Nokia C32: ನೋಕಿಯಾದಿಂದ ದಿಢೀರ್ C32 ಸ್ಮಾರ್ಟ್​ಫೋನ್ ಬಿಡುಗಡೆ: ಏನಿದೆ ಫೀಚರ್ಸ್?, ಬೆಲೆ ಎಷ್ಟು?

ನೋಕಿಯಾ ಕಂಪನಿ ತನ್ನ C ಕ್ಯಾಟಗರಿಯಲ್ಲಿ ಹೊಸ ಮೊಬೈಲ್ ಅನ್ನು ಅನಾವರಣ ಮಾಡಿದೆ. ಸದ್ದಿಲ್ಲದೆ ನೋಕಿಯಾ ಸಿ32 (Nokia C32) ಎಂಬ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

Nokia C32: ನೋಕಿಯಾದಿಂದ ದಿಢೀರ್ C32 ಸ್ಮಾರ್ಟ್​ಫೋನ್ ಬಿಡುಗಡೆ: ಏನಿದೆ ಫೀಚರ್ಸ್?, ಬೆಲೆ ಎಷ್ಟು?
Nokia C32
Follow us
Vinay Bhat
|

Updated on:May 23, 2023 | 3:27 PM

ಪ್ರಸಿದ್ಧ ನೋಕಿಯಾ (Nokia) ಕಂಪನಿಯ ಸ್ಮಾರ್ಟ್​ಫೋನ್​ಗಳು ಇಂದು ಮಾರುಕಟ್ಟೆಯಲ್ಲಿ ದೊಡ್ಟ ಮಟ್ಟದ ಯಶಸ್ಸು ಸಾಧಿಸುತ್ತಿಲ್ಲ. ಒಂದು ಕಾಲದಲ್ಲಿ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಪಾತಾಳಕ್ಕೆ ಕುಸಿದಿದೆ. ಇತರೆ ಬ್ರ್ಯಾಂಡ್​ಗಳ ಹೊಡೆತಕ್ಕೆ ಸಿಲುಕಿ ನೋಕಿಯಾ ಮೊಬೈಲ್​ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ಕಂಪನಿ ಆಗಾಗ ಹೊಸ ಸ್ಮಾರ್ಟ್​ಫೋನ್​ಗಳನ್ನು (Smartphones) ಬಿಡುಗಡೆ ಮಾಡುತ್ತಿರುತ್ತವೆ. ಇದೀಗ ಕಂಪನಿ ತನ್ನ C ಕ್ಯಾಟಗರಿಯಲ್ಲಿ ಹೊಸ ಮೊಬೈಲ್ ಅನ್ನು ಅನಾವರಣ ಮಾಡಿದೆ. ಸದ್ದಿಲ್ಲದೆ ನೋಕಿಯಾ ಸಿ32 (Nokia C32) ಎಂಬ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದು ಫೀಚರ್​ಗೆ ತಕ್ಕಂತೆ ದರ ನಿಗದಿ ಪಡಿಸಲಾಗಿದೆ.

ಬೆಲೆ ಎಷ್ಟು?:

ನೋಕಿಯಾ C32 ಸ್ಮಾರ್ಟ್​ಫೋನ್ ದೇಶದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 4 GB RAM + 64 GB ಆಯ್ಕೆಗೆ 8,999 ರೂ. ಇದೆ ಅಂತೆಯೆ 4 GB RAM + 128 GB ಸ್ಟೋರೇಜ್ ರೂಪಾಂತರಕ್ಕೆ 9,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ನೋಕಿಯಾ ಇಂಡಿಯಾದ ಅಧಿಕೃತ ವೆಬ್​ಸೈಟ್​ನಲ್ಲಿ ಖರೀದಿಗೆ ಲಭ್ಯವಿದೆ.

ಇದನ್ನೂ ಓದಿ
Image
Motorola Edge 40: ಭಾರತಕ್ಕೆ ಬಂತು ವಿದೇಶದಲ್ಲಿ ಧೂಳೆಬ್ಬಿಸಿದ ಮೋಟೋ ಎಡ್ಜ್‌ 40 ಸ್ಮಾರ್ಟ್​ಫೋನ್: ಬೆಲೆ ಎಷ್ಟು ನೋಡಿ
Image
Redmi A2: ಕೇವಲ 5,999 ರೂ. ಬೆಲೆಯ ರೆಡ್ಮಿ ಫೋನಿನ ಮಾರಾಟ ಆರಂಭ: ಭರ್ಜರಿ ಆಫರ್
Image
WhatsApp New Updates: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು: ಬಂದಿದೆ ಹೊಸ ಆಯ್ಕೆ
Image
Best AC in India: ಹೆಚ್ಚಾಗುತ್ತಿದೆ ಸೆಖೆಯ ಪ್ರಮಾಣ: ಇಲ್ಲಿದೆ ನೋಡಿ ಕಡಿಮೆ ಬೆಲೆಯ ಅತ್ಯುತ್ತಮ ಎಸಿಗಳು

Oppo F23 5G: ಭಾರತದ ಗ್ಯಾಜೆಟ್ ಮಾರುಕಟ್ಟೆಗೆ ಬಿಡುಗಡೆಯಾಯ್ತು ಹೊಸ ಒಪ್ಪೊ ಫೋನ್

ಏನಿದೆ ಫೀಚರ್ಸ್:

ನೋಕಿಯಾ C32 ಸ್ಮಾರ್ಟ್‌ಫೋನ್‌ 1600 x 700 ಪಿಕ್ಸೆಲ್ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಕರ್ವ್​ಡದ ಡಿಸ್‌ಪ್ಲೇಯನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP52 ರೇಟಿಂಗ್ ನೀಡಿರುವ ಸಾಧ್ಯತೆ ಇದೆ. ಆಕ್ಟಾ ಕೋರ್‌ SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಆದರೆ, ಇದು ಯಾವುದು ಎಂಬುದು ಬಹಿರಂಗವಾಗಿಲ್ಲ. ಆಂಡ್ರಾಯ್ಡ್‌ 13 (Go ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತಿದ್ದು 7GB ವರೆಗೆ RAM ಅನ್ನು ವಿಸ್ತರಿಸಿಬಹುದು. ಮೈಕ್ರೊ SD ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಬಹುದು ಎಂದು ಕಂಪನಿ ಹೇಳಿದೆ.

ಈ ಸ್ಮಾರ್ಟ್‌ಫೋನ್​ನ ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಹಿಂಬದಿಯಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ಅಳವಡಿಸಲಾಗಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್​ನ ಸೆಕೆಂಡರಿ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ. ಮುಂಭಾಗ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಬ್ಯೂಟಿಫಿಕೇಶನ್ ಸಪೋರ್ಟ್ ಮತ್ತು ಎಲ್‌ಇಡಿ ಫ್ಲ್ಯಾಷ್ ಸೇರಿದಂತೆ ಕೆಲ ವಿಶೇಷ ಫೀಚರ್​ಗಳಿವೆ.

5,000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದ್ದು, ಇದಕ್ಕೆ ತಕ್ಕಂತೆ 10W ಚಾರ್ಜಿಂಗ್ ಬೆಂಬಲವನ್ನು ಒಳಗೊಂಡಿದೆ. ಇದು ಮೂರು ದಿನಗಳ ಬ್ಯಾಟರಿ ಲೈಫ್ ನೀಡುತ್ತದೆ ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 5.2, ಯುಎಸ್‌ಬಿ 2.0 ಪೋರ್ಟ್ ಮತ್ತು 3.5 ಎಂಎಂ ಆಡಿಯೋ ಜ್ಯಾಕ್ ಸೇರಿದಂತೆ ಇತ್ತೀಚಿನ ಆಯ್ಕೆ ನೀಡಲಾಗಿದೆ. ಸೈಡ್-ಮೌಂಟೆಡ್ ಫಿಂಗರ್​ಪ್ರಿಂಟ್ ಸೆನ್ಸಾರ್ ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Tue, 23 May 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್