Nokia C22: ಕೇವಲ 7,999 ರೂ. ಗೆ ಹೊಸ ನೋಕಿಯಾ C22 ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್ ಏನಿದೆ ನೋಡಿ

ದೇಶದಲ್ಲಿ ಬಜೆಟ್ ಬೆಲೆಗೆ ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 22 (Nokia C22) ಫೋನನ್ನು ಅನಾವರಣ ಮಾಡಿದೆ. ದರಕ್ಕೆ ತಕ್ಕಂತೆ ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​​ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ ನೋಡಿ.

Nokia C22: ಕೇವಲ 7,999 ರೂ. ಗೆ ಹೊಸ ನೋಕಿಯಾ C22 ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್ ಏನಿದೆ ನೋಡಿ
Nokia C22
Follow us
|

Updated on: May 12, 2023 | 12:50 PM

ನೋಕಿಯಾ (Nokia) ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ಭಾರತದಲ್ಲಿ ಹಿಂದಿನ ರೀತಿ ದೊಡ್ಟ ಮಟ್ಟದ ಮಾರ್ಕೆಟ್ ಇಲ್ಲ. ಒಂದು ಕಾಲದಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ, ವಿವೋ ಬ್ರ್ಯಾಂಡ್​ಗಳು ಬಂದ ಮೇಲೆ ನೋಕಿಯಾ ಮೊಬೈಲ್​ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ನೋಕಿಯಾ ಆಗಾಗ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದೀಗ ದೇಶದಲ್ಲಿ ಬಜೆಟ್ ಬೆಲೆಗೆ ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 22 (Nokia C22) ಫೋನನ್ನು ಅನಾವರಣ ಮಾಡಿದೆ. ದರಕ್ಕೆ ತಕ್ಕಂತೆ ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​​ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ ನೋಡಿ.

ಬೆಲೆ ಎಷ್ಟು?:

ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ನೋಕಿಯಾ C22 ಸ್ಮಾರ್ಟ್​ಫೋನ್ ರಿಲೀಸ್ ಆಗಿದೆ. ಇದರ 2GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 7,999 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ 8,499 ರೂ. ಇದೆ. ಈ ಫೋನ್ ನೋಕಿಯಾ ಕಂಪನಿಯ ಅಧಿಕೃತ ವೆಬ್​ಸೈಟ್ ಸೇರದಂತೆ ಕೆಲ ರಿಟೈಲ್ ಸ್ಟೋರ್​ಗಳಲ್ಲಿ ಇಂದಿನಿಂದಲೇ ಖರೀದಿಗೆ ಸಿಗುತ್ತಿದೆ.

National Technology Day: ಪೋಖ್ರಾನ್‌ನಲ್ಲಿ ಭಾರತ ಪರಮಾಣು ಪರೀಕ್ಷೆ ನಡೆಸಲು ಕಾರಣವೇನು?

ಇದನ್ನೂ ಓದಿ
Image
General Knowledge: ಕ್ಯಾಮೆರಾ ಎಂಬ ಮಾಯಾಜಾಲ ಮೊಬೈಲ್​​​ ಫೋನ್‌ ಬಲಭಾಗದಲ್ಲಿಯೇ ಇರುತ್ತದೆ ಏಕೆ?
Image
Smartphones under 12000: 12,000 ರೂ. ಒಳಗೆ ಸಿಗುತ್ತಿರುವ ಆಕರ್ಷಕ ಸ್ಮಾರ್ಟ್​ಫೋನ್​ಗಳ ಪಟ್ಟಿ ಇಲ್ಲಿದೆ ನೋಡಿ
Image
Poco F5 Pro 5G: ದೇಶದ ಗ್ಯಾಜೆಟ್ ಮಾರುಕಟ್ಟೆಗೆ ಹೊಸ ಪೋಕೊ ಫೋನ್ ಬಿಡುಗಡೆ
Image
Vivo Y78 5G: ಮಾರುಕಟ್ಟೆಗೆ ಬಜೆಟ್ ಬೆಲೆಯ ಹೊಸ ವಿವೊ Y78 5G ಸ್ಮಾರ್ಟ್​ಫೋನ್ ಎಂಟ್ರಿ

ಫೀಚರ್ಸ್ ಏನಿದೆ?:

ನೋಕಿಯಾ C22 ಸ್ಮಾರ್ಟ್‌ಫೋನ್‌ 720*1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಎಲಲ್​ಸಿಡಿ ಡಿಸ್‌ಪ್ಲೇ ಹೊಂದಿದೆ. 60Hz ರಿಫ್ರೆಶ್​ರೇಟ್ ಆಯ್ಕೆಯನ್ನು ಹೊಂದಿದೆ. ಇದು ಸ್ಪ್ಲಾಶ್ ಮತ್ತು ಧೂಳಿನ ರಕ್ಷಣೆಗಾಗಿ IP52 ಪ್ರಮಾಣೀಕೃತವಾಗಿದೆ. ಯುನಿಸಾಕ್ SC9863A ಆಕ್ಟೋ ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, IMG8322 GPU ಅನ್ನು ಒಳಗೊಂಡಿದೆ. ಈ ಮೂಲಕ ಉತ್ತಮ ಕಾರ್ಯಕ್ಷಮತೆಯನ್ನು ಪಡೆದುಕೊಳ್ಳಬಹುದಾಗಿದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕಾಣಿಸಿಕೊಂಡಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್​ಫೋನ್, ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು ಇದರಲ್ಲಿ 13 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಈ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್​ನೊಂದಿಗೆ ಹಲವಾರು ಫೀಚರ್​ಗಳನ್ನು ಹೊಂದಿದೆ.

ನೋಕಿಯಾ C22 ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹೀಗಾಗಿ ಪದೇ ಪದೇ ಚಾರ್ಜ್ ಮಾಡುವ ತೊಂದರೆ ಇರುವುದಿಲ್ಲ. ಇದರೊಂದಿಗೆ 10W ಚಾರ್ಜಿಂಗ್ ಸೌಲಭ್ಯ ಇದೆ. ಫಿಂಗರ್ ಪ್ರಿಂಟ್ ಸೆನ್ಸಾರ್ ಆಯ್ಕೆ ಇದೆ. 5ಜಿ ಬೆಂಬಲ ಪಡೆದುಕೊಂಡಿಲ್ಲ. 4G LTE, ವೈಫೈ, ಬ್ಲೂಟೂತ್, 3.5mm ಹೆಡ್​ಫೋನ್ ಜ್ಯಾಕ್, FM ರೇಡಿಯೋ ಸೇರಿದಂತೆ ಬೇಸಿಕ್ ಆಯ್ಕೆಗಳನ್ನು ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ