AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nokia C20 Plus: ನೋಕಿಯಾದಿಂದ ಕೇವಲ 8,999 ರೂ. ಗೆ ಹೊಸ ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ

ಒಟ್ಟು ಎರಡು ಆಯ್ಕೆಯಲ್ಲಿ ಬಿಡುಗಡೆ ಆಗಿರುವ ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್‌, 2GBRAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕೆ 8,999 ರೂ. ನಿಗದಿ ಮಾಡಲಾಗಿದೆ.

Nokia C20 Plus: ನೋಕಿಯಾದಿಂದ ಕೇವಲ 8,999 ರೂ. ಗೆ ಹೊಸ ಆಕರ್ಷಕ ಸ್ಮಾರ್ಟ್​ಫೋನ್ ಬಿಡುಗಡೆ
Nokia C20 Plus
TV9 Web
| Edited By: |

Updated on: Aug 10, 2021 | 3:06 PM

Share

ಭಾರತೀಯ ಮಾರುಕಟ್ಟೆಯಲ್ಲಿ ನೆಲೆಯೂರಲು ಹರಸಾಹಸ ಪಡುತ್ತಿರುವ ನೋಕಿಯಾ (Nokia) ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸುತ್ತಿದೆ. ಸದ್ಯ ಇದೀಗ ತನ್ನ ಹೊಸ ನೋಕಿಯಾ C20 ಪ್ಲಸ್ (Nokia C20 Plus) ಅನ್ನು ದೇಶೀಯ ಮಾರುಕಟ್ಟೆಯಲ್ಲಿ ಅನಾವರಣ ಮಾಡಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಜೊತೆಗೆ, ಆಕ್ಟಾ-ಕೋರ್ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಈ ಫೋನ್ ಅತಿ ಕಡಿಮೆ ಬೆಲೆಗೆ ಲಭ್ಯವಿದೆ.

ಒಟ್ಟು ಎರಡು ಆಯ್ಕೆಯಲ್ಲಿ ಬಿಡುಗಡೆ ಆಗಿರುವ ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್‌, 2GBRAM ಮತ್ತು 32GB ಸ್ಟೋರೇಜ್ ರೂಪಾಂತರಕ್ಕೆ 8,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 3GBRAM ಮತ್ತು 32GB ಸ್ಟೋರೇಜ್ ಆಯ್ಕೆಯ ಬೆಲೆ 9,999 ರೂ. ಆಗಿದೆ.

ಏನು ವಿಶೇಷತೆ?:

ನೋಕಿಯಾ C20 ಪ್ಲಸ್ ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 81.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಯುನಿಸೋಕ್ SC9863a SoC ಪ್ರೊಸೆಸರ್‌ ಅನ್ನು ಪಡದುಕೊಂಡಿದ್ದು, ಆಂಡ್ರಾಯ್ಡ್ 11 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಜೊತೆಗೆ ಎಲ್ಇಡಿ ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ, 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆಟಪ್ ಹೊಂದಿದೆ.

ವಿಶೇಷವಾಗಿ ಈ ಸ್ಮಾರ್ಟ್‌ಫೋನ್‌ 4,950mAh ಬ್ಯಾಟರಿಯನ್ನು ಒದಗಿಸಿದ್ದು ಅದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಮತ್ತು ಒಂದೇ ಚಾರ್ಜ್‌ನಲ್ಲಿ ಎರಡು ದಿನಗಳ ಬಳಕೆಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v4.2, FM ರೇಡಿಯೋ ಸೇರಿದಂತೆ ಬೇಸಕ್ ಆಯ್ಕೆಗಳಿವೆ.

Mi TV 4C: ಅತಿ ಕಡಿಮೆ ಬೆಲೆಯ ಎಂಐ 4ಸಿ ಸ್ಮಾರ್ಟ್​ಟಿವಿ ಲಾಂಚ್: ಆಫರ್​ನಲ್ಲಿ ಪಡೆಯಿರಿ ಮತ್ತಷ್ಟು ಡಿಸ್ಕೌಂಟ್

ಗೂಗಲ್ ಕ್ರೋಮ್ ಬಳಸುತ್ತಿದ್ದಲ್ಲಿ ತಕ್ಷಣವೇ ಅಪ್ಡೇಟ್ ಮಾಡಿ: CERT ಯಿಂದ ಶಾಕಿಂಗ್ ಮಾಹಿತಿ

(Nokia C20 Plus 5000mAh Battery launched in India costs Rs 8999)

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ