AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nothing Phone 1: ಫ್ಲಿಪ್​ಕಾರ್ಟ್​​ನಲ್ಲಿ ನಥಿಂಗ್ ಫೋನ್ 1 ಪ್ರೀ ಆರ್ಡರ್​ ಆರಂಭ: ಬುಕ್ಕಿಂಗ್​ಗೆ ಭರ್ಜರಿ ಬೇಡಿಕೆ

Nothing Phone 1 Pre-order: ಈಗಾಗಲೇ ಫ್ಲಿಪ್​ಕಾರ್ಟ್​​ನಲ್ಲಿ ನಥಿಂಗ್ ಫೋನ್ (1) ಪ್ರೀ ಆರ್ಡರ್‌ ಶುರುವಾಗಿದ್ದು ಬುಕ್ ಮಾಡಬಹುದು. ಇದಕ್ಕಾಗಿ 2,000 ರೂಪಾಯಿಗಳನ್ನು ಭದ್ರತಾ ಠೇವಣಿಯಾಗಿ ಪಾವತಿಸಬೇಕಾಗುತ್ತದೆ.

Nothing Phone 1: ಫ್ಲಿಪ್​ಕಾರ್ಟ್​​ನಲ್ಲಿ ನಥಿಂಗ್ ಫೋನ್ 1 ಪ್ರೀ ಆರ್ಡರ್​ ಆರಂಭ: ಬುಕ್ಕಿಂಗ್​ಗೆ ಭರ್ಜರಿ ಬೇಡಿಕೆ
Nothing Phone (1)
TV9 Web
| Updated By: Vinay Bhat|

Updated on:Jul 03, 2022 | 1:38 PM

Share

ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿರುವ ಐಫೋನ್, ಶವೋಮಿ (Xiaomi), ಸ್ಯಾಮ್​ಸಂಗ್ ನಂತಹ ಪ್ರಸಿದ್ಧ ಬ್ರ್ಯಾಂಡ್​ಗಳಿಗೆ ಈಗ ನಡುಕ ಶುರುವಾಗಿದೆ. ಇದಕ್ಕೆ ಕಾರಣ ನಥಿಂಗ್. ಹೌದು, ಒನ್‍ ಪ್ಲಸ್‍ (OnePlus) ಕಂಪನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪನಿ ತನ್ನ ಮೊಟ್ಟ ಮೊದಲ ಸ್ಮಾರ್ಟ್​​ಫೋನ್‍ ನಥಿಂಗ್ ಫೋನ್ 1 (Nothing Phone 1) ಅನ್ನು ಹೊರತರುತ್ತಿದ್ದು, ಫೋನ್‍ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇದೀಗ ಈ ಫೋನಿನ ಬಿಡುಗಡ ದಿನಾಂಕ ಕೂಡ ಬಹಿರಂಗವಾಗಿದೆ. ಇದೇ ತಿಂಗಳು ಜುಲೈ 12 ರಂದು ರಾತ್ರಿ 8:30ಕ್ಕೆ ಈ ಸ್ಮಾರ್ಟ್​​ಫೋನ್ ಜಾಗತೀಕ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಇದಕ್ಕೂ ಮುನ್ನ ನಥಿಂಗ್‌ ಫೋನ್‌ (1) ಭಾರತದಲ್ಲಿ ಪ್ರಿ ಆರ್ಡರ್‌ ಮಾಡುವುದರ ಬಗ್ಗೆ ಸಾಕಷ್ಟು ವಿವರಗಳು ಕಾಣಿಸಿಕೊಂಡಿವೆ.

ಈ ಹೊಸ ಸ್ಮಾರ್ಟ್‌ಫೋನ್ ಆಪಲ್‌ ಐಫೋನ್‌ ಜತೆಗೆ ಸ್ಪರ್ಧಿಸಲಿದೆ ಎಂದು ಸ್ವತ: ಕಾರ್ಲ್‌ ಹೇಳಿದ್ದಾರೆ. ಚೈನೀಸ್ ಮೂಲದ ಸ್ವೀಡಿಷ್ ಇಂಟರ್ನೆಟ್ ಉದ್ಯಮಿ ಕಾರ್ಲ್ 2013 ರಲ್ಲಿ ಪೀಟ್ ಲಾವ್ ಜೊತೆಗೆ ಒನ್‌ಪ್ಲಸ್ ಕಂಪನಿ ಆರಂಭಿಸಿದ್ದರು ಮತ್ತು ಒನ್‌ಪ್ಲಸ್‌ನ ಗ್ಲೋಬಲ್ ನಿರ್ದೇಶಕರಾಗಿದ್ದರು. ಆದರೆ, ಸೆಪ್ಟೆಂಬರ್ 2020 ರಲ್ಲಿ ಸಂಸ್ಥೆಯನ್ನು ತೊರೆದು “ನಥಿಂಗ್” ಎಂಬ ಹೊಸ ಹಾರ್ಡ್‌ವೇರ್ ಉದ್ಯಮವನ್ನು ಪ್ರಾರಂಭಿಸಿದ್ದರು. ಇದೀಗ ಹೊಸ ಫೋನನ್ನೇ ಬಿಡುಗಡೆ ಮಾಡಲ ಹೊರಟಿದ್ದಾರೆ.

Whatsapp: ವಾಟ್ಸ್​ಆ್ಯಪ್​ನಲ್ಲಿ ಶಾಕಿಂಗ್ ಫೀಚರ್: ಮೆಸೇಜ್ ಡಿಲೀಟ್ ಮಾಡುವಾಗ ಸಿಗುತ್ತೆ ಹೊಸ ಆಯ್ಕೆ

ಇದನ್ನೂ ಓದಿ
Image
iQOO Neo 6: ಒನ್​ಪ್ಲಸ್ ಬಿಡುಗಡೆ ಮಾಡಿದ ಫೋನ್​ಗೆ ಬೆಚ್ಚಿಬಿದ್ದ ಐಕ್ಯೂ: ಈ ಫೋನ್​ ಬೆಲೆ ದಿಢೀರ್ ಇಳಿಕೆ
Image
Oppo Reno 8: ಭಾರತಕ್ಕೆ ಕಾಲಿಡುತ್ತಿದೆ ಕ್ಯಾಮೆರಾದಿಂದಲೇ ವಿದೇಶದಲ್ಲಿ ಧೂಳೆಬ್ಬಿಸಿದ ಒಪ್ಪೋ ರೆನೋ 8
Image
WhatsApp Ban: ವಾಟ್ಸ್​ಆ್ಯಪ್​ನಿಂದ ಶಾಕಿಂಗ್ ಸುದ್ದಿ: 19 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆ ಬ್ಯಾನ್
Image
Best Smartphones: ಭಾರತದಲ್ಲಿ ಕೇವಲ 6,000 ರೂ. ಒಳಗೆ ಲಭ್ಯವಿರುವ ಬೆಸ್ಟ್​ ಸ್ಮಾರ್ಟ್​​ಫೋನ್​ಗಳು ಇಲ್ಲಿದೆ ನೋಡಿ

ಈಗಾಗಲೇ ಬಹಿರಂಗವಾಗಿರುವ ಮಾಹಿತಿ ಪ್ರಕಾರ ನಥಿಂಗ್ ಫೋನ್ (1) ಭಾರತದಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಲಾಂಚ್‌ ಆಗಲಿದೆ. ಅದೇ ದಿನ ನಥಿಂಗ್ ಫೋನ್ (1) ಖರೀದಿಸಲು ಬಯಸುವ ಗ್ರಾಹಕರು ಫ್ಲಿಪ್‌ಕಾರ್ಟ್‌ಗೆ ಲಾಗ್‌ ಇನ್‌ ಮಾಡಿ, ನಥಿಂಗ್ ಫೋನ್ (1) ಮಾದರಿಯನ್ನು ಆಯ್ಕೆ ಮಾಡಬೇಕಾಗುತ್ತದೆ. ಅಲ್ಲದೆ ಪ್ರಿ-ಆರ್ಡರ್ ಪಾಸ್ ಪಡೆಯಲು ಭದ್ರತಾ ಠೇವಣಿ ಮೊತ್ತವನ್ನು ಕೂಡ ಪಾವತಿಸಬೇಕಾಗುತ್ತದೆ. ಈಗಾಗಲೇ ಫ್ಲಿಪ್​ಕಾರ್ಟ್​​ನಲ್ಲಿ ನಥಿಂಗ್ ಫೋನ್ (1) ಪ್ರೀ ಆರ್ಡರ್‌ ಶುರುವಾಗಿದ್ದು ಬುಕ್ ಮಾಡಬಹುದು. ಇದಕ್ಕಾಗಿ 2,000 ರೂಪಾಯಿಗಳನ್ನು ಭದ್ರತಾ ಠೇವಣಿಯಾಗಿ ಪಾವತಿಸಬೇಕಾಗುತ್ತದೆ. ನಂತರ ಈ ಹಣ ನಿಮಗೆ ಮರು ಪಾವತಿಯಾಗುತ್ತದೆ.

ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು ಆಂಡ್ರಾಯ್ಡ್ ಫೋನ್‍ ಆಗಿದ್ದು, ನಥಿಂಗ್‍ ಆಪರೇಟಿಂಗ್‍ ಸಿಸ್ಟಂ (ಓಎಸ್‍) ಹೊಂದಿರುತ್ತದೆ. ತನ್ನದೇ ಆದ ಹೊಸ ರೀತಿಯ ವಿನ್ಯಾಸ ಹೊಂದಿರಲಿದೆ. ಅಂದರೆ ನಥಿಂಗ್‍ ಇಯರ್ ಬಡ್‍ ರೀತಿ ಪಾರದರ್ಶಕ ವಿನ್ಯಾಸ ಹೊಂದಿರಲಿದೆ. ಆಂಡ್ರಾಯ್ಡ್ ಸ್ಮಾರ್ಟ್ ಫೋನ್‍ ಪ್ರಿಯರು ಬಯಸುವ ಕ್ವಾಲ್‍ ಕಾಂ ಸ್ನಾಪ್‍ ಡ್ರಾಗನ್‍ ಪ್ರೊಸೆಸರ್ ಹೊಂದಿರುತ್ತದೆ. ನಥಿಂಗ್‍ಗೆ ಕ್ವಾಲ್‍ ಕಾಂ ಕೂಡ ಹೂಡಿಕೆದಾರ ಎಂಬುದು ವಿಶೇಷ.

ಅಂತೆಯೆ ನಥಿಂಗ್ ಫೋನ್ (1) 4500mAh ಬ್ಯಾಟರಿಯನ್ನು ಬಳಸುವ ಸಾಧ್ಯತೆಯಿದೆ ಆದರೆ ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಇರುತ್ತದೆಯೇ ಅಥವಾ ಇಲ್ಲವೇ ಎಂಬ ವಿವರಗಳು ಸ್ಪಷ್ಟವಾಗಿಲ್ಲ. ಕ್ಯಾಮೆರಾಗಳು 50-ಮೆಗಾಪಿಕ್ಸೆಲ್ ಮುಖ್ಯ ಸಂವೇದಕ, 8-ಮೆಗಾಪಿಕ್ಸೆಲ್ ಸೆಕೆಂಡರಿ ಸಂವೇದಕ ಮತ್ತು 2-ಮೆಗಾಪಿಕ್ಸೆಲ್ ತೃತೀಯ ಸಂವೇದಕವನ್ನು ಒಳಗೊಂಡಿರುವ ಸಾಧ್ಯತೆಯಿದೆ. ಮುಂಭಾಗದಲ್ಲಿ, ನಥಿಂಗ್ ಫೋನ್ (1) ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 32-ಮೆಗಾಪಿಕ್ಸೆಲ್ ಕ್ಯಾಮೆರಾದೊಂದಿಗೆ ಬರುವ ಸಾಧ್ಯತೆಯಿದೆ.

ಸ್ಯಾಮ್​ಸಂಗ್​ನ ಬೆಸ್ಟ್​ ಸ್ಮಾರ್ಟ್​​ಫೋನ್ ಗ್ಯಾಲಕ್ಸಿ A53 ಬೆಲೆಯಲ್ಲಿ ಭರ್ಜರಿ ಇಳಿಕೆ

Published On - 1:37 pm, Sun, 3 July 22

ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್