Kannada News Technology Nothing Phone (1) is all set to go on open sale today on Flipkart but pre-ordered the phone will be prioritised
Nothing Phone (1): ಇಂದಿನಿಂದ ನಥಿಂಗ್ ಫೋನ್ (1) ಸೇಲ್ ಆರಂಭ: ಖರೀದಿಗೆ ಕ್ಯೂ ನಿಂತ ಜನರು, ಆದರೆ…
Nothing Phone (1) Sale: ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 1 (Nothing Phone (1)) ಇಂದಿನಿಂದ ಮೊದಲ ಸೇಲ್ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಮಾತ್ರ ಈ ಫೋನ್ ಇಂದು ಸಂಜೆ 7 ಗಂಟೆಯಿಂದ ಖರೀದಿಗೆ ಅವಕಾಶ ಮಾಡಿಕೊಡಲಿದೆ. ಆದರೆ,
Nothing phone (1)
Follow us on
ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿರುವ ಐಫೋನ್, ಶವೋಮಿ (Xiaomi), ಸ್ಯಾಮ್‌ಸಂಗ್ ನಂತಹ ಪ್ರಸಿದ್ಧ ಬ್ರ್ಯಾಂಡ್ಗಳಿಗೆ ನಡುಕ ಹುಟ್ಟಿಸುತ್ತಿರುವ ನಥಿಂಗ್ ಕಂಪನಿಯ ಚೊಚ್ಚಲ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 1(Nothing Phone (1)) ಇಂದಿನಿಂದ ಮೊದಲ ಸೇಲ್ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ ಮಾತ್ರ ಈ ಫೋನ್ ಇಂದು ಸಂಜೆ 7 ಗಂಟೆಯಿಂದ ಖರೀದಿಗೆ ಅವಕಾಶ ಮಾಡಿಕೊಡಲಿದೆ. ಆದರೆ, ಫ್ಲಿಪ್‌ಕಾರ್ಟ್‌ನಲ್ಲಿ ಮುಂಗಡ–ಆರ್ಡರ್ ಮಾಡಿದವರಿಗೆ ಮೊದಲು ಈ ಫೋನ್ ಸಿಗಲಿದೆ. ಅಲ್ಲದೆ ಭಾರತದಲ್ಲಿ ಎಲ್ಲ ಸ್ಟೋರೇಜ್ ಆಯ್ಕೆಯ ಫೋನ್ಗಳು ಇನ್ನೂ ರಿಲೀಸ್ ಆಗಿಲ್ಲ. ಇದು ಸದ್ಯದಲ್ಲೇ ಲಭ್ಯವಾಗಲಿದೆ ಎಂದು ಕಂಪನಿ ಹೇಳಿಕೆ ನೀಡಿದೆ. ಈ ಫೋನಿನ ಹಿಂಭಾಗ ಪಾರದರ್ಶಕ ವಿನ್ಯಾಸ ಮತ್ತು ಗ್ರಾಹಕೀಯಗೊಳಿಸಬಹುದಾದ ಎಲ್‌ಇಡಿ ಲೈಟ್ ಅನ್ನು ಪಡೆದಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಮೊದಲ ಸೇಲ್ ಪ್ರಯುಕ್ತ ಈ ಫೋನ್ ಮೇಲೆ ಆಫರ್ ಕೂಡ ಘೋಷಿಸಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ ನೋಡಿ.
ಭಾರತದಲ್ಲಿ ನಥಿಂಗ್ ಫೋನ್ (1) 8GB RAM + 128GB ಸ್ಟೋರೇಜ್ ಆಯ್ಕೆಗೆ 32,999ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM + 256GB ಸ್ಟೋರೇಜ್ ಆಯ್ಕೆಗೆ 35,999ರೂ., 12GB RAM + 256GB ಸ್ಟೋರೇಜ್ ಆಯ್ಕೆಗೆ 38,999ರೂ. ಇದೆ.
ಆಫರ್ ಕೂಡ ನೀಡಲಾಗಿದ್ದು HDFC ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 2,000 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಆದರೆ, ಈ ಆಫರ್ ಫೋನನ್ನು ಪ್ರೀ ಆರ್ಡರ್ ಮಾಡಿಕೊಳ್ಳುವ ಗ್ರಾಹಕರಿಗೆ ಮಾತ್ರ ಆಗಿದೆ.
ನಥಿಂಗ್ ಫೋನ್ (1) 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ನೀಡಲಾಗಿದೆ.
ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ.
ಇದನ್ನೂ ಓದಿ
ನಥಿಂಗ್ ಫೋನ್ (1) ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ.
ಈ ಫೋನ್ನಲ್ಲಿರುವ ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ JN1 ಸೆನ್ಸಾರ್ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್–ಆಫ್–ವ್ಯೂ ಮತ್ತು ಮ್ಯಾಕ್ರೋ ಮೋಡ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಬೆಂಬಲಿಸಲಿದೆ. ಆದರೆ, ನಥಿಂಗ್ ಫೋನ್ (1) ನೊಂದಿಗೆ ಚಾರ್ಜರ್ ನೀಡಲಾಗಿಲ್ಲ ಕೇವಲ ಟೈಪ್–ಸಿ ಚಾರ್ಜಿಂಗ್ ಕೇಬಲ್ ಲಭ್ಯ ಮಾಡಿದೆ.
ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್ ಮತ್ತು USB ಟೈಪ್–ಸಿ ಪೋರ್ಟ್ ಬೆಂಬಲಿಸಲಿದೆ.