Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಬಾಕಿ: ಬಿಡುಗಡೆಗೂ ಮುನ್ನ ಧೂಳೆಬ್ಬಿಸುತ್ತಿದೆ ನೋಕಿಯಾ G42 5G ಸ್ಮಾರ್ಟ್​ಫೋನ್

Nokia G42 5G India Launch: ನೋಕಿಯಾ G42 5G ಸ್ಮಾರ್ಟ್​ಫೋನ್ ಸೆಪ್ಟೆಂಬರ್ 11 ರಂದು ಭಾರತದಲ್ಲಿ ಅನಾವರಣ ಆಗಲಿದೆ. ಈ ಕುರಿತ ಟೀಸ್ ಕೂಡ ಬಿಡುಗಡೆ ಆಗಿದ್ದು ಆಕರ್ಷಕವಾಗಿದೆ. ಇದು ಅನ್ನು ನೇರಳೆ ಮತ್ತು ಪಿಂಕ್ ಬಣ್ಣಗಳ ವಿನ್ಯಾಸವನ್ನು ಒಳಗೊಂಡಿದೆ. ಸೆಲ್ಫಿ ಸ್ನ್ಯಾಪರ್ ಮತ್ತು ಸ್ಲಿಮ್ ಬೆಜೆಲ್‌ಗಳಿಗಾಗಿ ವಾಟರ್‌ಡ್ರಾಪ್ ನಾಚ್ ಅನ್ನು ನೀಡಲಾಗಿದೆ.

ಒಂದೇ ದಿನ ಬಾಕಿ: ಬಿಡುಗಡೆಗೂ ಮುನ್ನ ಧೂಳೆಬ್ಬಿಸುತ್ತಿದೆ ನೋಕಿಯಾ G42 5G ಸ್ಮಾರ್ಟ್​ಫೋನ್
Nokia G42 5G
Follow us
Vinay Bhat
|

Updated on: Sep 10, 2023 | 6:55 AM

ನೋಕಿಯಾ ಕಂಪನಿಯ ಫೋನುಗಳಿಗೆ ಭಾರತದಲ್ಲಿ ಈಗ ಹಿಂದಿನಂತೆ ಬೇಡಿಕೆ ಇಲ್ಲ. ಶವೋಮಿ, ಒನ್​ಪ್ಲಸ್, ಸ್ಯಾಮ್​ಸಂಗ್, ಒಪ್ಪೋದಂತಹ ಬ್ರ್ಯಾಂಡ್​ಗಳು ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಪರಿಚಯಿಸಿದ ನಂತರ ನೋಕಿಯಾ ಫೋನುಗಳ ಬೇಡಿಕೆ ಗಣನೀಯವಾಗಿ ಕಡಿಮೆ ಆಯಿತು. ಹೀಗಿದ್ದರೂ ಆಗಾಗ ದೇಶದಲ್ಲಿ ಉತ್ತಮ ಮೊಬೈಲ್​ಗಳನ್ನು ಪರಿಚಯಿಸುತ್ತಿರುತ್ತದೆ. ಈಗ ಅದೇ ಸಾಲಿನಲ್ಲಿ ಕಂಪನಿ ಹೊಸ ನೋಕಿಯಾ ಜಿ42 5ಜಿ (Nokia G42 5G) ಸ್ಮಾರ್ಟ್​ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಫೋನ್ ಸೆಪ್ಟೆಂಬರ್ 11 ರಂದು ಭಾರತದಲ್ಲಿ ಅನಾವರಣ ಆಗಲಿದೆ.

ನೋಕಿಯಾ G42 5G ಸ್ಮಾರ್ಟ್​ಫೋನ್ ಕುರಿತ ಟೀಸರ್ ಕೂಡ ಬಿಡುಗಡೆ ಆಗಿದ್ದು ಆಕರ್ಷಕವಾಗಿದೆ. ಇದು ಅನ್ನು ನೇರಳೆ ಮತ್ತು ಪಿಂಕ್ ಬಣ್ಣಗಳ ವಿನ್ಯಾಸವನ್ನು ಒಳಗೊಂಡಿದೆ. ಸೆಲ್ಫಿ ಸ್ನ್ಯಾಪರ್ ಮತ್ತು ಸ್ಲಿಮ್ ಬೆಜೆಲ್‌ಗಳಿಗಾಗಿ ವಾಟರ್‌ಡ್ರಾಪ್ ನಾಚ್ ಅನ್ನು ನೀಡಲಾಗಿದೆ. ವಾಲ್ಯೂಮ್ ರಾಕರ್ ಮತ್ತು ಪವರ್ ಬಟನ್ ಜೊತೆಗೆ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಇರುವಂತೆ ಕಾಣಿಸುತ್ತಿದೆ. ಟ್ರಿಪಲ್ ಕ್ಯಾಮೆರಾ ಆಯ್ಕೆ ನೀಡಲಾಗಿದ್ದು, ಎಲ್ಇಡಿ ಫ್ಲ್ಯಾಷ್ ಕೂಡ ಟೀಸರ್​ನಲ್ಲಿ ಸೆರೆಯಾಗಿದೆ.

ನೋಕಿಯಾ G42 5G ಫೀಚರ್ಸ್:

ಡಿಸ್‌ಪ್ಲೇ: ನೋಕಿಯಾ G42 5G ಸ್ಮಾರ್ಟ್​ಫೋನ್ 90Hz ರಿಫ್ರೆಶ್ ರೇಟ್‌ನೊಂದಿಗೆ 6.56-ಇಂಚಿನ IPS LCD HD+ ಡಿಸ್ ಪ್ಲೇ, ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಮತ್ತು ಸೆಲ್ಫಿ ಶೂಟರ್‌ಗಾಗಿ ವಾಟರ್‌ಡ್ರಾಪ್ ನಾಚ್ ಅನ್ನು ಹೊಂದಿದೆ.

ಇದನ್ನೂ ಓದಿ
Image
ಒಂದು ವಾಟ್ಸ್​ಆ್ಯಪ್ ಖಾತೆಯನ್ನು ಎಷ್ಟು ​ಫೋನ್​ಗಳಲ್ಲಿ ಉಪಯೋಗಿಸಬಹುದು?
Image
ನಥಿಂಗ್ ಫೋನ್ 2 ಸ್ಮಾರ್ಟ್​ಫೋನ್ ಮೇಲೆ ಬಂಪರ್ ಡಿಸ್ಕೌಂಟ್
Image
ಮಲಗುವಾಗ ಮೊಬೈಲ್ ಅನ್ನು ಎಷ್ಟು ದೂರ ಇಟ್ಟುಕೊಳ್ಳಬೇಕು?
Image
ಮಾರುಕಟ್ಟೆಗೆ ಲಗ್ಗೆಯಿಟ್ಟ ಹೊಸ ಹುವೈ ​ಫೋನ್: ಯಾವುದು?, ಬೆಲೆ ಎಷ್ಟು?

ಬರೋಬ್ಬರಿ 120W ಹೈಪರ್‌ ಚಾರ್ಜರ್ ಇರುವ ಶವೋಮಿ 12 ಪ್ರೊ ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ

ಚಿಪ್‌ಸೆಟ್: ಈ ಹ್ಯಾಂಡ್‌ಸೆಟ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480+ SoC ಯಿಂದ ಚಾಲಿತವಾಗಲಿದ್ದು, ಗ್ರಾಫಿಕ್ಸ್‌ಗಾಗಿ Adreno GPU ಜೊತೆ ಜೋಡಿಸಲಾಗಿದೆ.

RAM ಮತ್ತು ಸ್ಟೋರೇಜ್: 4GB/6GB RAM ಮತ್ತು 128GB ಸ್ಟೋರೇಜ್‌ನೊಂದಿಗೆ ಬರಲಿದೆ. ಇದನ್ನು ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ ಮತ್ತಷ್ಟು ವಿಸ್ತರಿಸಬಹುದಾಗಿದೆ. 5GB ವರ್ಚುವಲ್ RAM ಬೆಂಬಲವಿದೆ.

OS: ನೋಕಿಯಾ G42 ಸ್ಮಾರ್ಟ್​ಫೋನ್ ಆಂಡ್ರಾಯ್ಡ್ 13 OS ನಲ್ಲಿ ರನ್ ಆಗುತ್ತದೆ.

ಕ್ಯಾಮೆರಾಗಳು: 50MP ಮುಖ್ಯ ಕ್ಯಾಮೆರಾ, 2MP ಮ್ಯಾಕ್ರೋ ಲೆನ್ಸ್ ಮತ್ತು 2MP ಡೆಪ್ತ್ ಮಾಡ್ಯೂಲ್ ಇದೆ. ಸೆಲ್ಫಿ ಮತ್ತು ವಿಡಿಯೋ ಚಾಟ್‌ಗಳಿಗಾಗಿ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಬ್ಯಾಟರಿ: ಈ ಫೋನ್ 5,000mAh ಬ್ಯಾಟರಿಯನ್ನು 20W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಪ್ಯಾಕ್ ಮಾಡುತ್ತದೆ.

ಕನೆಕ್ಟಿವಿಟಿ: ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS, ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಇತರೆ: ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ, ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP52 ರೇಟಿಂಗ್ ಮತ್ತು 3.5mm ಆಡಿಯೊ ಜಾಕ್ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್