಕ್ಟಾ-ಕೋರ್ ಯುನಿಸೋಕ್ SC9863a SoC ಪ್ರೊಸೆಸರ್ ಅನ್ನು ಪಡದುಕೊಂಡಿದ್ದು, ಆಂಡ್ರಾಯ್ಡ್ 11 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ.
ಇದನ್ನೂ ಓದಿ
Oppo A97 5G: ಒಪ್ಪೋದಿಂದ ಬಜೆಟ್ ಬೆಲೆಗೆ ಆಕರ್ಷಕ ಕ್ಯಾಮೆರಾ, ಬ್ಯಾಟರಿಯ ಹೊಸ ಫೋನ್ ಬಿಡುಗಡೆ
Nothing phone (1): ಇಂದು ವಿಶ್ವವೇ ಕಾಯುತ್ತಿರುವ ನಥಿಂಗ್ ಫೋನ್ 1 ಬಿಡುಗಡೆ: ಬೆಲೆ ಎಷ್ಟು? ಫೀಚರ್ಸ್ ಏನು?
Xiaomi 12 Lite: 108MP ಕ್ಯಾಮೆರಾ, 67W ಫಾಸ್ಟ್ ಚಾರ್ಜರ್: ಶವೋಮಿಯಿಂದ ಮತ್ತೊಂದು ಪವರ್ಫುಲ್ ಫೋನ್ ರಿಲೀಸ್
ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕಾಲ್ಗಳಿಗಾಗಿ, 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆಟಪ್ ನೀಡಲಾಗಿದೆ.
ವಿಶೇಷವಾಗಿ ಈ ಸ್ಮಾರ್ಟ್‌ಫೋನ್ 5,050mAh ಬ್ಯಾಟರಿಯನ್ನು ಒದಗಿಸಿದ್ದು ಅದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಮತ್ತು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಬಳಕೆಯನ್ನು ನೀಡುತ್ತದೆ. ಕನೆಕ್ಟಿವಿಟ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v4.2, FM ರೇಡಿಯೋ ಸೇರಿದಂತೆ ಬೇಸಕ್ ಆಯ್ಕೆಗಳಿವೆ.