AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೀಸ್​ಗೂ ಮುನ್ನ ರೋಚಕತೆ ಸೃಷ್ಟಿಸಿದ Nokia C30 ಸ್ಮಾರ್ಟ್​ಫೋನ್: ಪ್ರಮುಖ ಮಾಹಿತಿ ಸೋರಿಕೆ

Nokia C30 ಸ್ಮಾರ್ಟ್​ಫೋನ್ 6.82 ಇಂಚಿನ ಫುಲ್ ಹೆಚ್​ಡಿ ಪ್ಲಸ್ ಡಿಸ್ ಪ್ಲೇ ಅನ್ನು ಹೊಂದಿರಲಿದೆ. ಇದು 20.5:9 ಅನುಪಾತದೊಂದಿಗೆ ಬರಲಿದೆ.

ರಿಲೀಸ್​ಗೂ ಮುನ್ನ ರೋಚಕತೆ ಸೃಷ್ಟಿಸಿದ Nokia C30 ಸ್ಮಾರ್ಟ್​ಫೋನ್: ಪ್ರಮುಖ ಮಾಹಿತಿ ಸೋರಿಕೆ
Nokia C30
TV9 Web
| Updated By: Vinay Bhat|

Updated on: Jul 12, 2021 | 3:36 PM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆ ಇಂದು ತುಂಬಾನೆ ವಿಶಾಲವಾಗಿದೆ. ಶವೋಮಿ (Xiaomi), ಸ್ಯಾಮ್​ಸಂಗ್ (Samsung), ರಿಯಲ್ ಮಿ, ಒಪ್ಪೋ ಹೀಗೆ ಅನೇಕ ಬ್ರ್ಯಾಂಡ್​ಗಳು ಹುಟ್ಟುಕೊಂಡಿದ್ದು ಕಡಿಮೆ ಬೆಲೆಗೆ ಆಕರ್ಷಕ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿವೆ. ಚೀನಾ ಸ್ಮಾರ್ಟ್​ಫೋನ್ ಬ್ರ್ಯಾಂಡ್​ಗಳ ನಡುವೆ ತನ್ನದೇ ಆದ ವಿಶೇಷ ಸ್ಥಾನ ಉಳಿಸಿಕೊಂಡಿರುವ ನೋಕಿಯಾ (Nokia) ಕಂಪೆನಿ ಸದ್ಯ ಹೊಸ ಮೊಬೈಲ್ ಬಿಡುಗಡೆ ಮಾಡಲು ತಯಾರು ನಡೆಸುತ್ತಿದೆ.

ನೋಕಿಯಾ ಕಂಪೆನಿ Nokia C30 ಎಂಬ ಹೊಸ ಸ್ಮಾರ್ಟ್​ಫೋನನ್ನು ತಯಾರಿಸುತ್ತಿದೆ. ಆದರೆ, ಬಿಡುಗಡೆಗು ಮುನ್ನವೇ ಇದರ ಪ್ರಮುಖ ಮಾಹಿತಿಗಳು ಆನ್​ಲೈನ್​ನಲ್ಲಿ ಸೋರಿಕೆಯಾಗಿವೆ. ಲೀಕ್ ಆಗಿರುವ ಮಾಹಿತಿಯ ಪ್ರಕಾರ ಈ ಸ್ಮಾರ್ಟ್​ಫೋನಿನ ಎದುರು ಮತ್ತು ಹಿಂಭಾಗ ಗ್ರೀನ್-ವೈಟ್ ಎರಡು ಬಣ್ಣಗಳಲ್ಲಿ ಬರಲಿದೆ.

ಇನ್ನೂ ರಿಯರ್ ಕ್ಯಾಮೆರಾ ಸೆಟಪ್ ಇರಲಿದೆ ಎಂದು ಹೇಳಲಾಗಿದೆ. ಕ್ಯಾಮೆರಾ ಸರ್ಕಲ್​ನ ಆಚೆಗೆ ಫ್ಲ್ಯಾಶ್ ಅಳವಡಿಸಲಾಗಿದೆಯಂತೆ. ಫಿಂಗರ್ ಪ್ರಿಂಟ್ ಸ್ಕ್ಯಾನರ್ ಕೂಡ ನೀಡಲಾಗಿದೆ. ಇನ್ನುಳಿದಂತೆ ನೋಕಿಯಾ ಸಿ30 ಸ್ಮಾರ್ಟ್​ಫೋನಿನ ಸೋರಿಕೆಯಾದ ಮಾಹಿತಿ ಇಲ್ಲಿದೆ.

Nokia C30 ಸ್ಮಾರ್ಟ್​ಫೋನ್ 6.82 ಇಂಚಿನ ಫುಲ್ ಹೆಚ್​ಡಿ ಪ್ಲಸ್ ಡಿಸ್ ಪ್ಲೇ ಅನ್ನು ಹೊಂದಿರಲಿದೆ. ಇದು 20.5:9 ಅನುಪಾತದೊಂದಿಗೆ ಬರಲಿದೆ. hexa-core 1.60 GHz ಚಿಪ್​ಸೆಟ್​ನೊಂದಿಗೆ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದ್ದು, 3GB RAM ಆಯ್ಕೆ ಇರಲಿದೆಯಂತೆ. 64GB ಸ್ಟೋರೆಜ್ ಸಾಮರ್ಥ್ಯ ಹೊಂದಿರುವ ಸಾಧ್ಯತೆ ಇದ್ದು, ಬರೋಬ್ಬರಿ 6,000mAh ಸಾಮರ್ಥ್ಯದ ಬ್ಯಾಟರಿ ಪವರ್ ಇರಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, 13 ಮೆಗಾಫಿಕ್ಸೆಲ್​ನ ಪ್ರೈಮರಿ ರಿಯರ್ ಕ್ಯಾಮೆರಾ ಮತ್ತು ಸೆಲ್ಫಿಗಾಗಿ 5 ಮೆಗಾಫಿಕ್ಸೆಲ್​ ಕ್ಯಾಮೆರಾ ಅಳವಡಿಸಿದ್ದಾರಂತೆ. ಉಳಿದಂತೆ ಡ್ಯುಯೆಲ್ ಸಿಮ್ ಸಪೋರ್ಟ್, ವೈಫೈ, ಬ್ಯೂಟೂತ್ v4.2, ಜಿಪಿಎಸ್, ಮೈಕ್ರೊ ಯುಎಸ್​ಬಿ ಮತ್ತು 3.5mm ಹೆಡ್​ಫೋನ್ ಜ್ಯಾಕ್ ಬೆಂಬಲ ಪಡೆದುಕೊಂಡಿರಲಿದೆಯಂತೆ. ಇದರ ಬೆಲೆ 9,990 ರೂ. ಇರಬಹುದೆಂದು ಅಂದಾಜಿಸಲಾಗಿದೆ.

Flipkart ನಿಂದ ಬಂಪರ್ ಆಫರ್: ಅತಿ ಕಡಿಮೆ ಬೆಲೆಗೆ ಇಂದೇ ಖರೀದಿಸಿ ಸ್ಮಾರ್ಟ್​ಟಿವಿ: ನಾಳೆ ಕೊನೇ ದಿನ

Whatsapp: ವಾಟ್ಸ್​ಆ್ಯಪ್​ನಲ್ಲಿ ನಿಮ್ಮನ್ನು ಯಾರು ಬ್ಲಾಕ್​ ಮಾಡಿದ್ದಾರೆ ಎಂದು ತಿಳಿದುಕೊಳ್ಳುವುದು ಹೇಗೆ?

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!