Nokia T20: ಭಾರತದಲ್ಲಿ ನೋಕಿಯಾ ಸ್ಮಾರ್ಟ್​ಫೋನ್​ಗಿಲ್ಲ ಕಿಮ್ಮತ್ತು: ಇದೀಗ ಬಿಡುಗಡೆ ಮಾಡಿದೆ ಹೊಸ ಟ್ಯಾಬ್ಲೆಟ್

Nokia T20 was launched in India: ಹೊಸ ನೋಕಿಯಾ ಟ್ಯಾಬ್ಲೆಟ್ 2K ಡಿಸ್​ಪ್ಲೇ ಹೊಂದಿದೆ. 8 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಸೆನ್ಸಾರ್, 8,200mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ ಡ್ಯುಯಲ್ ಮೈಕ್ರೊಫೋನ್‌ ಮತ್ತು ಸ್ಟೀರಿಯೋ ಸ್ಪೀಕರ್‌ಗಳನ್ನು ಒಳಗೊಂಡಿದೆ.

Nokia T20: ಭಾರತದಲ್ಲಿ ನೋಕಿಯಾ ಸ್ಮಾರ್ಟ್​ಫೋನ್​ಗಿಲ್ಲ ಕಿಮ್ಮತ್ತು: ಇದೀಗ ಬಿಡುಗಡೆ ಮಾಡಿದೆ ಹೊಸ ಟ್ಯಾಬ್ಲೆಟ್
Nokia T20
Follow us
TV9 Web
| Updated By: Vinay Bhat

Updated on: Nov 02, 2021 | 3:17 PM

ನೋಕಿಯಾ (Nokia) ಕಂಪನಿಯ ಸ್ಮಾರ್ಟ್​ಫೋನ್​ಗಳು ಭಾರತದಲ್ಲಿ ದೊಡ್ಟ ಮಟ್ಟದಲ್ಲಿ ಯಶಸ್ಸು ಸಾಧಿಸುತ್ತಿಲ್ಲ. ಶವೋಮಿ (Xiaomi), ಸ್ಯಾಮ್​ಸಂಗ್ (Samsung), ರಿಯಲ್ ಮಿ (Realme) ಬ್ರ್ಯಾಂಡ್​ಗಳು ಬಂದ ಮೇಲೆ ನೋಕಿಯಾ ಮೊಬೈಲ್​ಗಳ ಬೇಡಿಕೆ ಕುಸಿಯುತ್ತಾ ಬಂತು. ಹೀಗಾಗಿ ಕಂಪನಿ ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ಸ್ಮಾರ್ಟ್‌ ಟ್ಯಾಬ್‌, ಸ್ಮಾರ್ಟ್‌ಟಿವಿ ಮೂಲಕವೂ ಗ್ರಾಹಕರ ಗಮನ ಸೆಳೆಯುತ್ತಿದೆ. ಸದ್ಯ ಇದೀಗ ಹೊಸ ಟ್ಯಾಬ್‌ ನೋಕಿಯಾ ಟಿ20 (Nokia T20 Tablet) ಅನ್ನು ದೇಶದಲ್ಲಿ ಲಾಂಚ್‌ ಮಾಡಿದೆ. ಈ ಹೊಸ ನೋಕಿಯಾ ಟ್ಯಾಬ್ಲೆಟ್ 2K ಡಿಸ್​ಪ್ಲೇ ಹೊಂದಿದೆ. 8 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಸೆನ್ಸಾರ್, 8,200mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ ಡ್ಯುಯಲ್ ಮೈಕ್ರೊಫೋನ್‌ ಮತ್ತು ಸ್ಟೀರಿಯೋ ಸ್ಪೀಕರ್‌ಗಳನ್ನು ಒಳಗೊಂಡಿದೆ.

ಭಾರತದಲ್ಲಿ ನೋಕಿಯಾ T20 ಟ್ಯಾಬ್ಲೆಟ್‌ ಆರಂಭಿಕ ಬೆಲೆ 3GB RAM ಮತ್ತು 32GB ಸ್ಟೋರೇಜ್ ಆಯ್ಕೆಯ ವೈ-ಫೈ ಒನ್ಲಿ ರೂಪಾಂತರಕ್ಕೆ 15,499 ರೂ. ಆಗಿದೆ. ಇದಲ್ಲದೆ ಈ ಟ್ಯಾಬ್ಲೆಟ್ ವೈ-ಫೈ ಒನ್ಲಿ ಮಾದರಿಯಲ್ಲಿ 4GB RAM ಮತ್ತು 32GB ಕಾನ್ಫಿಗರೇಶನ್ ಆಯ್ಕೆಗೆ 16,499 ರೂ. ನಿಗದಿ ಮಾಡಲಾಗಿದೆ. ನೋಕಿಯಾ T20 ಟ್ಯಾಬ್ಲೆಟ್‌ 4G ಮಾದರಿಯು 18,499 ರೂ. ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಟ್ಯಾಬ್ಲೆಟ್‌ ಭಾರತದಲ್ಲಿ ನೋಕಿಯಾ.com ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಗೆ ಲಬ್ಯವಾಗಲಿದೆ.

ನೋಕಿಯಾ T20 ಟ್ಯಾಬ್ಲೆಟ್‌ 2,000×1,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 10.4-ಇಂಚಿನ 2K ಇನ್-ಸೆಲ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯನ್ನು ಗಟ್ಟಿಯಾದ ಗ್ಲಾಸ್‌ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಇದು ಆಕ್ಟಾ-ಕೋರ್ ಯುನಿಸೋಕ್ ಟಿ 610SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಎರಡು ವರ್ಷಗಳ ಓಎಸ್ ಅಪ್‌ಗ್ರೇಡ್‌ಗಳು ಮತ್ತು ಮೂರು ವರ್ಷಗಳ “ಸಕಾಲಿಕ” ಭದ್ರತಾ ಅಪ್‌ಡೇಟ್‌ಗಳನ್ನು ಪಡೆಯುವ ಭರವಸೆ ಇದೆ. ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಇನ್ನು ಈ ಟ್ಯಾಬ್ಲೆಟ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾ ಹೊಂದಿದೆ. ಹಾಗೆಯೇ 5ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇನ್ನು ರಿಯರ್‌ ಕ್ಯಾಮೆರಾದಲ್ಲಿ ಎಲ್ಇಡಿ ಫ್ಲ್ಯಾಷ್ ಕೂಡ ಇದೆ. ಇದಲ್ಲದೆ, ಈ ಟ್ಯಾಬ್ಲೆಟ್ OZO ಪ್ಲೇಬ್ಯಾಕ್ ಮತ್ತು ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ನಾಯ್ಸ್‌ ಕ್ಯಾನ್ಸಲೇಶನ್‌ಗಾಗಿ ನೀವು ಡ್ಯುಯಲ್ ಮೈಕ್ರೊಫೋನ್‌ಗಳನ್ನು ಸಹ ಒಳಗೊಂಡಿದೆ.

ಬರೋಬ್ಬರಿ 8,200mAh ಬ್ಯಾಟರಿ ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್‌ v5.0, USB Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಈ ಟ್ಯಾಬ್ಲೆಟ್‌ ಎರಡು ವರ್ಷಗಳ ಉಚಿತ ಆಪರೇಟಿಂಗ್ ಸಿಸ್ಟಮ್ ಅಪ್‌ಗ್ರೇಡ್‌ಗಳನ್ನು ನೀಡುವುದಾಗಿ ಹೇಳಿದೆ.

WhatsApp: ಭಾರತೀಯರ ಎರಡು ಮಿಲಿಯನ್ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ನೀವೂ ಎಚ್ಚರ ವಹಿಸಿ

Smartphone: ನವೆಂಬರ್​ನಲ್ಲಿ ಬಿಡುಗಡೆ ಆಗಲಿವೆ ಸಾಲು ಸಾಲು ಆಕರ್ಷಕ ಸ್ಮಾರ್ಟ್​ಫೋನ್​ಗಳು: ಇಲ್ಲಿವೆ ಪಟ್ಟಿ

(Nokia T20 was launched in India the first Android tablet by Nokia brand licensee HMD Global)

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ