ನೋಕಿಯಾ (Nokia) ಕಂಪನಿಯ ಸ್ಮಾರ್ಟ್ಫೋನ್ಗಳಿಗೆ ಭಾರತದಲ್ಲಿ ಹಿಂದಿನ ರೀತಿ ದೊಡ್ಟ ಮಟ್ಟದ ಮಾರ್ಕೆಟ್ ಇಲ್ಲ. ಒಂದು ಕಾಲದಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಶವೋಮಿ (Xiaomi), ಸ್ಯಾಮ್ಸಂಗ್, ರಿಯಲ್ ಮಿ, ವಿವೋ ಬ್ರ್ಯಾಂಡ್ಗಳು ಬಂದ ಮೇಲೆ ನೋಕಿಯಾ ಮೊಬೈಲ್ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ನೋಕಿಯಾ ಆಗಾಗ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿರುತ್ತದೆ. ಇದೀಗ ದೇಶದಲ್ಲಿ ಬಜೆಟ್ ಬೆಲೆಗೆ ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 22 (Nokia C22) ಫೋನನ್ನು ಅನಾವರಣ ಮಾಡಿದೆ. ದರಕ್ಕೆ ತಕ್ಕಂತೆ ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ ನೋಡಿ.
ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ನೋಕಿಯಾ C22 ಸ್ಮಾರ್ಟ್‌ಫೋನ್ ರಿಲೀಸ್ ಆಗಿದೆ. ಇದರ 2GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ ಕೇವಲ 7,999 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ 8,499 ರೂ. ಇದೆ. ಈ ಫೋನ್ ನೋಕಿಯಾ ಕಂಪನಿಯ ಅಧಿಕೃತ ವೆಬ್ಸೈಟ್ ಸೇರದಂತೆ ಕೆಲ ರಿಟೈಲ್ ಸ್ಟೋರ್ಗಳಲ್ಲಿ ಇಂದಿನಿಂದಲೇ ಖರೀದಿಗೆ ಸಿಗುತ್ತಿದೆ.
National Technology Day: ಪೋಖ್ರಾನ್‌ನಲ್ಲಿ ಭಾರತ ಪರಮಾಣು ಪರೀಕ್ಷೆ ನಡೆಸಲು ಕಾರಣವೇನು?
ನೋಕಿಯಾ C22 ಸ್ಮಾರ್ಟ್‌ಫೋನ್ 720*1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ+ ಎಲಲ್ಸಿಡಿ ಡಿಸ್‌ಪ್ಲೇ ಹೊಂದಿದೆ. 60Hz ರಿಫ್ರೆಶ್ರೇಟ್ ಆಯ್ಕೆಯನ್ನು ಹೊಂದಿದೆ. ಇದು ಸ್ಪ್ಲಾಶ್ ಮತ್ತು ಧೂಳಿನ ರಕ್ಷಣೆಗಾಗಿ IP52 ಪ್ರಮಾಣೀಕೃತವಾಗಿದೆ. ಯುನಿಸಾಕ್ SC9863A ಆಕ್ಟೋ ಕೋರ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, IMG8322 GPU ಅನ್ನು ಒಳಗೊಂಡಿದೆ. ಈ ಮೂಲಕ ಉತ್ತಮ ಕಾರ್ಯಕ್ಷಮತೆಯನ್ನು ಪಡೆದುಕೊಳ್ಳಬಹುದಾಗಿದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕಾಣಿಸಿಕೊಂಡಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಸ್ಮಾರ್ಟ್‌ಫೋನ್, ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು ಇದರಲ್ಲಿ 13 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. ಈ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್ನೊಂದಿಗೆ ಹಲವಾರು ಫೀಚರ್ಗಳನ್ನು ಹೊಂದಿದೆ.
ನೋಕಿಯಾ C22 ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಹೀಗಾಗಿ ಪದೇ ಪದೇ ಚಾರ್ಜ್ ಮಾಡುವ ತೊಂದರೆ ಇರುವುದಿಲ್ಲ. ಇದರೊಂದಿಗೆ 10W ಚಾರ್ಜಿಂಗ್ ಸೌಲಭ್ಯ ಇದೆ. ಫಿಂಗರ್ ಪ್ರಿಂಟ್ ಸೆನ್ಸಾರ್ ಆಯ್ಕೆ ಇದೆ. 5ಜಿ ಬೆಂಬಲ ಪಡೆದುಕೊಂಡಿಲ್ಲ. 4G LTE, ವೈಫೈ, ಬ್ಲೂಟೂತ್, 3.5mm ಹೆಡ್ಫೋನ್ ಜ್ಯಾಕ್, FM ರೇಡಿಯೋ ಸೇರಿದಂತೆ ಬೇಸಿಕ್ ಆಯ್ಕೆಗಳನ್ನು ನೀಡಲಾಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ