Nokia XR20: ಮಿಲಿಟರಿ ಗ್ರೇಡ್ ಡಿಸೈನ್ನ ನೋಕಿಯಾ XR20 ಸ್ಮಾರ್ಟ್‌ಫೋನ್ ಭಾರದಲ್ಲಿ ಖರೀದಿಗೆ ಲಭ್ಯ: ಬೆಲೆ ಎಷ್ಟು?
ಮಿಲಿಟರಿ ಗ್ರೇಡ್ ಡಿಸೈನ್, ಸ್ನಾಪ್‌ಡ್ರಾಗನ್ ಪ್ರೊಸೆಸರ್, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಇತರೆ ಫೀಚರ್ಗಳಿಂದ Nokia XR20 ಸ್ಮಾರ್ಟ್‌ಫೋನ್ ಕೂಡಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 46,999 ರೂ. ಬೆಲೆ ನಿಗದಿ ಮಾಡಲಾಗಿದೆ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಶವೋಮಿ (Xiaomi), ಸ್ಯಾಮ್ಸಂಗ್ (Samsung), ರಿಯಲ್ ಮಿ (Realme) ಮೊಬೈಲ್ಗಳ ಹೊಡೆತಕ್ಕೆ ಸಿಲುಕಿ ನೆಲಕಚ್ಚಿರುವ ನೋಕಿಯಾ ಕಂಪನಿ ಈಗೀಗ ಆಕರ್ಷಕ ಫೀಚರ್ಗಳುಳ್ಳ ಫೋನುಗಳನ್ನು ಬಿಡುಗಡೆ ಮಾಡಿ ಯಶಸ್ಸು ಸಾಧಿಸುತ್ತಿದೆ. ಈ ಪೈಕಿ ಕಳೆ ವಾರವಷ್ಟೆ ಭಾರತದಲ್ಲಿ ಹೊಸ ನೋಕಿಯಾ ಎಕ್ಸ್ಆರ್ 20 (Nokia XR20) ಸ್ಮಾರ್ಟ್‌ಫೋನ್ ಲಾಂಚ್ ಆಗಿತ್ತು. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್ ಪ್ರಮುಖವಾಗಿ 55-ಡಿಗ್ರಿಗಳಿಂದ 20-ಡಿಗ್ರಿ ಸೆಲ್ಸಿಯಸ್ ತಾಪಾಮಾನದ ನೀರಿನಲ್ಲಿದ್ದರೂ ಯಾವುದೇ ಹಾನಿಯಾಗುವುದಿಲ್ಲ. ಮಿಲಿಟರಿ ಗ್ರೇಡ್ ಡಿಸೈನ್, ಸ್ನಾಪ್‌ಡ್ರಾಗನ್ ಪ್ರೊಸೆಸರ್, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಸೇರಿದಂತೆ ಇತರೆ ಫೀಚರ್ಗಳಿಂದಲೂ ಕೂಡಿದೆ. ಈ ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಲಭ್ಯವಾಗುತ್ತಿದೆ.
ಭಾರತದಲ್ಲಿ ನೋಕಿಯಾ XR20 ಸ್ಮಾರ್ಟ್‌ಫೋನ್ ಕೇವಲ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 46,999 ರೂ. ಬೆಲೆ ನಿಗದಿ ಮಾಡಲಾಗಿದೆ. ಸದ್ಯಕ್ಕೆ ಈ ಫೋನ್ ನೋಕಿಯಾ.ಕಾಮ್ನಲ್ಲಿ ಮತ್ತು ರಿಟೇಲ್ ಸ್ಟೋರ್‌ಗಳಲ್ಲಿ ಮಾತ್ರ ಮಾರಾಟವಾಗುತ್ತಿದೆ.
ನೋಕಿಯಾ XR20 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲ ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ ಸ್ಟಾಕ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಈ ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್ ಹೊಂದಿದೆ. ಇದರಲ್ಲಿ ಸ್ಪೀಡ್‌ವಾರ್ಪ್ ಮೋಡ್‌ನೊಂದಿಗೆ ಮೊದಲೇ ಲೋಡ್ ಆಗಿದ್ದು, ಇದು ಮಾಂಟೇಜ್‌ನಲ್ಲಿ ಮಲ್ಟಿ ಈವೆಂಟ್ಸ್ ಅನ್ನು ಸೆರೆಹಿಡಿಯಲು ನಿಮಗೆ ಅನುವು ಮಾಡಿಕೊಡುತ್ತದೆ. ಜೊತೆಗೆ ಫೋನ್ ಆಕ್ಷನ್ ಕ್ಯಾಮ್ ಮೋಡ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಕ್ಯಾಮೆರಾ ಸೆಟಪ್ Zeiss ಆಪ್ಟಿಕ್ಸ್ ಅನ್ನು ಒಳಗೊಂಡಿದೆ.
4,630mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು18W ವೈರ್ಡ್ ಮತ್ತು 15W ವೈರ್‌ಲೆಸ್ (Qi ಸ್ಟ್ಯಾಂಡರ್ಡ್) ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ v5.1, ಯುಎಸ್‌ಬಿ ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ವಿಂಡ್ ನಾಯ್ಸ್ ಕ್ಯಾನ್ಸಲೇಶನ್ ಹೊಂದಿರುವ OZO ಪ್ರಾದೇಶಿಕ ಆಡಿಯೋ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ. ಇದು ವಿಡಿಯೋ ರೆಕಾರ್ಡಿಂಗ್ ಹೆಚ್ಚಿಸಲು ಸಹಾಯ ಮಾಡುತ್ತದೆ.
Galaxy M52 5G: ಸ್ಯಾಮ್ಸಂಗ್ ವೆಬ್ಸೈಟ್ನಲ್ಲಿ ದೀಪಾವಳಿಗೆ ಬಂಪರ್ ಆಫರ್: ಕೈಗೆಟಕುವ ದರದಲ್ಲಿ ಗ್ಯಾಲಕ್ಸಿ M52 5G
(Nokia XR20 Military-grade design 48MP Camera Nokia XR20 Smartphone goes on sale)