Nothing Phone (1): ನಥಿಂಗ್ ಫೋನ್ 1 ಖರೀದಿಸುವವರಿಗೆ ಭಾರೀ ನಿರಾಸೆ: ಲೀಕ್ ಆದ ವಿಡಿಯೋದಲ್ಲಿ ಏನಿದೆ ನೋಡಿ

ನಥಿಂಗ್ ಫೋನ್ 1 (Nothing Phone 1) ಅನ್ನು ಹೊರತರುತ್ತಿದ್ದು, ತನ್ನ ಡಿಸೈನ್‌, ಲುಕ್ ಮೂಲಕವೇ ಸಖತ್ ಸೌಂಡ್ ಮಾಡುತ್ತಿದೆ. ಈ ಫೋನ್ ಇದೇ ತಿಂಗಳು ಜುಲೈ 12 ರಂದು ರಾತ್ರಿ 8:30ಕ್ಕೆ  ಗ್ರ್ಯಾಂಡ್‌ ಎಂಟ್ರಿ ನೀಡಲು ಸಜ್ಜಾಗಿದೆ.

Nothing Phone (1): ನಥಿಂಗ್ ಫೋನ್ 1 ಖರೀದಿಸುವವರಿಗೆ ಭಾರೀ ನಿರಾಸೆ: ಲೀಕ್ ಆದ ವಿಡಿಯೋದಲ್ಲಿ ಏನಿದೆ ನೋಡಿ
Nothing Phone 1
Follow us
TV9 Web
| Updated By: Vinay Bhat

Updated on: Jul 09, 2022 | 2:02 PM

ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿರುವ ಐಫೋನ್, ಶವೋಮಿ (Xiaomi), ಸ್ಯಾಮ್​ಸಂಗ್ ನಂತಹ ಪ್ರಸಿದ್ಧ ಬ್ರ್ಯಾಂಡ್​ಗಳಿಗೆ ಈಗ ನಡುಕ ಶುರುವಾಗಿದೆ. ಇದಕ್ಕೆ ಕಾರಣ ನಥಿಂಗ್. ಹೌದು, ಒನ್‍ ಪ್ಲಸ್‍ (OnePlus) ಕಂಪನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪನಿ ತನ್ನ ಮೊಟ್ಟ ಮೊದಲ ಸ್ಮಾರ್ಟ್​​ಫೋನ್‍ ನಥಿಂಗ್ ಫೋನ್ 1 (Nothing Phone 1) ಅನ್ನು ಹೊರತರುತ್ತಿದ್ದು, ತನ್ನ ಡಿಸೈನ್‌, ಲುಕ್ ಮೂಲಕವೇ ಸಖತ್ ಸೌಂಡ್ ಮಾಡುತ್ತಿದೆ. ಈ ಫೋನ್ ಇದೇ ತಿಂಗಳು ಜುಲೈ 12 ರಂದು ರಾತ್ರಿ 8:30ಕ್ಕೆ  ಗ್ರ್ಯಾಂಡ್‌ ಎಂಟ್ರಿ ನೀಡಲು ಸಜ್ಜಾಗಿದೆ. ಈಗಾಗಲೇ ನಥಿಂಗ್‌ ಫೋನ್‌ (1) ಭಾರತದಲ್ಲಿ ಪ್ರಿ ಆರ್ಡರ್‌ ಕೂಡ ಶುರುವಾಗಿದೆ. ಹೀಗಿರುವಾಗ ಗ್ರಾಹಕರಿಗೆ ನಿರಾಸೆಯ ಸುದ್ದಿಯೊಂದು ಹೊರಬಿದ್ದಿದೆ.

ನಥಿಂಗ್ ಫೋನ್ (1) ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಸೂಚಿಸಿರುವಂತೆ ನಥಿಂಗ್ ಫೋನ್ (1) ಸ್ಮಾರ್ಟ್​​ಫೋನ್ ಜೊತೆಗೆ ಯಾವುದೇ ಚಾರ್ಜರ್ ಬರುವುದಿಲ್ಲ ಎಂದು ಹೇಳಲಾಗಿದೆ. ಹೌದು, ನಥಿಂಗ್ ಫೋನ್ (1) ಬಾಕ್ಸ್​ನಲ್ಲಿ ಚಾರ್ಜರ್​ಗಳು ಇರುವುದಿಲ್ಲ ಎಂಬ ಸುದ್ದಿ ಇದೀಗ ಹೊರಬಿದ್ದಿದೆ. ಇದರಿಂದ ಈ ಫೋನ್ ಖರೀದಿಸಬೇಕೆಂದು ಅಂದುಕೊಂಡಿದ್ದವರು ನಿರಾಸೆಗೊಂಡಿದ್ದಾರೆ.

WhatsApp: ವಾಟ್ಸ್​ಆ್ಯಪ್​ ಆನ್​ಲೈನ್ ಸ್ಟೇಟಸ್​​ನಲ್ಲಿ ಮಹತ್ವದ ಬದಲಾವಣೆ: ಬರುತ್ತಿದೆ ಹೊಸ ಫೀಚರ್

ಇದನ್ನೂ ಓದಿ
Image
Realme C35: ಭಾರತದಲ್ಲಿ ರಿಯಲ್ ಮಿ C35 6GB, 128GB ಸ್ಟೋರೆಜ್ ಬಿಡುಗಡೆ: ಇದು ಬಜೆಟ್ ಬೆಲೆಯ ಬೆಸ್ಟ್​ ಫೋನ್
Image
Amazon Prime Day Sale 2022: ಅಮೆಜಾನ್​ನಿಂದ ಬಹುನಿರೀಕ್ಷಿತ ಪ್ರೈಮ್ ಡೇ ಸೇಲ್ ಘೋಷಣೆ: ಯಾವಾಗ?, ಏನು ಆಫರ್?
Image
Infinix Note 12 5G: ಭಾರತದಲ್ಲಿ ಇನ್ಫಿನಿಕ್ಸ್​ನಿಂದ ನೋಟ್‌ 12 ಸರಣಿಯ 5G ಆವೃತ್ತಿ ಇಂದು ಬಿಡುಗಡೆ
Image
OnePlus TV 50 Y1S Pro: ಹೊಸ ಟಿವಿ ಬೇಕಿದ್ದರೆ ಇಂದೇ ನೋಡಿ: ಮೊದಲ ಸೇಲ್​ನಲ್ಲಿ ಒನ್‌ ಪ್ಲಸ್​ನ ಈ ಟಿವಿಗೆ ಭರ್ಜರಿ ರೆಸ್ಪಾನ್ಸ್

ಇನ್ನು ಈಗಾಗಲೇ ಬಹಿರಂಗವಾಗಿರುವ ಮಾಹಿತಿ ಪ್ರಕಾರ ನಥಿಂಗ್ ಫೋನ್ (1) ಭಾರತದಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಲಾಂಚ್‌ ಆಗಲಿದೆ. ಅದೇ ದಿನ ನಥಿಂಗ್ ಫೋನ್ (1) ಖರೀದಿಸಲು ಬಯಸುವ ಗ್ರಾಹಕರು ಫ್ಲಿಪ್‌ಕಾರ್ಟ್‌ಗೆ ಲಾಗ್‌ ಇನ್‌ ಮಾಡಿ, ನಥಿಂಗ್ ಫೋನ್ (1) ಮಾದರಿಯನ್ನು ಆಯ್ಕೆ ಮಾಡಬೇಕಾಗುತ್ತದೆ. ಅಲ್ಲದೆ ಪ್ರಿ-ಆರ್ಡರ್ ಪಾಸ್ ಪಡೆಯಲು ಭದ್ರತಾ ಠೇವಣಿ ಮೊತ್ತವನ್ನು ಕೂಡ ಪಾವತಿಸಬೇಕಾಗುತ್ತದೆ. ಈಗಾಗಲೇ ಫ್ಲಿಪ್​ಕಾರ್ಟ್​​ನಲ್ಲಿ ನಥಿಂಗ್ ಫೋನ್ (1) ಪ್ರೀ ಆರ್ಡರ್‌ ಶುರುವಾಗಿದ್ದು ಬುಕ್ ಮಾಡಬಹುದು. ಇದಕ್ಕಾಗಿ 2,000 ರೂಪಾಯಿಗಳನ್ನು ಭದ್ರತಾ ಠೇವಣಿಯಾಗಿ ಪಾವತಿಸಬೇಕಾಗುತ್ತದೆ. ನಂತರ ಈ ಹಣ ನಿಮಗೆ ಮರು ಪಾವತಿಯಾಗುತ್ತದೆ.

ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು ಆಂಡ್ರಾಯ್ಡ್ ಫೋನ್‍ ಆಗಿದ್ದು, ನಥಿಂಗ್‍ ಆಪರೇಟಿಂಗ್‍ ಸಿಸ್ಟಂ (ಓಎಸ್‍) ಹೊಂದಿರುತ್ತದೆ. ತನ್ನದೇ ಆದ ಹೊಸ ರೀತಿಯ ವಿನ್ಯಾಸ ಹೊಂದಿರಲಿದೆ. ಅಂದರೆ ನಥಿಂಗ್‍ ಇಯರ್ ಬಡ್‍ ರೀತಿ ಪಾರದರ್ಶಕ ವಿನ್ಯಾಸ ಹೊಂದಿರಲಿದೆ. ಆಂಡ್ರಾಯ್ಡ್ ಸ್ಮಾರ್ಟ್ ಫೋನ್‍ ಪ್ರಿಯರು ಬಯಸುವ ಕ್ವಾಲ್‍ ಕಾಂ ಸ್ನಾಪ್‍ ಡ್ರಾಗನ್‍ ಪ್ರೊಸೆಸರ್ ಹೊಂದಿರುತ್ತದೆ. ನಥಿಂಗ್‍ಗೆ ಕ್ವಾಲ್‍ ಕಾಂ ಕೂಡ ಹೂಡಿಕೆದಾರ ಎಂಬುದು ವಿಶೇಷ.

ಅಂತೆಯೆ ನಥಿಂಗ್ ಫೋನ್ (1) 4500mAh ಬ್ಯಾಟರಿಯನ್ನು ಬಳಸುವ ಸಾಧ್ಯತೆಯಿದೆ ಆದರೆ ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಇರುತ್ತದೆಯೇ ಅಥವಾ ಇಲ್ಲವೇ ಎಂಬ ವಿವರಗಳು ಸ್ಪಷ್ಟವಾಗಿಲ್ಲ. ಕ್ಯಾಮೆರಾಗಳು 50-ಮೆಗಾಪಿಕ್ಸೆಲ್ ಮುಖ್ಯ ಸಂವೇದಕ, 8-ಮೆಗಾಪಿಕ್ಸೆಲ್ ಸೆಕೆಂಡರಿ ಸಂವೇದಕ ಮತ್ತು 2-ಮೆಗಾಪಿಕ್ಸೆಲ್ ತೃತೀಯ ಸಂವೇದಕವನ್ನು ಒಳಗೊಂಡಿರುವ ಸಾಧ್ಯತೆಯಿದೆ. ಮುಂಭಾಗದಲ್ಲಿ, ನಥಿಂಗ್ ಫೋನ್ (1) ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 32-ಮೆಗಾಪಿಕ್ಸೆಲ್ ಕ್ಯಾಮೆರಾದೊಂದಿಗೆ ಬರುವ ಸಾಧ್ಯತೆಯಿದೆ. ಭಾರತದಲ್ಲಿ ಈ ಫೋನಿನ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 30,000 ರೂ. ಒಳಗಡೆ ಇರಬಹುದು ಎಂದು ಅಂದಾಜಿಸಲಾಗಿದೆ.

Infinix Note 12 5G: ಭಾರತದಲ್ಲಿ 108MP ಕ್ಯಾಮೆರಾದ ಹೊಸ ಫೋನ್ ಬಿಡುಗಡೆ: ಬೆಲೆ ಕೇವಲ 17,999 ರೂ.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ