Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್‌ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ
ಸದ್ದಿಲ್ಲದೆ ನೋಕಿಯಾ ಸಿ02 (Nokia C02) ಎಂಬ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಫೋನಾಗಿದ್ದು ಫೀಚರ್ಗೆ ತಕ್ಕಂತೆ ಬೆಲೆ ನಿಗದಿ ಪಡಿಸಲಾಗಿದೆ.
ಪ್ರಸಿದ್ಧ ನೋಕಿಯಾ (Nokia) ಕಂಪನಿಯ ಸ್ಮಾರ್ಟ್ಫೋನ್ಗಳು ಇಂದು ಮಾರುಕಟ್ಟೆಯಲ್ಲಿ ದೊಡ್ಟ ಮಟ್ಟದ ಯಶಸ್ಸು ಸಾಧಿಸುತ್ತಿಲ್ಲ. ಒಂದು ಕಾಲದಲ್ಲಿ ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಈಗ ಹೇಳಹೆಸರಿಲ್ಲದಂತಾಗಿದೆ. ಇತರೆ ಬ್ರ್ಯಾಂಡ್ಗಳ ಹೊಡೆತಕ್ಕೆ ಸಿಲುಕಿ ನೋಕಿಯಾ ಮೊಬೈಲ್ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಿದ್ದರೂ ಕಂಪನಿ ಆಗಾಗ ಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿರುತ್ತವೆ. ಇದೀಗ ಕಂಪನಿ ತನ್ನ C ಕ್ಯಾಟಗರಿಯಲ್ಲಿ ಹೊಸ ಮೊಬೈಲ್ ಅನ್ನು ಅನಾವರಣ ಮಾಡಿದೆ. ಸದ್ದಿಲ್ಲದೆ ನೋಕಿಯಾ ಸಿ02 (Nokia C02) ಎಂಬ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇದೊಂದು ಎಂಟ್ರಿ ಲೆವೆಲ್ ಫೋನಾಗಿದ್ದು ಫೀಚರ್ಗೆ ತಕ್ಕಂತೆ ಬೆಲೆ ನಿಗದಿ ಪಡಿಸಲಾಗಿದೆ.
ಏನಿದೆ ಫೀಚರ್ಸ್:
ನೋಕಿಯಾ C02 ಸ್ಮಾರ್ಟ್‌ಫೋನ್ FWVGA+ ರೆಸಲ್ಯೂಶನ್ ಸಾಮರ್ಥ್ಯದ 5.45 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 18:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP52 ರೇಟಿಂಗ್ ನೀಡಲಾಗಿದೆ. ಕ್ವಾಡ್ ಕೋರ್ SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಆದರೆ, ಇದು ಯಾವುದು ಎಂಬುದು ಬಹಿರಂಗವಾಗಿಲ್ಲ. ಆಂಡ್ರಾಯ್ಡ್ 12 (Go ಆವೃತ್ತಿ) ನಲ್ಲಿ ಕಾರ್ಯನಿರ್ವಹಿಸುತ್ತಿದ್ದು 2GB RAM +32GB ಇಂಟರ್ ಸ್ಟೋರೇಜ್ ಆಯ್ಕಯನ್ನು ಒಳಗೊಂಡಿದೆ. ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎಂದದು ಕಂಪನಿ ಹೇಳಿದೆ.
ಈ ಸ್ಮಾರ್ಟ್ಫೋನ್ನ ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಹಿಂಬದಿಯಲ್ಲಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಅಳವಡಿಸಲಾಗಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪೋರ್ಟ್ರೇಟ್ ಮೋಡ್, ಟೈಮ್ ಲ್ಯಾಪ್ಸ್, ಬ್ಯೂಟಿಫಿಕೇಶನ್ ಸಪೋರ್ಟ್ ಮತ್ತು ಎಲ್‌ಇಡಿ ಫ್ಲ್ಯಾಷ್ ಸೇರಿದಂತೆ ಕೆಲ ವಿಶೇಷ ಫೀಚರ್ಗಳಿವೆ.
WhatsApp Edit Message: ವಾಟ್ಸ್ಆ್ಯಪ್ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು: ಹೇಗೆ ಗೊತ್ತೇ?
3,000mAh ಸಾಮರ್ಥ್ಯದ ರಿಮೂವಬಲ್ ಬ್ಯಾಟರಿ ನೀಡಲಾಗಿದ್ದು, ಇದಕ್ಕೆ ತಕ್ಕಂತೆ 5W ಚಾರ್ಜಿಂಗ್ ಬೆಂಬಲವನ್ನು ಒಳಗೊಂಡಿದೆ. ಇದು 5Q ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ 4.2, ಮೈಕ್ರೋ-ಯುಎಸ್‌ಬಿ ಪೋರ್ಟ್ ಮತ್ತು 3.5 ಎಂಎಂ ಆಡಿಯೋ ಜ್ಯಾಕ್ ಸೇರಿದಂತೆ ಇತ್ತೀಚಿನ ಆಯ್ಕೆ ನೀಡಲಾಗಿದೆ. ಇದು ನೀವು ಮಾಸ್ಕ್ ಹಾಕಿದ್ದರೂ ಫೇಸ್ ಅನ್‌ಲಾಕಿಂಗ್ ಅನ್ನು ಬೆಂಬಲಿಸುತ್ತದಂತೆ. ನೋಕಿಯಾ C02 ಸ್ಮಾರ್ಟ್‌ಫೋನಿನ ಬೆಲೆ ಮತ್ತು ಲಭ್ಯತೆ ಕಂಪನಿ ಬಹಿರಂಗ ಪಡಿಸಿಲ್ಲ.
ನೋಕಿಯಾ ಕಂಪನಿ ಕಳೆದ ವಾರವಷ್ಟೆ ಭಾರತದಲ್ಲಿ ಎಕ್ಸ್ ಸರಣಿಯಲ್ಲಿ ಹೊಸದಾಗಿ ನೋಕಿಯಾ X30 5G ಸ್ಮಾರ್ಟ್‌ಫೋನ್ ಅನ್ನು ರಿಲೀಸ್ ಮಾಡಿತ್ತು. ಇದು 6.43 ಇಂಚಿನ ಫುಲ್ ಎಚ್ಡಿ+ ಡಿಸ್ಪ್ಲೇ ಹೊಂದಿದ್ದು, ಕ್ವಾಲ್ಕಂ ಸ್ನ್ಯಾಪ್ಡ್ರ್ಯಾಗನ್ 695 5G ಪ್ರೊಸೆಸರ್ನಿಂದ ಆವೃತ್ತವಾಗಿದೆ. ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮರಾ ಜತೆಗೆ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸರ್, 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದರ ವಿಶೇಷತೆ. 8 GB RAM ಆಯ್ಕೆ ಇದೆ. 4,200mAh ಬ್ಯಾಟರಿ ಜತೆಗೆ 33W ಫಾಸ್ಟ್ ಚಾರ್ಜಿಂಗ್ ಬೆಂಬಲವಿದೆ ಎಂದು ಕಂಪನಿ ಹೇಳಿದೆ. ನೋಕಿಯಾ X30 5G ಸ್ಮಾರ್ಟ್ಫೋನ್ಗೆ ಮೂರು ವರ್ಷಗಳವರೆಗೆ ಆ್ಯಂಡ್ರಾಯ್ಡ್ ಮತ್ತು ಭದ್ರತಾ ಅಪ್ಡೇಟ್ ಲಭ್ಯವಾಗಲಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:23 am, Sat, 25 February 23