ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿರುವ ಐಫೋನ್, ಶವೋಮಿ (Xiaomi), ಸ್ಯಾಮ್ಸಂಗ್ ನಂತಹ ಪ್ರಸಿದ್ಧ ಬ್ರ್ಯಾಂಡ್ಗಳಿಗೆ ಈಗ ನಡುಕ ಶುರುವಾಗಿದೆ. ಇದಕ್ಕೆ ಕಾರಣ ನಥಿಂಗ್. ಹೌದು, ಒನ್ ಪ್ಲಸ್ (OnePlus) ಕಂಪನಿಯ ಸಹಸ್ಥಾಪಕ ಕಾರ್ಲ್ ಪೇ ಒಡೆತನದ ನಥಿಂಗ್ ಕಂಪನಿ ತನ್ನ ಮೊಟ್ಟ ಮೊದಲ ಸ್ಮಾರ್ಟ್ಫೋನ್ ನಥಿಂಗ್ ಫೋನ್ 1 (Nothing Phone 1) ಅನ್ನು ಹೊರತರುತ್ತಿದ್ದು, ತನ್ನ ಡಿಸೈನ್, ಲುಕ್ ಮೂಲಕವೇ ಸಖತ್ ಸೌಂಡ್ ಮಾಡುತ್ತಿದೆ. ಈ ಫೋನ್ ಇದೇ ತಿಂಗಳು ಜುಲೈ 12 ರಂದು ರಾತ್ರಿ 8:30ಕ್ಕೆ ಗ್ರ್ಯಾಂಡ್ ಎಂಟ್ರಿ ನೀಡಲು ಸಜ್ಜಾಗಿದೆ. ಈಗಾಗಲೇ ನಥಿಂಗ್ ಫೋನ್ (1) ಭಾರತದಲ್ಲಿ ಪ್ರಿ ಆರ್ಡರ್ ಕೂಡ ಶುರುವಾಗಿದೆ. ಹೀಗಿರುವಾಗ ಗ್ರಾಹಕರಿಗೆ ನಿರಾಸೆಯ ಸುದ್ದಿಯೊಂದು ಹೊರಬಿದ್ದಿದೆ.
ನಥಿಂಗ್ ಫೋನ್ (1) ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಸೂಚಿಸಿರುವಂತೆ ನಥಿಂಗ್ ಫೋನ್ (1) ಸ್ಮಾರ್ಟ್ಫೋನ್ ಜೊತೆಗೆ ಯಾವುದೇ ಚಾರ್ಜರ್ ಬರುವುದಿಲ್ಲ ಎಂದು ಹೇಳಲಾಗಿದೆ. ಹೌದು, ನಥಿಂಗ್ ಫೋನ್ (1) ಬಾಕ್ಸ್ನಲ್ಲಿ ಚಾರ್ಜರ್ಗಳು ಇರುವುದಿಲ್ಲ ಎಂಬ ಸುದ್ದಿ ಇದೀಗ ಹೊರಬಿದ್ದಿದೆ. ಇದರಿಂದ ಈ ಫೋನ್ ಖರೀದಿಸಬೇಕೆಂದು ಅಂದುಕೊಂಡಿದ್ದವರು ನಿರಾಸೆಗೊಂಡಿದ್ದಾರೆ.
WhatsApp: ವಾಟ್ಸ್ಆ್ಯಪ್ ಆನ್ಲೈನ್ ಸ್ಟೇಟಸ್ನಲ್ಲಿ ಮಹತ್ವದ ಬದಲಾವಣೆ: ಬರುತ್ತಿದೆ ಹೊಸ ಫೀಚರ್
ಇನ್ನು ಈಗಾಗಲೇ ಬಹಿರಂಗವಾಗಿರುವ ಮಾಹಿತಿ ಪ್ರಕಾರ ನಥಿಂಗ್ ಫೋನ್ (1) ಭಾರತದಲ್ಲಿ ಫ್ಲಿಪ್‌ಕಾರ್ಟ್ ಮೂಲಕ ಲಾಂಚ್ ಆಗಲಿದೆ. ಅದೇ ದಿನ ನಥಿಂಗ್ ಫೋನ್ (1) ಖರೀದಿಸಲು ಬಯಸುವ ಗ್ರಾಹಕರು ಫ್ಲಿಪ್‌ಕಾರ್ಟ್‌ಗೆ ಲಾಗ್ ಇನ್ ಮಾಡಿ, ನಥಿಂಗ್ ಫೋನ್ (1) ಮಾದರಿಯನ್ನು ಆಯ್ಕೆ ಮಾಡಬೇಕಾಗುತ್ತದೆ. ಅಲ್ಲದೆ ಪ್ರಿ-ಆರ್ಡರ್ ಪಾಸ್ ಪಡೆಯಲು ಭದ್ರತಾ ಠೇವಣಿ ಮೊತ್ತವನ್ನು ಕೂಡ ಪಾವತಿಸಬೇಕಾಗುತ್ತದೆ. ಈಗಾಗಲೇ ಫ್ಲಿಪ್ಕಾರ್ಟ್ನಲ್ಲಿ ನಥಿಂಗ್ ಫೋನ್ (1) ಪ್ರೀ ಆರ್ಡರ್ ಶುರುವಾಗಿದ್ದು ಬುಕ್ ಮಾಡಬಹುದು. ಇದಕ್ಕಾಗಿ 2,000 ರೂಪಾಯಿಗಳನ್ನು ಭದ್ರತಾ ಠೇವಣಿಯಾಗಿ ಪಾವತಿಸಬೇಕಾಗುತ್ತದೆ. ನಂತರ ಈ ಹಣ ನಿಮಗೆ ಮರು ಪಾವತಿಯಾಗುತ್ತದೆ.
ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು ಆಂಡ್ರಾಯ್ಡ್ ಫೋನ್ ಆಗಿದ್ದು, ನಥಿಂಗ್ ಆಪರೇಟಿಂಗ್ ಸಿಸ್ಟಂ (ಓಎಸ್) ಹೊಂದಿರುತ್ತದೆ. ತನ್ನದೇ ಆದ ಹೊಸ ರೀತಿಯ ವಿನ್ಯಾಸ ಹೊಂದಿರಲಿದೆ. ಅಂದರೆ ನಥಿಂಗ್ ಇಯರ್ ಬಡ್ ರೀತಿ ಪಾರದರ್ಶಕ ವಿನ್ಯಾಸ ಹೊಂದಿರಲಿದೆ. ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಪ್ರಿಯರು ಬಯಸುವ ಕ್ವಾಲ್ ಕಾಂ ಸ್ನಾಪ್ ಡ್ರಾಗನ್ ಪ್ರೊಸೆಸರ್ ಹೊಂದಿರುತ್ತದೆ. ನಥಿಂಗ್‍ಗೆ ಕ್ವಾಲ್ ಕಾಂ ಕೂಡ ಹೂಡಿಕೆದಾರ ಎಂಬುದು ವಿಶೇಷ.
ಅಂತೆಯೆ ನಥಿಂಗ್ ಫೋನ್ (1) 4500mAh ಬ್ಯಾಟರಿಯನ್ನು ಬಳಸುವ ಸಾಧ್ಯತೆಯಿದೆ ಆದರೆ ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಇರುತ್ತದೆಯೇ ಅಥವಾ ಇಲ್ಲವೇ ಎಂಬ ವಿವರಗಳು ಸ್ಪಷ್ಟವಾಗಿಲ್ಲ. ಕ್ಯಾಮೆರಾಗಳು 50-ಮೆಗಾಪಿಕ್ಸೆಲ್ ಮುಖ್ಯ ಸಂವೇದಕ, 8-ಮೆಗಾಪಿಕ್ಸೆಲ್ ಸೆಕೆಂಡರಿ ಸಂವೇದಕ ಮತ್ತು 2-ಮೆಗಾಪಿಕ್ಸೆಲ್ ತೃತೀಯ ಸಂವೇದಕವನ್ನು ಒಳಗೊಂಡಿರುವ ಸಾಧ್ಯತೆಯಿದೆ. ಮುಂಭಾಗದಲ್ಲಿ, ನಥಿಂಗ್ ಫೋನ್ (1) ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 32-ಮೆಗಾಪಿಕ್ಸೆಲ್ ಕ್ಯಾಮೆರಾದೊಂದಿಗೆ ಬರುವ ಸಾಧ್ಯತೆಯಿದೆ. ಭಾರತದಲ್ಲಿ ಈ ಫೋನಿನ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 30,000 ರೂ. ಒಳಗಡೆ ಇರಬಹುದು ಎಂದು ಅಂದಾಜಿಸಲಾಗಿದೆ.
Infinix Note 12 5G: ಭಾರತದಲ್ಲಿ 108MP ಕ್ಯಾಮೆರಾದ ಹೊಸ ಫೋನ್ ಬಿಡುಗಡೆ: ಬೆಲೆ ಕೇವಲ 17,999 ರೂ.