Nokia C21: ಬಜೆಟ್ ಬೆಲೆಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 3 ಫೋನ್ ಬಿಡುಗಡೆ ಮಾಡಿದ ನೋಕಿಯಾ
ನೋಕಿಯಾ ಕಂಪನಿ ತನ್ನ ಮೂರು ಹೊಸ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಇವುಗಳನ್ನು ನೋಕಿಯಾ C2 2 ನೇ ಆವೃತ್ತಿ, ನೋಕಿಯಾ C21 ಮತ್ತು ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಇದರಲ್ಲಿ ನೋಕಿಯಾ C2 2 ನೇ ಆವೃತ್ತಿ ಮತ್ತು ನೋಕಿಯಾ C21 ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿವೆ.
ನೋಕಿಯಾ (Nokia) ಕಂಪನಿಯ ಸ್ಮಾರ್ಟ್ಫೋನ್ಗಳು ಭಾರತದಲ್ಲಿ ದೊಡ್ಟ ಮಟ್ಟದಲ್ಲಿ ಯಶಸ್ಸು ಸಾಧಿಸುತ್ತಿಲ್ಲ. ಒಂದು ಕಾಲದಲ್ಲಿ ಭಾರತದ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಶವೋಮಿ (Xiaomi), ಸ್ಯಾಮ್ಸಂಗ್, ರಿಯಲ್ ಮಿ, ವಿವೋ ಬ್ರ್ಯಾಂಡ್ಗಳು ಬಂದ ಮೇಲೆ ನೋಕಿಯಾ ಮೊಬೈಲ್ಗಳ ಬೇಡಿಕೆ ಕುಸಿಯುತ್ತಾ ಬಂತು. ಆದರೆ, ವಿದೇಶದಲ್ಲಿ ಈ ಮೊಬೈಲ್ಗೆ ಅತ್ಯುತ್ತಮ ಬೇಡಿಕೆ ಇದೆ. ಇದಕ್ಕಾಗಿ ವಿದೇಶದಲ್ಲಿ ನೋಕಿಯಾ ಆಗಾಗ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿರುತ್ತವೆ. ಇದೀಗ ಕಂಪನಿ ತನ್ನ ಮೂರು ಹೊಸ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿದೆ. ಇವುಗಳನ್ನು ನೋಕಿಯಾ C2 2 ನೇ ಆವೃತ್ತಿ, ನೋಕಿಯಾ C21 (Nokia C21) ಮತ್ತು ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಇದರಲ್ಲಿ ನೋಕಿಯಾ C2 2 ನೇ ಆವೃತ್ತಿ ಮತ್ತು ನೋಕಿಯಾ C21 ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿವೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದು ನೋಡೋಣ.
ಸದ್ಯಕ್ಕೆ ಯುರೋಪ್ ಮಾರುಕಟ್ಟೆಯಲ್ಲಿ ರಿಲೀಸ್ ಆಗಿರುವ ನೋಕಿಯಾ C2 2ನೇ ಆವೃತ್ತಿ ಸ್ಮಾರ್ಟ್‌ಫೋನ್ 5.7 ಇಂಚಿನ FWVGA ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾಟೆಕ್ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 32GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ಕ್ಯಾಮೆರಾ ಹೊಂದಿದೆ. ಇದು ಫಿಕ್ಸ್ಡ್ ಫೋಕಸ್ ಲೆನ್ಸ್ ಮತ್ತು ಎಲ್‌ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 2400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.
ನೋಕಿಯಾ C21 ಸ್ಮಾರ್ಟ್‌ಫೋನ್ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್ SC9863A SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB ಮತ್ತು 3GB RAM ಆಯ್ಕೆಗಳ್ಳನ್ನು ಹೊಂದಿದ್ದು 32GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದು ಫೀಕ್ಸ್ಡ್ ಫೋಕಸ್ ಲೆನ್ಸ್ ಮತ್ತು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 3000mAh ಬ್ಯಾಟರಿಯನ್ನು ಹೊಂದಿದೆ.
ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಯೂನಿಸೋಕ್ SC9863A SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಬೆಲೆ ಎಷ್ಟು?:
ನೋಕಿಯಾ C2 2ನೇ ಆವೃತ್ತಿಯ ಸ್ಮಾರ್ಟ್‌ಫೋನ್ ಬೆಲೆ EUR 79 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 6,700 ರೂ. ಎನ್ನಬಹುದು. ನೋಕಿಯಾ C21 ಸ್ಮಾರ್ಟ್‌ಫೋನ್ EUR 99 (ಅಂದಾಜು 8,400ರೂ) ನಲ್ಲಿ ಲಭ್ಯವಿದೆ. ಹಾಗೂ ನೋಕಿಯಾ C21 ಪ್ಲಸ್ ಸ್ಮಾರ್ಟ್‌ಫೋನ್ ಬೆಲೆ EUR 119 (ಅಂದಾಜು 10,100ರೂ)ಆಗಿದೆ. ಇದರಲ್ಲಿ ನೋಕಿಯಾ C2 2ನೇ ಆವೃತ್ತಿ ಮತ್ತು ನೋಕಿಯಾ C21 ಪ್ಲಸ್ ಫೋನ್‌ಗಳು ಏಪ್ರಿಲ್‌ನಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಭಾರತೀಯ ಮಾರುಕಟ್ಟೆಗು ಇದು ಲಗ್ಗೆಯಿಡುವ ಸಾಧ್ಯತೆ ಇದೆ.
Asus 8z: ಭಾರತದಲ್ಲಿ ಅತ್ಯಂತ ಬಲಿಷ್ಠವಾದ ಆಸುಸ್ 8z ಸ್ಮಾರ್ಟ್‌ಫೋನ್ ಬಿಡುಗಡೆ: ಬೆಲೆ ಎಷ್ಟು?
WhatsApp: ವಾಟ್ಸ್ಆ್ಯಪ್ನಲ್ಲಿ ಬರುತ್ತಿದೆ ಒಂದಲ್ಲ ಎರಡಲ್ಲ ಬರೋಬ್ಬರಿ 10 ಹೊಸ ಫೀಚರ್ಸ್: ಯಾವುವು?