Nothing Phone (1): ಇಂದಿನಿಂದ ನಥಿಂಗ್ ಫೋನ್ (1) ಸೇಲ್ ಆರಂಭ: ಖರೀದಿಗೆ ಕ್ಯೂ ನಿಂತ ಜನರು, ಆದರೆ…
Nothing Phone (1) Sale: ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 1 (Nothing Phone (1)) ಇಂದಿನಿಂದ ಮೊದಲ ಸೇಲ್ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಮಾತ್ರ ಈ ಫೋನ್ ಇಂದು ಸಂಜೆ 7 ಗಂಟೆಯಿಂದ ಖರೀದಿಗೆ ಅವಕಾಶ ಮಾಡಿಕೊಡಲಿದೆ. ಆದರೆ,
ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿರುವ ಐಫೋನ್, ಶವೋಮಿ (Xiaomi), ಸ್ಯಾಮ್‌ಸಂಗ್ ನಂತಹ ಪ್ರಸಿದ್ಧ ಬ್ರ್ಯಾಂಡ್ಗಳಿಗೆ ನಡುಕ ಹುಟ್ಟಿಸುತ್ತಿರುವ ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 1 (Nothing Phone (1)) ಇಂದಿನಿಂದ ಮೊದಲ ಸೇಲ್ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಮಾತ್ರ ಈ ಫೋನ್ ಇಂದು ಸಂಜೆ 7 ಗಂಟೆಯಿಂದ ಖರೀದಿಗೆ ಅವಕಾಶ ಮಾಡಿಕೊಡಲಿದೆ. ಆದರೆ, ಫ್ಲಿಪ್‌ಕಾರ್ಟ್‌ನಲ್ಲಿ ಮುಂಗಡ–ಆರ್ಡರ್ ಮಾಡಿದವರಿಗೆ ಮೊದಲು ಈ ಫೋನ್ ಸಿಗಲಿದೆ. ಅಲ್ಲದೆ ಭಾರತದಲ್ಲಿ ಎಲ್ಲ ಸ್ಟೋರೇಜ್ ಆಯ್ಕೆಯ ಫೋನ್ಗಳು ಇನ್ನೂ ರಿಲೀಸ್ ಆಗಿಲ್ಲ. ಇದು ಸದ್ಯದಲ್ಲೇ ಲಭ್ಯವಾಗಲಿದೆ ಎಂದು ಕಂಪನಿ ಹೇಳಿಕೆ ನೀಡಿದೆ. ಈ ಫೋನಿನ ಹಿಂಭಾಗ ಪಾರದರ್ಶಕ ವಿನ್ಯಾಸ ಮತ್ತು ಗ್ರಾಹಕೀಯಗೊಳಿಸಬಹುದಾದ ಎಲ್‌ಇಡಿ ಲೈಟ್ ಅನ್ನು ಪಡೆದಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಮೊದಲ ಸೇಲ್ ಪ್ರಯುಕ್ತ ಈ ಫೋನ್ ಮೇಲೆ ಆಫರ್ ಕೂಡ ಘೋಷಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ ನೋಡಿ.
- ಭಾರತದಲ್ಲಿ ನಥಿಂಗ್ ಫೋನ್ (1) 8GB RAM + 128GB ಸ್ಟೋರೇಜ್ ಆಯ್ಕೆಗೆ 32,999ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ 35,999ರೂ., 12GB RAM + 256GB ಸ್ಟೋರೇಜ್ ಆಯ್ಕೆಗೆ 38,999ರೂ. ಇದೆ.
- ಆಫರ್ ಕೂಡ ನೀಡಲಾಗಿದ್ದು HDFC ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 2,000 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಆದರೆ, ಈ ಆಫರ್ ಫೋನನ್ನು ಪ್ರೀ ಆರ್ಡರ್ ಮಾಡಿಕೊಳ್ಳುವ ಗ್ರಾಹಕರಿಗೆ ಮಾತ್ರ ಆಗಿದೆ.
- ನಥಿಂಗ್ ಫೋನ್ (1) 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ನೀಡಲಾಗಿದೆ.
- ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.
- ನಥಿಂಗ್ ಫೋನ್ (1) ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ.
- ಈ ಫೋನ್ನಲ್ಲಿರುವ ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ JN1 ಸೆನ್ಸಾರ್ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್–ಆಫ್–ವ್ಯೂ ಮತ್ತು ಮ್ಯಾಕ್ರೋ ಮೋಡ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
- 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಬೆಂಬಲಿಸಲಿದೆ. ಆದರೆ, ನಥಿಂಗ್ ಫೋನ್ (1) ನೊಂದಿಗೆ ಚಾರ್ಜರ್ ನೀಡಲಾಗಿಲ್ಲ ಕೇವಲ ಟೈಪ್–ಸಿ ಚಾರ್ಜಿಂಗ್ ಕೇಬಲ್ ಲಭ್ಯ ಮಾಡಿದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್ ಮತ್ತು USB ಟೈಪ್–ಸಿ ಪೋರ್ಟ್ ಬೆಂಬಲಿಸಲಿದೆ.
ಇದನ್ನೂ ಓದಿ